ಮುಂಬೈ: 200 ನೇ ಐಪಿಎಲ್ ಪಂದ್ಯವನ್ನಾಡುತ್ತಿರುವ ಪಂಜಾಬ್ ಕಿಂಗ್ಸ್ ತಂಡದ ಆರಂಭಿಕ ಬ್ಯಾಟರ್ ಶಿಖರ್ ಧವನ್ ಐಪಿಎಲ್ ಇತಿಹಾಸದಲ್ಲಿ ವಿರಾಟ್ ಕೊಹ್ಲಿ ನಂತರ 6000 ರನ್ ಪೂರೈಸಿದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಸೋಮವಾರ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 2 ರನ್ಗಳಿಸುತ್ತಿದ್ದಂತೆ ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ 6 ಸಾವಿರ ಗಡಿ ದಾಟಿದರು. ಕಳೆದ ಆವೃತ್ತಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದಲ್ಲಿದ್ದ ಅವರನ್ನು ಈ ಬಾರಿಯ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡ 8 ಕೋಟಿ ರೂ, ನೀಡಿ ಖರೀದಿಸಿತ್ತು.
ವಿರಾಟ್ ಕೊಹ್ಲಿ ತಮ್ಮ 196ನೇ ಪಂದ್ಯದಲ್ಲಿ ಈ ಮೈಲಿಗಲ್ಲನ್ನು ಸ್ಥಾಪಿಸಿದ್ದರು. ಧವನ್ ತಮ್ಮ 200ನೇ ಪಂದ್ಯದಲ್ಲಿ ಈ ಸಾಧನೆಗೆ ಪಾತ್ರರಾಗಿದ್ದಾರೆ. ಒಟ್ಟಾರೆ ಎಡಗೈ ಬ್ಯಾಟರ್ 199 ಇನ್ನಿಂಗ್ಸ್ಗಳಲ್ಲಿ 2 ಶತಕ ಮತ್ತು 45 ಅರ್ಧಶತಕಗಳ ಸಹಿತ 6000+ ರನ್ಗಳಿಸಿದ್ದಾರೆ. ವಿರಾಟ್ ಕೊಹ್ಲಿ 207 ಇನ್ನಿಂಗ್ಸ್ಗಳಿಂದ 6,402 ರನ್ಗಳಿಸಿ ಐಪಿಎಲ್ ಗರಿಷ್ಠ ಸ್ಕೋರರ್ ಎನಿಸಿಕೊಂಡಿದ್ದಾರೆ.
ಟಿ-20 ಕ್ರಿಕೆಟ್ನಲ್ಲಿ 9000 ರನ್:ಇನ್ನು ಇದೇ ಪಂದ್ಯದಲ್ಲಿ ಟೀಮ್ ಇಂಡಿಯಾ ಓಪನರ್ 9000 ರನ್ಪೂರ್ಣಗೊಳಿಸಿದ್ದಾರೆ. ಈ ಮೂಲಕ ಟಿ-20 ಕ್ರಿಕೆಟ್ನಲ್ಲಿ ಗರಿಷ್ಠ ರನ್ಗಳಿಸಿದ 3ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ 10,392, ರೋಹಿತ್ ಶರ್ಮಾ 10,048 ರನ್ಗಳಿಸಿದ್ದಾರೆ.
ಇದನ್ನೂ ಓದಿ:ತಮಗಿಂತ 28 ವರ್ಷದ ಕಿರಿಯಳೊಂದಿಗೆ 2ನೇ ವಿವಾಹವಾಗಲಿದ್ದಾರೆ 66 ವರ್ಷದ ಮಾಜಿ ಕ್ರಿಕೆಟಿಗ ಅರುಣ್ ಲಾಲ್