ETV Bharat / sports

T20 World Cup: ಇಂಗ್ಲೆಂಡ್, ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯ ಆಡಲಿದೆ ಭಾರತ

ಟಿ-20 ವಿಶ್ವಕಪ್ ಪಂದ್ಯಾವಳಿಯ ಅರ್ಹತಾ ಸುತ್ತಿನಲ್ಲಿ ಭಾಗವಹಿಸುವ ಎಲ್ಲ ಎಂಟು ತಂಡಗಳ ಮೊದಲ ಅಭ್ಯಾಸ ಪಂದ್ಯಗಳು ಅಕ್ಟೋಬರ್ 12ರಂದು ಆರಂಭಗೊಂಡಿವೆ. ಪ್ರತಿ ತಂಡವು ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿವೆ.

t20-wc-india-to-square-off-against-england-australia-in-warm-up-matches
T20 world Cup: ಇಂಗ್ಲೆಂಡ್, ಆಸ್ಟ್ರೇಲಿಯಾ ವಿರುದ್ಧ ಅಭ್ಯಾಸ ಪಂದ್ಯ ಆಡಲಿದೆ ಭಾರತ
author img

By

Published : Oct 13, 2021, 5:01 AM IST

ದುಬೈ : ಐಸಿಸಿ ಟಿ-20 ವಿಶ್ವಕಪ್ 2021ರ ಭಾಗವಹಿಸುವ ತಂಡಗಳ ನಡುವೆ ಒಟ್ಟು 16 ಅಭ್ಯಾಸ ಪಂದ್ಯಗಳು ನಡೆಯಲಿವೆ. ಅಬುಧಾಬಿ ಮತ್ತು ದುಬೈನಲ್ಲಿ ನಡೆಯುವ ಈ ಎಲ್ಲ ಪಂದ್ಯಗಳಿಗೆ ಪ್ರೇಕ್ಷಕರಿಗೆ ಅವಕಾಶವಿಲ್ಲ. ಟೂರ್ನಿಗೆ ಸಿದ್ಧತೆ ಕೈಗೊಳ್ಳುವ ನಿಟ್ಟಿನಲ್ಲಿ ಟೀಂ ಇಂಡಿಯಾ ಎರಡು ಅಭ್ಯಾಸ ಪಂದ್ಯಗಳಲ್ಲಿ ಭಾಗಿಯಾಗಲಿದೆ.

ಭಾರತವು ಅಕ್ಟೋಬರ್ 18ರಂದು ದುಬೈನಲ್ಲಿ ಇಂಗ್ಲೆಂಡ್ ವಿರುದ್ಧ ಮತ್ತು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 20ರಂದು ದುಬೈನಲ್ಲಿ ಅಭ್ಯಾಸ ಪಂದ್ಯಗಳನ್ನಾಡಲಿದೆ. ಇಂಗ್ಲೆಂಡ್​ ತಂಡವು ಭಾರತವಲ್ಲದೆ, ನ್ಯೂಜಿಲ್ಯಾಂಡ್ ವಿರುದ್ಧವೂ ಕೂಡ ಅಭ್ಯಾಸ ಪಂದ್ಯಗಳಲ್ಲಿ ಕಣಕ್ಕಿಳಿಯಲಿದೆ. ಅದರಂತೆ ಆಸ್ಟ್ರೇಲಿಯಾವು ಇನ್ನೊಂದು ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡ್​​ನ್ನು ಎದುರಿಸಲಿದೆ.

ಪಾಕಿಸ್ತಾನವು ಅಭ್ಯಾಸ ಪಂದ್ಯಗಳಲ್ಲಿ ವೆಸ್ಟ್ ಇಂಡೀಸ್ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಹೋರಾಡಲಿದೆ. 16 ಅಭ್ಯಾಸ ಪಂದ್ಯಗಳಲ್ಲಿ 8 ಮ್ಯಾಚ್​ಗಳು ಸ್ಟಾರ್‌ನಲ್ಲಿ ಪ್ರಸಾರವಾಗಲಿದ್ದು, ಐಸಿಸಿಯ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳಲ್ಲಿ ಪಂದ್ಯಗಳ ಹೈಲೈಟ್ಸ್​ ಲಭ್ಯವಿರಲಿವೆ.

ಪಂದ್ಯಾವಳಿಯ ಅರ್ಹತಾ ಸುತ್ತಿನಲ್ಲಿ ಭಾಗವಹಿಸುವ ಎಲ್ಲ ಎಂಟು ತಂಡಗಳ ಮೊದಲ ಅಭ್ಯಾಸ ಪಂದ್ಯಗಳು ಅಕ್ಟೋಬರ್ 12ರಂದು ಆರಂಭಗೊಂಡಿವೆ. ಪ್ರತಿ ತಂಡವು ಎರಡು ಅಭ್ಯಾಸ ಪಂದ್ಯಗಳನ್ನು ಆಡಲಿವೆ.

ಎರಡನೇ ಸುತ್ತಿನ ಅಭ್ಯಾಸ ಪಂದ್ಯಗಳು ಅಕ್ಟೋಬರ್ 18ರಂದು ಆರಂಭವಾಗಲಿದ್ದು, ಅ. 20ರಂದು ಮುಕ್ತಾಯಗೊಳ್ಳುತ್ತವೆ. ಇಲ್ಲಿ ಸೂಪರ್ 12 ಹಂತದಲ್ಲಿರುವ ಎಂಟು ತಂಡಗಳು ತಲಾ ಎರಡು ಅಭ್ಯಾಸ ಪಂದ್ಯಗಳಲ್ಲಿ ಭಾಗವಹಿಸಲಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.