ಅಡಿಲೇಡ್ (ಆಸ್ಟ್ರೇಲಿಯಾ): ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತದ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಟಿ20 ಇತಿಹಾಸದಲ್ಲೇ 4 ಸಾವಿರ ರನ್ ಪೂರೈಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಕಿಂಗ್ ಕೊಹ್ಲಿ ಪಾತ್ರರಾಗಿದ್ದಾರೆ.
ಆಸ್ಟ್ರೇಲಿಯಾದ ಅಡಿಲೇಡ್‌ನಲ್ಲಿ ಗುರುವಾರ ಟಿ20 ವಿಶ್ವಕಪ್‌ನ ಇಂಗ್ಲೆಂಡ್ ವಿರುದ್ಧದ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ರನ್ ಮಷಿನ್ ಖ್ಯಾತಿಯ ಕೊಹ್ಲಿ ಈ ಸಾಧನೆ ಮಾಡಿದ್ದಾರೆ. ಟಿ20 ವಿಶ್ವಕಪ್ನಲ್ಲೇ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಕೂಡ ವಿರಾಟ್ ಹೆಸರಲ್ಲೇ ಇದೆ.
ಇದೇ ಅಡಿಲೇಡ್‌ನಲ್ಲಿ ಬಾಂಗ್ಲಾದೇಶ ವಿರುದ್ಧ ನಡೆದ ಪಂದ್ಯದಲ್ಲಿ ವಿರಾಟ್ ಟಿ20 ವಿಶ್ವಕಪ್ನಲ್ಲೇ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ನಿರ್ಮಿಸಿದ್ದರು. ಶ್ರೀಲಂಕಾದ ಮಹೇಲಾ ಜಯವರ್ಧನೆ ಅವರ ಹೆಸರಲ್ಲಿದ್ದ 1016 ರನ್‌ಗಳ ದಾಖಲೆಯನ್ನು ಕೊಹ್ಲಿ ಹಿಂದಿಕ್ಕಿದ್ದರು.
-
🚨 Milestone Unlocked 🔓
— BCCI (@BCCI) November 10, 2022 " class="align-text-top noRightClick twitterSection" data="
4⃣0⃣0⃣0⃣ T20I runs & going strong 💪 💪
Well done, @imVkohli! 👏 👏
Follow the match ▶️ https://t.co/5t1NQ2iUeJ #TeamIndia | #T20WorldCup | #INDvENG pic.twitter.com/JbEXzq24jW
">🚨 Milestone Unlocked 🔓
— BCCI (@BCCI) November 10, 2022
4⃣0⃣0⃣0⃣ T20I runs & going strong 💪 💪
Well done, @imVkohli! 👏 👏
Follow the match ▶️ https://t.co/5t1NQ2iUeJ #TeamIndia | #T20WorldCup | #INDvENG pic.twitter.com/JbEXzq24jW🚨 Milestone Unlocked 🔓
— BCCI (@BCCI) November 10, 2022
4⃣0⃣0⃣0⃣ T20I runs & going strong 💪 💪
Well done, @imVkohli! 👏 👏
Follow the match ▶️ https://t.co/5t1NQ2iUeJ #TeamIndia | #T20WorldCup | #INDvENG pic.twitter.com/JbEXzq24jW
ಟಿ20 ಪಂದ್ಯಗಳಲ್ಲಿ 4 ಸಾವಿರ ರನ್‌ಗಳನ್ನು ಪೂರ್ಣಗೊಳಿಸಲು ಕೊಹ್ಲಿಗೆ 42 ರನ್‌ಗಳ ಅಗತ್ಯವಿತ್ತು. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದ ಇನ್ನಿಂಗ್ಸ್‌ನ 15ನೇ ಓವರ್‌ನಲ್ಲಿ ಆದಿಲ್ ರಶೀದ್ ಬೌಲಿಂಗ್ನಲ್ಲಿ ಬೌಂಡರಿ ಬಾರಿಸುವ ಮೂಲಕ ವಿರಾಟ್ 4 ಸಾವಿರ ರನ್‌ಗಳ ಮೈಲಿಗಲ್ಲು ಸ್ಥಾಪಿಸಿದರು.
2014 ಮತ್ತು 2016ರ ಟಿ20 ವಿಶ್ವಕಪ್‌ಗಳಲ್ಲಿ ಕೊಹ್ಲಿ ಸರಣಿ ಶ್ರೇಷ್ಠ ಪ್ರಶಸ್ತಿಗೂ ಭಾಜನರಾಗಿದ್ದರು. ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಎಂಬ ಹೆಗ್ಗಳಿಕೆ ಕೂಡ ಕೊಹ್ಲಿ ಹೆಸರಲ್ಲಿದೆ. ಈಗ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆಗೂ ಕೊಹ್ಲಿ ಪಾತ್ರರಾಗಿದ್ದಾರೆ. ಕೊಹ್ಲಿ ಪ್ರಸ್ತುತ ಸುಮಾರು 140 ಸ್ಟ್ರೈಕ್ ರೇಟ್ ಮತ್ತು 50ಕ್ಕಿಂತ ಹೆಚ್ಚು ಸರಾಸರಿ ಹೊಂದಿದ್ದಾರೆ.
ಇದನ್ನೂ ಓದಿ: ಟಿ20 ವಿಶ್ವಕಪ್ನಲ್ಲಿ ವಿರಾಟ್ ವಿಕ್ರಮ.. ಶ್ರೀಲಂಕಾದ ಮಹೇಲಾ ಜಯವರ್ಧನೆ ದಾಖಲೆ ಪುಡಿ