ETV Bharat / sports

ಕೆಕೆಆರ್​ ಪ್ಲೇ ಆಫ್​ ಕನಸಿಗೆ ಭಂಗ ತರುವುದೇ ಸನ್​ರೈಸರ್ಸ್​ ಹೈದರಾಬಾದ್​?

ಆಲ್​ರೌಂಡರ್​ ಆ್ಯಂಡ್ರೆ ರಸೆಲ್ ಮತ್ತು ಲಾಕಿ ಫರ್ಗುಸನ್​ ಗಾಯಕ್ಕೆ ಒಳಗಾಗಿದ್ದಾರೆ. ಹಾಗಾಗಿ ಇಂದಿನ ಪಂದ್ಯದಲ್ಲೂ ಆಡುವುದು ಅನುಮಾನವಾಗಿದೆ. ಶಕಿಬ್​ ಅಲ್ ಹಸನ್​ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

author img

By

Published : Oct 3, 2021, 4:10 PM IST

SRH aim to dent KKR's play-off prospects
ಸನ್​ರೈಸರ್ಸ್​ ಹೈದರಾಬಾದ್​ vs ಕೋಲ್ಕತ್ತಾ ನೈಟ್​ ರೈಡರ್ಸ್​

ದುಬೈ: ಪ್ಲೇ ಆಫ್​ ರೇಸ್​ನಿಂದ ಹೊರಬಿದ್ದಿರುವ ಸನ್​ರೈಸರ್ಸ್​ ಹೈದರಾಬಾದ್​ ತಂಡ ಇಂದು ಕೆಕೆಆರ್​ ವಿರುದ್ಧ ಸೆಣಸಾಡಲಿದೆ. ಈ ಪಂದ್ಯ ಕೆಕೆಆರ್​ ಪಾಲಿಗೆ ಅತ್ಯಂತ ಮಹತ್ವದ್ದಾಗಲಿದ್ದು, ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಕೆಕೆಆರ್​ ಆಡಿರುವ 12 ಪಂದ್ಯಗಳಲ್ಲಿ 5 ಜಯ, 7 ಸೋಲುಗಳೊಂದಿಗೆ 4ನೇ ಸ್ಥಾನದಲ್ಲಿದೆ. ಇಷ್ಟೇ ಜಯ ಮತ್ತು ಸೋಲು ಕಂಡಿರುವ ಮುಂಬೈ, ಕೆಕೆಆರ್​, ರಾಜಸ್ಥಾನ್​ ತಂಡಗಳು ಸಹಾ ಪ್ಲೇ ಆಫ್​ನ 4ನೇ ಸ್ಥಾನಕ್ಕಾಗಿ ಸ್ಪರ್ಧೆಯಲ್ಲಿವೆ. ಒಂದು ವೇಳೆ ಈ ಪಂದ್ಯದಲ್ಲಿ ಸೋಲು ಕಂಡರೆ ಕೋಲ್ಕತ್ತಾ ಪ್ಲೇ ಆಫ್​ ಕನಸು ಇತರೆ ತಂಡಗಳ ಫಲಿತಾಂಶದ ಮೇಲೆ ಅವಲಂಬಿತವಾಗಿರುತ್ತದೆ.

ಸನ್​ರೈಸರ್ಸ್​ ಹೈದರಾಬಾದ್​ ಆಡಿರುವ 11 ಪಂದ್ಯಗಳಲ್ಲಿ 9 ಸೋಲು ಹಾಗೂ 2 ಗೆಲುವಿನೊಂದಿಗೆ ಕೊನೆಯ ಸ್ಥಾನದಲ್ಲಿದೆ. ಈ ಪಂದ್ಯಗಳ ಗೆಲುವು ಸೋಲು ತಂಡಕ್ಕೆ ಯಾವುದೇ ಬದಲಾವಣೆ ತರುವುದಿಲ್ಲ.

ಆಲ್​ರೌಂಡರ್​ ಆ್ಯಂಡ್ರೆ ರಸೆಲ್ ಮತ್ತು ಲಾಕಿ ಫರ್ಗುಸನ್​ ಗಾಯಕ್ಕೆ ಒಳಗಾಗಿದ್ದಾರೆ. ಹಾಗಾಗಿ ಇಂದಿನ ಪಂದ್ಯದಲ್ಲೂ ಆಡುವುದು ಅನುಮಾನವಾಗಿದೆ. ಶಕಿಬ್​ ಅಲ್ ಹಸನ್​ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಹಾಗಾಗಿ ಬೆಂಚ್​ ಕಾದಿರುವ ಆಟಗಾರರಿಗೆ ಅವಕಾಶ ಮಾಡಿಕೊಟ್ಟು ಅವರ ಬೆಳವಣಿಗೆಗೆ ಸಹಕಾರಿಯಾಗುವ ಉದ್ದೇಶವನ್ನು ಹೊಂದಿದೆ.

ಮುಖಾಮುಖಿ

ಎರಡೂ ತಂಡಗಳು 20 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಕೋಲ್ಕತ್ತಾ ನೈಟ್​ ರೈಡರ್ಸ್​ 13 ರಲ್ಲಿ ಮತ್ತು ಹೈದರಾಬಾದ್​ 7ರಲ್ಲಿ ಜಯಸಾಧಿಸಿವೆ.

ಕೋಲ್ಕತ್ತಾ ನೈಟ್​ ರೈಡರ್ಸ್​: ಶುಭಮನ್ ಗಿಲ್, ವೆಂಕಟೇಶ್ ಅಯ್ಯರ್, ರಾಹುಲ್ ತ್ರಿಪಾಠಿ, ಇಯಾನ್ ಮಾರ್ಗನ್ (ನಾಯಕ), ನಿತೀಶ್ ರಾಣಾ, ದಿನೇಶ್ ಕಾರ್ತಿಕ್ (ವಿಕೀ), ಟಿಮ್ ಸೀಫರ್ಟ್/ಶಕೀಬ್ ಅಲ್ ಹಸನ್, ಸುನೀಲ್ ನರೈನ್, ಶಿವಂ ಮಾವಿ, ಟಿಮ್ ಸೌಥಿ, ವರುಣ್ ಚಕ್ರವರ್ತಿ

ಸನ್​ರೈಸರ್ಸ್​ ಹೈದರಾಬಾದ್​: ಜೇಸನ್ ರಾಯ್, ವೃದ್ಧಿಮಾನ್ ಸಹಾ (ವಿಕೀ), ಕೇನ್ ವಿಲಿಯಮ್ಸನ್ (ನಾಯಕ), ಪ್ರಿಯಂ ಗರ್ಗ್, ಅಭಿಷೇಕ್ ಶರ್ಮಾ, ಅಬ್ದುಲ್ ಸಮದ್, ಜೇಸನ್ ಹೋಲ್ಡರ್, ರಶೀದ್ ಖಾನ್, ಭುವನೇಶ್ವರ್ ಕುಮಾರ್, ಸಿದ್ದಾರ್ಥ್ ಕೌಲ್, ಸಂದೀಪ್ ಶರ್ಮಾ

ಇದನ್ನು ಓದಿ:IPL​ನಲ್ಲಿ ಚೊಚ್ಚಲ ಶತಕ ಸಿಡಿಸಿ ಮಿಂಚಿದ ಯಂಗ್ ಪ್ಲೇಯರ್ ಗಾಯಕ್ವಾಡ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.