ETV Bharat / sports

ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಸಿಡಿಲಬ್ಬರದ ಬ್ಯಾಟಿಂಗ್: ನ್ಯೂಜಿಲೆಂಡ್​​ ವಿರುದ್ಧ ಭಾರತಕ್ಕೆ ಗೆಲುವು

author img

By ETV Bharat Karnataka Team

Published : Oct 23, 2023, 12:12 PM IST

ಚೇಸ್ ಮಾಸ್ಟರ್ ವಿರಾಟ್ ಕೊಹ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿ ಭಾರತವು ನ್ಯೂಜಿಲೆಂಡ್ ವಿರುದ್ಧ ಗೆಲ್ಲಲು ಸಹಾಯ ಮಾಡಿದರು.

Virat Kohli
ವಿರಾಟ್ ಕೊಹ್ಲಿ

2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ಒಂದು ಶತಕ ಹಾಗೂ 3 ಅರ್ಧ ಶತಕಗಳ ನೆರವಿನಿಂದ 354 ರನ್ ಗಳಿಸಿ ಟಾಪ್ ಸ್ಕೋರರ್ ಆಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲೂ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಕಿಂಗ್​ ಕೊಹ್ಲಿ, 104 ಎಸೆತಗಳಲ್ಲಿ 8 ಬೌಂಡರಿ ಹಾಗೂ 2 ಸಿಕ್ಸ್ ನೆರವಿನಿಂದ 95 ರನ್ ಗಳಿಸಿ ಮ್ಯಾಟ್ ಹೆನ್ರಿ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿ ಶತಕ ಸಿಡಿಸುವ ರಭಸದಲ್ಲಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದರು. ಈ ಮೂಲಕ 49ನೇ ಶತಕದೊಂದಿಗೆ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಸರಿಗಟ್ಟುವ ಅವಕಾಶ ಕೈಚೆಲ್ಲಿಕೊಂಡರಾದರೂ ತಂಡವನ್ನು ಗೆಲುವಿನ ಹಂತಕ್ಕೆ ತಂದು ನಿಲ್ಲಿಸಿದ್ದರು. ಹೀಗಾಗಿ, ಕೊಹ್ಲಿ ಅವರನ್ನು ಚೇಸ್ ಮಾಸ್ಟರ್ ಎಂದು ಕರೆಯಲಾಗುತ್ತದೆ.

2023ರ ವಿಶ್ವಕಪ್‌ನ 21ನೇ ಪಂದ್ಯವು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಧರ್ಮಶಾಲಾದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿತು. ಪಂದ್ಯದಲ್ಲಿ ವಿರಾಟ್ ಕೊಹ್ಲಿ ಗೆಲುವಿನ ಹೀರೋ ಆಗಿ ಮಿಂಚಿದರು. ಕಷ್ಟದ ಪರಿಸ್ಥಿತಿಯಲ್ಲಿ ಅಮೋಘ ಬ್ಯಾಟಿಂಗ್ ಮಾಡಿ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು. ಆದರೆ, ಶತಕ ಪೂರೈಸುವಲ್ಲಿ ವಿಫಲರಾದರು. ಇದಾದ ಬಳಿಕ ರವೀಂದ್ರ ಜಡೇಜಾ ಬೌಂಡರಿ ಬಾರಿಸುವ ಮೂಲಕ ತಂಡಕ್ಕೆ ಇನ್ನೂ ಎರಡು ಓವರ್​ಗಳು ಬಾಕಿ ಇರುವಂತೆ ಗೆಲುವು ತಂದುಕೊಟ್ಟರು. ವಿರಾಟ್ ಅವರ ಅದ್ಭುತ ಪ್ರದರ್ಶನವನ್ನು ಭಾರತದ ಹಾಲಿ ಮತ್ತು ಮಾಜಿ ಆಟಗಾರರು ಶ್ಲಾಘಿಸಿದ್ದಾರೆ.

ಇದನ್ನೂ ಓದಿ : ವಿಶ್ವಕಪ್ 2023​: ಇಂದು ಪಾಕಿಸ್ತಾನ vs ಅಫ್ಘಾನಿಸ್ತಾನ ಫೈಟ್​ : ಪಿಚ್ ಹೇಗಿದೆ ಗೊತ್ತಾ?

ಇನ್ನು 90 ರ ದಶಕದಲ್ಲಿ ಯಶಸ್ವಿ ರನ್ ಚೇಸ್‌ಗಳಲ್ಲಿ ಕೊಹ್ಲಿ ಮೂರು ಬಾರಿ ಔಟಾಗಿದ್ದರು. ಬಾಂಗ್ಲಾದೇಶ ವಿರುದ್ಧ ಮೀರ್‌ಪುರದಲ್ಲಿ 91 ರನ್​ ಗಳಿಸಿದ್ದರು, 2010 ರಲ್ಲಿ ಬಾಂಗ್ಲಾದೇಶ ವಿರುದ್ಧ 96, ಬರ್ಮಿಂಗ್‌ಹ್ಯಾಮ್‌ನಲ್ಲಿ ಬಾಂಗ್ಲಾದೇಶ ವಿರುದ್ಧ 96 ಮತ್ತು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ 95 ರನ್​ ಕಲೆಹಾಕಿ ಶತಕ ಬಾರಿಸುವಲ್ಲಿ ವಿಫಲರಾಗಿದ್ದರು. ಪ್ರಸ್ತುತ ಭಾರತವು ಏಕದಿನ ವಿಶ್ವಕಪ್ ಗೆದ್ದರೆ ವಿರಾಟ್ ಕೊಹ್ಲಿ ಪಾತ್ರವು ಸ್ಮರಣೀಯವಾಗಿರುತ್ತದೆ.

2023ರ ವಿಶ್ವಕಪ್‌ನಲ್ಲಿ ಇದು ಭಾರತಕ್ಕೆ ಸತತ ಐದನೇ ಗೆಲುವಾಗಿದೆ. ಇದೀಗ ತಂಡ ಐದಕ್ಕೆ ಐದೂ ಪಂದ್ಯಗಳಲ್ಲಿ ಜಯಗಳಿಸುವ ಮೂಲಕ 10 ಅಂಕಗಳೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ನಂಬರ್ 1 ತಲುಪಿದೆ. ಚೆನ್ನೈನಲ್ಲಿ ಆಸ್ಟ್ರೇಲಿಯಾ ವಿರುದ್ಧ, ನವದೆಹಲಿಯಲ್ಲಿ ಅಫ್ಘಾನಿಸ್ತಾನ ವಿರುದ್ಧ, ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪಾಕಿಸ್ತಾನದ ವಿರುದ್ಧ, ಪುಣೆಯ ಎಂಸಿಎ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧ ಮತ್ತು ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ಸಾಧಿಸಿದೆ.

ಇದನ್ನೂ ಓದಿ : ಮತ್ತೊಮ್ಮೆ 'ವಿರಾಟ್' ಪ್ರದರ್ಶನ​: ಶಮಿಗೆ 5 ವಿಕೆಟ್‌ ಗೊಂಚಲು: ಭಾರತಕ್ಕೆ ವಿಶ್ವಕಪ್​ ಕ್ರಿಕೆಟ್‌ನಲ್ಲಿ ಸತತ 5ನೇ ಗೆಲುವು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.