ETV Bharat / sports

IND vs SA 5th T20: ಕೊನೆಯ ಪಂದ್ಯದಲ್ಲೂ ಟಾಸ್​ ಗೆದ್ದ ಆಫ್ರಿಕಾ ಬೌಲಿಂಗ್​ ಆಯ್ಕೆ, ಗೆದ್ದವರಿಗೆ ಸರಣಿ - ಟಾಸ್​ ಗೆದ್ದ ದಕ್ಷಿಣ ಆಫ್ರಿಕಾ

ಬೆಂಗಳೂರಿನಲ್ಲಿ ನಡೆಯುವ ಐದನೇ ಮತ್ತು ಕೊನೆಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಟಾಸ್​ ಗೆದ್ದು, ಫೀಲ್ಡಿಂಗ್​ ಆಯ್ದುಕೊಂಡಿದೆ. ಪಂದ್ಯ ಗೆದ್ದು ಸರಣಿ ಜಯಕ್ಕೆ ಉಭಯ ತಂಡಗಳು ಸೆಣಸಾಡಲಿವೆ.

IND vs SA 5th T20
IND vs SA 5th T20
author img

By

Published : Jun 19, 2022, 7:06 PM IST

ಬೆಂಗಳೂರು: ಉಭಯ ತಂಡಗಳಿಗೂ ಫೈನಲ್​ ಪಂದ್ಯವಾಗಿರುವ 5ನೇ ಟಿ-20 ಯಲ್ಲಿ ದಕ್ಷಿಣ ಆಫ್ರಿಕಾ ಟಾಸ್​ ಗೆದ್ದು ಬೌಲಿಂಗ್​ ಆಯ್ದುಕೊಂಡಿದೆ. ಗಾಯಗೊಂಡ ತೆಂಬ ಬವುಮಾ ಬದಲಾಗಿ ಈ ಪಂದ್ಯದಲ್ಲಿ ನಾಯಕತ್ವ ವಹಿಸಿಕೊಂಡಿರುವ ಸ್ಪಿನ್ನರ್​ ಕೇಶವ್​ ಮಹಾರಾಜ್​​ ಕೂಡ ಐದನೇ ಪಂದ್ಯದಲ್ಲೂ ಟಾಸ್​ ಗೆದ್ದು ಫೀಲ್ಡಿಂಗ್​ ಪಡೆದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯ ಉಭಯ ತಂಡಗಳಿಗೆ ಫೈನಲ್ ಕದನವಾಗಿದೆ. 5 ಪಂದ್ಯಗಳ ಸರಣಿಯಲ್ಲಿ 2-2 ರಲ್ಲಿ ಸಮಬಲ ಸಾಧಿಸಿದ್ದು, ಇಲ್ಲಿ ಗೆಲ್ಲುವ ತಂಡ ಸರಣಿ ಜಯಿಸಲಿದೆ.

ದಕ್ಷಿಣ ಆಫ್ರಿಕಾ ತಂಡದಲ್ಲಿ ಬದಲಾವಣೆ: ಕಳೆದ ಪಂದ್ಯದಲ್ಲಿ ಬ್ಯಾಟಿಂಗ್​ ವೇಳೆ ಗಾಯಗೊಂಡಿದ್ದ ನಾಯಕ ತೆಂಬ ಬವುಮಾ, ಸ್ಪಿನ್ನರ್​ ಶಂಶಿ, ಜನಶೇನ್​ ಬದಲಾಗಿ, ಟ್ರಿಸ್ಟಾನ್ ಸ್ಟಬ್ಸ್, ಆನ್ರಿಚ್ ನಾರ್ಟ್ಜೆ, ರೀಜಾ ಹೆಂಡ್ರಿಕ್ಸ್ ಸ್ಥಾನ ಪಡೆದಿದ್ದಾರೆ. ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ.

ತಂಡ ಇಂತಿದೆ: ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ರಾಸ್ಸಿ ವ್ಯಾನ್ ಡೆರ್ ಡುಸೆನ್​, ಡೇವಿಡ್ ಮಿಲ್ಲರ್, ಹೆನ್ರಿಕ್ ಕ್ಲಾಸೆನ್, ಟ್ರಿಸ್ಟಾನ್ ಸ್ಟಬ್ಸ್, ಡ್ವೇನ್ ಪ್ರಿಟೋರಿಯಸ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್(ನಾಯಕ), ಲುಂಗಿ ಎನ್‌ಗಿಡಿ, ಆನ್ರಿಚ್ ನಾರ್ಟ್ಜೆ.

ಭಾರತ: ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್(ನಾಯಕ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯಜುವೇಂದ್ರ ಚಹಲ್, ಆವೇಶ್ ಖಾನ್.

ಓದಿ; ಭಾರತ-ದ.ಆಫ್ರಿಕಾ ಕ್ರಿಕೆಟ್‌ ಮ್ಯಾಚ್‌: ಬೆಂಗಳೂರಿನಲ್ಲಿ ರಸ್ತೆ ಸಂಚಾರ ಬದಲಾವಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.