ದುಬೈ: ಭಾರತದ ಬ್ಯಾಟರ್ ಸೂರ್ಯಕುಮಾರ್ ಯಾದವ್ ಐಸಿಸಿ ನೂತನವಾಗಿ ಬಿಡುಗಡೆ ಮಾಡಿದ ಟಿ20 ಶ್ರೇಯಾಂಕ ಪಟ್ಟಿಯಲ್ಲಿ ಅಂಕ ಕಳೆದುಕೊಂಡರೂ ನಂಬರ್ 1 ಸ್ಥಾನದಲ್ಲೇ ಮುಂದುವರಿದಿದ್ದಾರೆ. ವಿಶ್ವಕಪ್ನಲ್ಲಿ ಬಿರುಸಿನ ಬ್ಯಾಟ್ ಮಾಡಿದ ಯಾದವ್ 3 ಅರ್ಧಶತಕ ಸೇರಿ 59.75 ರ ಸರಾಸರಿಯಲ್ಲಿ 239 ರನ್ ಗಳಿಸಿದ್ದರು. ಸೆಮಿಫೈನಲ್ ಪಂದ್ಯದಲ್ಲಿ 14 ರನ್ಗೆ ಔಟಾಗಿ ನಿರಾಸೆ ಮೂಡಿಸುವ ಮೂಲಕ 10 ಅಂಕ ಕಳೆದುಕೊಂಡಿದ್ದಾರೆ.
ಸೂರ್ಯಕುಮಾರ್ ವಿಶ್ವಕಪ್ ವೇಳೆ ಪಾಕಿಸ್ತಾನದ ಮೊಹಮದ್ ರಿಜ್ವಾನ್ರನ್ನು ಹಿಂದಿಕ್ಕಿ 869 ಅಂಕಗಳೊಂದಿಗೆ ನಂಬರ್ 1 ಸ್ಥಾನಕ್ಕೇರಿ ಜೀವನಶ್ರೇಷ್ಠ ಸಾಧನೆ ಮಾಡಿದ್ದರು. 839 ಅಂಕ ಹೊಂದಿರುವ ಪಾಕಿಸ್ತಾನದ ಮೊಹಮದ್ ರಿಜ್ವಾನ್ 2 ನೇ ಸ್ಥಾನದಲ್ಲಿದ್ದಾರೆ. ಬಾಬರ್ ಅಜಂ ಮೂರರಲ್ಲಿದ್ದಾರೆ.
ಇನ್ನು, ಸೂರ್ಯಕುಮಾರ್ ಹೊರತುಪಡಿಸಿ ಅಗ್ರ 10 ರಲ್ಲಿ ಭಾರತದ ಯಾವೊಬ್ಬ ಬ್ಯಾಟರ್ ಕೂಡ ಸ್ಥಾನ ಪಡೆದಿಲ್ಲ. ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ 11ನೇ ಸ್ಥಾನದಲ್ಲಿದ್ದು, ಕೆಎಲ್ ರಾಹುಲ್, ರೋಹಿತ್ ಶರ್ಮಾ ಕ್ರಮವಾಗಿ 17, 18 ನೇ ಶ್ರೇಯಾಂಕದಲ್ಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಶ್ರೀಲಂಕಾದ ವನಿಂದು ಹಸರಂಗ ಟಾಪ್ ಬೌಲರ್ ಆಗಿದ್ದಾರೆ. ಆಲ್ರೌಂಡರ್ ವಿಭಾಗದಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಅಗ್ರಸ್ಥಾನ ಪಡೆದರೆ, ಭಾರತದ ತಾರಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಾ 3ನೇ ಸ್ಥಾನದಲ್ಲಿದ್ದಾರೆ.
ಓದಿ: ಐಪಿಎಲ್ 2023: ಚೆನ್ನೈ ತಂಡಕ್ಕೆ ಮಹೇಂದ್ರ ಸಿಂಗ್ ದೋನಿ ನಾಯಕನಾಗಿ ಘೋಷಣೆ