ಹೈದರಾಬಾದ್: 2012ರಲ್ಲಿ ಟೀಂ ಇಂಡಿಯಾ ಅಂಡರ್-19 ಕ್ಯಾಪ್ಟನ್ ಆಗಿ ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟಿರುವ ಉನ್ಮುಕ್ತ್ ಚಾಂದ್(Unmukt Chand) ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಟ್ವಿಟರ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದಾರೆ. ಬಹುದಿನಗಳ ಪ್ರೇಯಸಿ ಸಿಮ್ರಾನ್( Simran Khosla) ಜೊತೆ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ನಿನ್ನೆ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.

ಈಗಾಗಲೇ ಭಾರತೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿರುವ ಉನ್ಮುಕ್ತ್ ಚಾಂದ್ ಆಸ್ಟ್ರೇಲಿಯಾದ ಟಿ-20 ಲೀಗ್ ಬಿಗ್ಬ್ಯಾಷ್ನಲ್ಲಿ ಆಡಲು ಸಜ್ಜಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಿಮ್ರಾನ್ ಫಿಟ್ನೆಸ್ ಹಾಗೂ ನ್ಯೂಟ್ರಿಷನ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು.

2012ರಲ್ಲಿ ಆಸ್ಟ್ರೇಲಿಯಾದ ವಿರುದ್ಧ ನಡೆದ ಅಂಡರ್-19 ವಿಶ್ವಕಪ್ ಫೈನಲ್(U-19 World Cup 2012) ಪಂದ್ಯದಲ್ಲಿ ಉನ್ಮುಕ್ತ್ ಚಾಂದ್ 111 ರನ್ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು.
