ಜೋಹನ್ಸ್ಬರ್ಗ್: ಭಾರತದ ವಿರುದ್ಧ ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಯಲ್ಲಿ ಕೊನೆಯ ಎರಡು ಪಂದ್ಯಗಳಿಂದ ದಕ್ಷಿಣ ಆಫ್ರಿಕಾದ ವಿಕೆಟ್ ಕೀಪರ್ ಬ್ಯಾಟರ್ ಕ್ವಿಂಟನ್ ಡಿಕಾಕ್ ಹೊರಗುಳಿಯುವ ಸಾಧ್ಯತೆಯಿದೆ. ಜನವರಿಯ ಮೊದಲ ವಾರದಲ್ಲಿ ಮೊದಲ ಮಗುವಿಗೆ ಜನ್ಮ ನೀಡಲಿರುವ ಪತ್ನಿ ಜೊತೆಗಿರಲು ಡಿಕಾಕ್ ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ವಿಷಯವನ್ನು ದಕ್ಷಿಣ ಆಫ್ರಿಕಾ ಆಯ್ಕೆಗಾರ ವಿಕ್ಟನ್ ಎಂಪಿತ್ಸಂಗ್ ಸೋಮವಾರ ಖಚಿತಪಡಿಸಿದ್ದಾರೆ. ಡಿಕಾಕ್ ಅನುಪಸ್ಥಿತಿ ಖಂಡಿತ ಹರಿಣ ಪಡೆ ಸ್ಪೆಷಲಿಸ್ಟ್ ವಿಕೆಟ್ ಕೀಪರ್ ಮತ್ತು ಮಧ್ಯಮ ಕ್ರಮಾಂಕದ ಬ್ಯಾಟರ್ ಸೇವೆಯನ್ನು ಕಳೆದುಕೊಳ್ಳಲಿದೆ.
ದಕ್ಷಿಣ ಆಫ್ರಿಕಾ ಭಾರತ ತಂಡಕ್ಕೆ 3 ಟೆಸ್ಟ್ ಪಂದ್ಯ ಮತ್ತು 3 ಏಕದಿನ ಪಂದ್ಯಗಳಿಗೆ ಆತಿಥ್ಯ ನೀಡಲಿದೆ. ಮೊದಲ ಟೆಸ್ಟ್ ಪಂದ್ಯ ಸೆಂಚುರಿಯನ್ನಲ್ಲಿ ಡಿಸೆಂಬರ್ 26ರಿಂದ, 2ನೇ ಟೆಸ್ಟ್ ಜೋಹನ್ಸ್ ಬರ್ಗ್ನಲ್ಲಿ ಜನವರಿ 3 ರಿಂದ ಮತ್ತು ಕೊನೆಯ ಟೆಸ್ಟ್ ಪಂದ್ಯ ಕೇಪ್ಟೌನ್ನಲ್ಲಿ ಜನವರಿ 11ರಿಂದ ನಡೆಯಲಿದೆ.
ಭಾರತ ತಂಡದ ಉಪನಾಯಕ ರೋಹಿತ್ ಶರ್ಮಾ ಕೂಡ ಈ ಟೆಸ್ಟ್ ಸರಣಿಯಿಂದ ಹೊರಬಿದ್ದಿದ್ದಾರೆ. ಅವರು ಹ್ಯಾಮ್ಸ್ಟ್ರಿಂಗ್ ಗಾಯದ ಕಾರಣ ಪ್ರವಾಸದಿಂದ ಹೊರಬಿದ್ದಿದ್ದಾರೆ.
ಇದನ್ನೂ ಓದಿ: ಕೊಹ್ಲಿ - ರೋಹಿತ್ ವಿವಾದ: ಬ್ರೇಕ್ ತೆಗೆದುಕೊಳ್ಳುತ್ತಿರುವ ಸಮಯ ಸರಿಯಲ್ಲ: ಅಜರುದ್ದೀನ್