ಮೆಲ್ಬೋರ್ನ್: ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಂತಿಮ ಹಣಾಹಣಿ ಇಂದು ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಪಾಕಿಸ್ತಾನದ ವಿರುದ್ಧ ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಕ್ಷೇತ್ರರಕ್ಷಣೆ ಆಯ್ದುಕೊಂಡಿದೆ.
ಟೂರ್ನಿಯ ಸೆಮೀಸ್ಗಳಲ್ಲಿ ಪಾಕ್ ತಂಡ ನ್ಯೂಜಿಲೆಂಡ್ಗೆ ಸೋಲುಣಿಸಿದರೆ, ಇಂಗ್ಲೆಂಡ್ ಪಡೆಯು ಭಾರತವನ್ನು ಮಣಿಸಿ ಫೈನಲ್ ಪ್ರವೇಶಿಸಿವೆ. ಈಗಾಗಲೇ ತಲಾ ಒಮ್ಮೆ ಪ್ರಶಸ್ತಿ ಗೆದ್ದಿರುವ ಉಭಯ ತಂಡಗಳ ನಡುವೆ ಸಮಬಲದ ಹೋರಾಟದ ನಿರೀಕ್ಷೆ ಎಲ್ಲರಲ್ಲಿದೆ. ವಿಶೇಷವೆಂದರೆ ಮೆಲ್ಬೋರ್ನ್‌ನ ಐತಿಹಾಸಿಕ ಅಂಗಳದಲ್ಲಿ ಇಂಗ್ಲೆಂಡ್ ಮತ್ತು ಪಾಕಿಸ್ತಾನ ತಂಡಗಳೆರಡೂ ಸಹ ಇದುವರೆಗೂ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನೇ ಗೆದ್ದಿಲ್ಲ. ಆದರೀಗ ಯಾವುದಾದರೂ ತಂಡ ಗೆದ್ದು ಗೆಲುವಿನ ಖಾತೆ ತೆರೆಯಲಿದೆ.
ಅಲ್ಲದೆ, ಪಾಕಿಸ್ತಾನ ತಂಡಕ್ಕೆ ಇಂಗ್ಲೆಂಡ್ ವಿರುದ್ಧ 30 ವರ್ಷಗಳ ಹಿಂದಿನ ವಿಜಯವನ್ನು ಪುನರಾವರ್ತಿಸುವ ಅವಕಾಶವಿದೆ. 1992ರಲ್ಲಿ ಮೆಲ್ಬೋರ್ನ್ನಲ್ಲಿ ನಡೆದ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಪಾಕ್ ತಂಡ ಆಂಗ್ಲರನ್ನು ಮಣಿಸಿ ಪ್ರಶಸ್ತಿಗೆ ಮುತ್ತಿಕ್ಕಿತ್ತು. ಅಂದು ಇಮ್ರಾನ್ ಖಾನ್ ಬಳಗ ಮಾಡಿದ್ದ ಸಾಧನೆಯನ್ನು ಇಂದಿನ ಬಾಬರ್ ಪಡೆ ಪುನರಾವರ್ತಿಸುತ್ತದೆಯೇ ಎಂಬ ಕುತೂಹಲ ಎಲ್ಲರಲ್ಲಿದೆ.
ಟಿ20 ವಿಶ್ವಕಪ್ ಇತಿಹಾಸದಲ್ಲಿಎರಡೂ ತಂಡಗಳು ತಲಾ ಒಂದು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿವೆ. 2009ರಲ್ಲಿ ಪಾಕಿಸ್ತಾನವು ಶ್ರೀಲಂಕಾ ಮಣಿಸಿದ್ದರೆ, 2010 ವಿಶ್ವಕಪ್ನಲ್ಲಿ ಇಂಗ್ಲೆಂಡ್ ತಂಡವು ಆಸ್ಟ್ರೇಲಿಯಾ ಸೋಲಿಸಿ ಪ್ರಶಸ್ತಿ ಗೆದ್ದಿತ್ತು.
11ರ ಬಳಗ: ಪಾಕಿಸ್ತಾನ: ಬಾಬರ್ ಆಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿ.ಕೀ), ಮೊಹಮ್ಮದ್ ಹ್ಯಾರಿಸ್, ಶಾನ್ ಮಸೂದ್, ಇಫ್ತಿಕರ್ ಅಹ್ಮದ್, ಶದಾಬ್ ಖಾನ್, ಮೊಹಮ್ಮದ್ ನವಾಜ್, ಮೊಹಮ್ಮದ್ ವಾಸಿಮ್ ಜೂನಿಯರ್, ನಸೀಮ್ ಶಾ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಇಂಗ್ಲೆಂಡ್: ಜೋಸ್ ಬಟ್ಲರ್ (ನಾಯಕ & ವಿ.ಕೀ), ಅಲೆಕ್ಸ್ ಹೇಲ್ಸ್, ಫಿಲಿಪ್ ಸಾಲ್ಟ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಸ್ಯಾಮ್ ಕರನ್, ಕ್ರಿಸ್ ವೋಕ್ಸ್, ಕ್ರಿಸ್ ಜೋರ್ಡನ್, ಆದಿಲ್ ರಶೀದ್
ಇದನ್ನೂ ಓದಿ: ಪಾಕ್ ಬೌಲರ್ಗಳು ಭಾರತದಂತಲ್ಲ, ಇಂಗ್ಲೆಂಡ್ಗೆ ವಾಕ್ಓವರ್ ಸಿಗುವುದಿಲ್ಲ: ಶೋಯಬ್ ಅಖ್ತರ್ ವ್ಯಂಗ್ಯ