ದುಬೈ: ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನಕ್ಕಾಗಿ ಕೌಂಟ್ ಡೌನ್ ಶುರುವಾಗಿದೆ. ಆಗಸ್ಟ್ 27 ರಿಂದ ಟಿ-20 ಟೂರ್ನಿ ಶುರುವಾಗಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಶ್ರೀಲಂಕಾ ಹಾಗೂ ಅಫ್ಘಾನಿಸ್ತಾನ್ ತಂಡಗಳು ಮುಖಾಮುಖಿಯಾಗಲಿವೆ. ಭಾರತ ಮತ್ತು ಪಾಕಿಸ್ತಾನದ ನಡುವಣ ಹೈವೋಲ್ಟೇಜ್ ಪಂದ್ಯ ಆಗಸ್ಟ್ 28 ರಂದು ನಡೆಯಲಿದ್ದು, ದುಬೈ ತಲುಪಿರುವ ಬ್ಲೂ ಬಾಯ್ಸ್ ನೆಟ್ಸ್ನಲ್ಲಿ ಅಭ್ಯಾಸ ಪ್ರಾರಂಭಿಸಿದ್ದಾರೆ.
ರನ್ ಮಶಿನ್ ವಿರಾಟ್ ಕೊಹ್ಲಿ ಈ ಟೂರ್ನಿಯಲ್ಲಿ ಫಾರ್ಮ್ಗೆ ಮರುಳುತ್ತಾರೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಟಿ-20 ಕ್ರಿಕೆಟ್ ಇತಿಹಾಸದಲ್ಲಿ ಸತತವಾಗಿ 13 ಜಯ ದಾಖಲಿಸಿದ ಮೊದಲ ಕ್ಯಾಪ್ಟನ್ ಆಗಿ ರೋಹಿತ್ ಶರ್ಮಾ ಈ ಏಷ್ಯಾ ಕಪ್ ನಲ್ಲೂ ತಮ್ಮ ಗೆಲುವಿನ ಪಯಣ ಮುಂದುವರೆಸುತ್ತಾರಾ ಎಂಬ ಕುತೂಹಲವೂ ಇದೆ. ನೆಟ್ಸ್ನಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆ ಎಲ್ ರಾಹುಲ್, ಅರ್ಷದಿಪ್ ಸಿಂಗ್, ಯುಜ್ವೇಂದ್ರ ಚಾಹಲ್ ಮತ್ತು ಭುವನೇಶ್ವರ್ ಕುಮಾರ್ ಬೆವರಿಳಿಸಿದ್ದಾರೆ.
-
🔊 Sound 🔛#TeamIndia captain @ImRo45 & @imVkohli get into the groove ahead of the first clash against Pakistan.#AsiaCup2022 | #AsiaCup pic.twitter.com/GNd8imnmM3
— BCCI (@BCCI) August 25, 2022 " class="align-text-top noRightClick twitterSection" data="
">🔊 Sound 🔛#TeamIndia captain @ImRo45 & @imVkohli get into the groove ahead of the first clash against Pakistan.#AsiaCup2022 | #AsiaCup pic.twitter.com/GNd8imnmM3
— BCCI (@BCCI) August 25, 2022🔊 Sound 🔛#TeamIndia captain @ImRo45 & @imVkohli get into the groove ahead of the first clash against Pakistan.#AsiaCup2022 | #AsiaCup pic.twitter.com/GNd8imnmM3
— BCCI (@BCCI) August 25, 2022
ಆಗಸ್ಟ್ 27 ರಿಂದ ಸೆಪ್ಟೆಂಬರ್ 11 ರವರೆಗೆ ಏಷ್ಯಾ ಕಪ್ ನಡೆಯುತ್ತಿದ್ದು, ನಾಲ್ಕು ವರ್ಷಗಳ ನಂತರ ಆಯೋಜನೆಗೊಂಡಿದೆ. ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಫೈನಲ್ ಸೇರಿದಂತೆ ಒಂಬತ್ತು ಪಂದ್ಯಗಳು ನಡೆಯಲಿದೆ. ಏಷ್ಯಾ ಕಪ್ನಲ್ಲಿ ಹಾಲಿ ಚಾಂಪಿಯನ್ ಭಾರತವೂ ಅತ್ಯಂತ ಯಶಸ್ವಿ ತಂಡವಾಗಿದ್ದು, ಏಳು ಬಾರಿ ಟ್ರೋಫಿ ಗೆದ್ದಿದೆ. ಪಂದ್ಯಾವಳಿಯ ಕೊನೆಯ ಆವೃತ್ತಿಯು ಏಕದಿನ ಮಾದರಿಯಲ್ಲಿ ನಡೆದಿದ್ದು ಈ ಬಾರಿ ಟಿ -20 ಮಾದರಿಯಲ್ಲಿರಲಿದೆ.
ಈ ಬಾರಿ ಏಷ್ಯಾಕಪ್ ಶ್ರೀಲಂಕಾದಲ್ಲಿ ನಡೆಯಬೇಕಿತ್ತು. ಆದರೆ, ಲಂಕಾದಲ್ಲಿ ತಲೆದೂರಿರುವ ರಾಜಕೀಯ ಬಿಕ್ಕಟ್ಟಿನ ಕಾರಣ ಟೂರ್ನಿಯನ್ನು ಯುಎಇಗೆ ಶಿಫ್ಟ್ ಮಾಡಲಾಗಿದೆ. ಇದೇ ಕಾರಣದಿಂದ ಆತಿಥೇಯ ರಾಷ್ಟ್ರವಾಗಿ ಶ್ರೀಲಂಕಾ ಉದ್ಘಾಟನಾ ಪಂದ್ಯವಾಡುತ್ತಿದೆ.
ಏಷ್ಯಾ ಕಪ್ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆ ಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ದೀಪಕ್ ಹೂಡಾ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಅವೇಶ್ ಖಾನ್.