ನವದೆಹಲಿ: ಗಾಯಗೊಂಡಿರುವ ವೇಗಿ ದೀಪಕ್ ಚಹರ್ ಮತ್ತು ಬ್ಯಾಟರ್ ಸೂರ್ಯಕುಮಾರ್ ಯಾದವ್ ಶ್ರೀಲಂಕಾ ವಿರುದ್ಧದ ಟಿ-20 ಸರಣಿಯಿಂದ ಹೊರಗುಳಿದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಟಿ-20 ಪಂದ್ಯದಲ್ಲಿ ಫೀಲ್ಡಿಂಗ್ ಮಾಡುವ ವೇಳೆ ಸೂರ್ಯಕುಮಾರ್ ಯಾದವ್ ಗಾಯಗೊಂಡರೆ, ಬೌಲಿಂಗ್ ವೇಳೆ ದೀಪಕ್ ಚಹರ್ ಸ್ನಾಯು ಸೆಳೆತಕ್ಕೆ ಒಳಗಾಗಿದ್ದರು. ಇಬ್ಬರೂ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಯ ಪುನಶ್ಚೇತನ ಶಿಬಿರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.
-
🚨 UPDATE 🚨: Deepak Chahar and Suryakumar Yadav ruled out of @Paytm #INDvSL T20I Series. #TeamIndia
— BCCI (@BCCI) February 23, 2022 " class="align-text-top noRightClick twitterSection" data="
More Details 🔽
">🚨 UPDATE 🚨: Deepak Chahar and Suryakumar Yadav ruled out of @Paytm #INDvSL T20I Series. #TeamIndia
— BCCI (@BCCI) February 23, 2022
More Details 🔽🚨 UPDATE 🚨: Deepak Chahar and Suryakumar Yadav ruled out of @Paytm #INDvSL T20I Series. #TeamIndia
— BCCI (@BCCI) February 23, 2022
More Details 🔽
ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯನ್ನು 3-0 ಅಂತರದಲ್ಲಿ ವಶಪಡಿಸಿಕೊಂಡ ಭಾರತ, ಗುರುವಾರದಿಂದ ಪ್ರಾರಂಭವಾಗುವ ಶ್ರೀಲಂಕಾ ವಿರುದ್ಧದ ಸರಣಿಯನ್ನೂ ಜಯಿಸುವ ಉತ್ಸಾಹದಲ್ಲಿದೆ.
ಅಲ್ಲದೇ, ಶ್ರೀಲಂಕಾ ವಿರುದ್ಧದ ಸರಣಿಯಲ್ಲಿ ಬ್ಯಾಟಿಂಗ್ ಕಿಂಗ್ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ರಿಷಬ್ ಪಂತ್ ಮತ್ತು ಬೌಲರ್ ಶಾರ್ದೂಲ್ ಠಾಕೂರ್ ಅವರಿಗೆ ವಿಶ್ರಾಂತಿ ನೀಡಲಾಗಿದ್ದು, ಋತುರಾಜ್ ಗಾಯಕ್ವಾಡ್ ಮತ್ತು ಶ್ರೇಯಸ್ ಅಯ್ಯರ್ಗೆ ಅವಕಾಶ ನೀಡಲಾಗಿದೆ.
ಶ್ರೀಲಂಕಾ ಸರಣಿಗೆ ಭಾರತದ ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಸಂಜು ಸ್ಯಾಮ್ಸನ್, ಇಶಾನ್ ಕಿಶನ್ (ವಿಕೆಟ್-ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಹೂಡಾ, ರವೀಂದ್ರ ಜಡೇಜಾ, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಮೌಹ್ದ್ ಯಾದವ್, ಸಿರಾಜ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಅವೇಶ್ ಖಾನ್.
ಇದನ್ನೂ ಓದಿ: ಏರ್ಥಿಂಗ್ ಮಾಸ್ಟರ್ಸ್ ಟೂರ್ನಿಯಿಂದ ಹೊರಬಿದ್ದ ಲಿಟ್ಲ್ ಗ್ರ್ಯಾಂಡ್ ಮಾಸ್ಟರ್ ಪ್ರಜ್ಞಾನಂದ್