ದುಬೈ: ನಿನ್ನೆ ನಡೆದ ಕ್ವಾಲಿಫೈಯರ್ 1 ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ದೆಹಲಿ ವಿರುದ್ಧ 57 ರನ್‌ಗಳ ಜಯ ಸಾಧಿಸಿದೆ.
ಐಪಿಎಲ್‌ನಲ್ಲಿ 6ನೇ ಬಾರಿ ಮುಂಬೈ ಇಂಡಿಯನ್ಸ್ ತಂಡ ಫೈನಲ್ ತಲುಪಿದೆ.
ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಜಸ್ಪ್ರೀತ್ ಬುಮ್ರಾ ಹಾಗೂ ಟ್ರೆಂಟ್ ಬೌಲ್ಟ್ ಅವರ ಅದ್ಭುತ ಬೌಲಿಂಗ್ ನೆರವಿನಿಂದ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 57 ರನ್ಗಳಿಂದ ಮಣಿಸಿ ಫೈನಲ್ ಪ್ರವೇಶಿಸಿದೆ.
ಈ ಪಂದ್ಯದಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ತೋರಿದ ಯಾರ್ಕರ್ ಸ್ಪೆಷಲಿಸ್ಟ್ ಬುಮ್ರಾ 4 ಓವರ್ಗಳಲ್ಲಿ 14 ರನ್ ನೀಡಿ 4 ವಿಕೆಟ್ ಪಡೆದರು.
ಟ್ರೆಂಟ್ ಬೌಲ್ಟ್ 2 ಓವರ್ಗಳಲ್ಲಿ 9 ರನ್ ನೀಡಿ 2 ವಿಕೆಟ್ ಪಡೆದರು. ಪಾಂಡ್ಯ ಮತ್ತು ಪೊಲಾರ್ಡ್ ತಲಾ ಒಂದು ವಿಕೆಟ್ ಪಡೆದು ಗೆಲುವಿನ ರೂವಾರಿಯಾದರು.
ಇದಕ್ಕು ಮುನ್ನ ಬ್ಯಾಟಿಂಗ್ ನಡೆಸಿದ್ದ ಮುಂಬೈ ತಂಡಕ್ಕೆ ಡಿಕಾಕ್ 40, ಸೂರ್ಯಕುಮಾರ್ ಯಾದವ್ 51, ಇಶಾನ್ ಕಿಶನ್ 55, ಹಾರ್ದಿಕ್ ಪಾಂಡ್ಯ 37 ರನ್ಗಳಿಸಿ 200 ರನ್‌ಗಳ ಬೃಹತ್ ಮೊತ್ತಕ್ಕೆ ಕಾರಣರಾಗಿದ್ದರು.
ಮುಂಬೈ ಈ ಪಂದ್ಯವನ್ನು ಗೆಲ್ಲುವುದರ ಮೂಲಕ ಐಪಿಎಲ್ ಇತಿಹಾಸದಲ್ಲಿ 6ನೇ ಬಾರಿಗೆ ಫೈನಲ್ ಪ್ರವೇಶಿಸಿದೆ.
ಈ ಹಿಂದಿನ 5 ಫೈನಲ್ಗಳಲ್ಲಿ 4 ಬಾರಿ ಪ್ರಶಸ್ತಿ ಎತ್ತಿ ಹಿಡಿದಿರುವ ಮುಂಬೈ 2010 ರಲ್ಲಿ ಚೆನ್ನೈ ವಿರುದ್ಧ ಸೋಲುಕಂಡು ರನ್ನರ್ ಅಪ್ ಆಗಿತ್ತು.