ದುಬೈ : ಟಿ 20 ವಿಶ್ವಕಪ್ 2021ರ ಸೂಪರ್ 12 ಸುತ್ತಿನ ಎರಡನೇ ದಿನವಾದ ಇಂದು ಮೊದಲ ಪಂದ್ಯದಲ್ಲಿ ಶ್ರಿಲಂಕಾ ಹಾಗೂ ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗುತ್ತಿವೆ. ಶಾರ್ಜಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಈ ಹಿಂದೆ 5 ಪಂದ್ಯಗಳಲ್ಲಿ ಉಭಯ ತಂಡಗಳು ಮುಖಾಮುಖಿಯಾಗಿದ್ದು, 5ರಲ್ಲಿ ಬಾಂಗ್ಲಾ ತಂಡ ಮೂರರಲ್ಲಿ ಜಯ ಸಾಧಿಸಿದೆ. ಇಂದಿನ ಪಂದ್ಯದಲ್ಲಿ ಎರಡು ತಂಡಗಳು ಸಮಬಲದಿಂದ ಕೂಡಿದ್ದು, ಯಾವ ತಂಡ ವಿಜಯ ಮಾಲೆ ಹಾಕಿ ಕೊಳ್ಳುತ್ತದೆ ಎಂದು ಕಾದು ನೋಡಬೇಕಿದೆ.
ತಂಡಗಳು :
ಶ್ರೀಲಂಕಾ : ದಾಸುನ್ ಶನಕ (ನಾಯಕ), ಕುಸಾಲ್ ಪೆರೇರಾ, ಪಾತುಮ್ ನಿಸಾಂಕ, ಚರಿತ್ ಅಸಲಂಕ, ಆವಿಷ್ಕಾ ಫೆರ್ನಾಂಡೊ, ಭಾನುಕಾ ರಾಜಪಕ್ಷೆ, ಚಮಿಕ ಕರುಣರತ್ನೆ, ವನಿಂಡು ಹಸರಂಗ, ದುಷ್ಮಂತ ಚಮೀರಾ, ಲಹಿರು ಕುಮಾರ, ಬಿನೂರ ಫರ್ನಾಂಡೊ.
ಬಾಂಗ್ಲಾದೇಶ : ಮೊಹಮ್ಮದ್ ನೈಮ್, ಲಿಟನ್ ದಾಸ್, ಶಕೀಬ್ ಅಲ್ ಹಸನ್, ಮುಷ್ಫಿಕರ್ ರಹೀಮ್, ಮಹ್ಮದುಲ್ಲಾ (ನಾಯಕ), ಅಫೀಫ್ ಹೊಸೇನ್, ನೂರುಲ್ ಹಸನ್ (ವಿ.ಕೆ.), ಮಹೇದಿ ಹಸನ್, ಮೊಹಮ್ಮದ್ ಸೈಫುದ್ದೀನ್, ನಸುಮ್ ಅಹ್ಮದ್, ಮುಸ್ತಫಿಜುರ್ ರೆಹಮಾನ್.