ETV Bharat / sports

ಕಳಪೆ ಬ್ಯಾಟಿಂಗ್​​: ದಕ್ಷಿಣ ಆಫ್ರಿಕಾ ಟಿ-20 ಸರಣಿಯಿಂದ ರನ್​ ಮಷಿನ್​ ಕೊಹ್ಲಿಗೆ ವಿಶ್ರಾಂತಿ?

ಕಳಪೆ ಬ್ಯಾಟಿಂಗ್​ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ವಿರಾಟ್​ ಕೊಹ್ಲಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಿಂದ ವಿಶ್ರಾಂತಿ ನೀಡುವ ಸಾಧ್ಯತೆ ದಟ್ಟವಾಗಿದೆ.

Virat Kohli SA Series
Virat Kohli SA Series
author img

By

Published : May 11, 2022, 8:55 PM IST

ಮುಂಬೈ: ಕಳೆದ ಕೆಲ ವರ್ಷಗಳಿಂದ ಬ್ಯಾಟಿಂಗ್ ವೈಫಲ್ಯ ಅನುಭವಿಸುತ್ತಿರುವ ಟೀಂ ಇಂಡಿಯಾದ ರನ್​ ಮಷಿನ್​ ಖ್ಯಾತಿಯ ವಿರಾಟ್​​ ಕೊಹ್ಲಿ ಮುಂಬರುವ ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗುಳಿದು, ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಬಿಸಿಸಿಐ ಕೂಡ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚನೆ ನೀಡುವ ಸಾಧ್ಯತೆ ಇದೆ ಎನ್ನಲಾಗ್ತಿದೆ.

ಕಳೆದ ಮೂರು ವರ್ಷಗಳಿಂದ ಶತಕ ವಂಚಿತರಾಗಿರುವ ವಿರಾಟ್​ ಕೊಹ್ಲಿ ಪ್ರಸ್ತುತ ಐಪಿಎಲ್​​ನಲ್ಲೂ ಕಳಪೆ ಫಾರ್ಮ್​​ ಮುಂದುವರೆಸಿದ್ದು, ಮೂರು ಸಲ ಗೋಲ್ಡನ್ ಡಕೌಟ್​​​ ಆಗಿದ್ದಾರೆ. ಹೀಗಾಗಿ, ಅವರಿಗೆ ವಿಶ್ರಾಂತಿ ನೀಡಬೇಕೆಂದು ಅನೇಕ ಕ್ರಿಕೆಟರ್ಸ್​ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗಾಗಿ, ಬಿಸಿಸಿಐ ಕೂಡ ಇದನ್ನ ಪರಿಗಣನೆಗೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಐಪಿಎಲ್​ ಮುಕ್ತಾಯಗೊಳ್ಳುತ್ತಿದ್ದಂತೆ ಟೀಂ ಇಂಡಿಯಾ ಜೂನ್​ 9ರಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಭಾಗಿಯಾಗಲಿದ್ದು, ಇದರ ಬೆನ್ನಲ್ಲೇ ಇಂಗ್ಲೆಂಡ್​ ಪ್ರವಾಸ ಕೈಗೊಳ್ಳಲಿದೆ. ಹೀಗಾಗಿ, ಐದು ಟಿ-20 ಪಂದ್ಯಗಳಿಂದ ವಿರಾಟ್​ಗೆ ವಿಶ್ರಾಂತಿ ನೀಡುವ ಸಾಧ್ಯತೆ ದಟ್ಟವಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಇದನ್ನೂ ಓದಿ: ಮುಂದಿನ ವರ್ಷ ABD ಆರ್​​ಸಿಬಿಗೆ ಮರಳುತ್ತಾರೆ: ಗೆಳೆಯ ವಿರಾಟ್​ ಕೊಹ್ಲಿ ವಿಶ್ವಾಸ!

ಕಳೆದ ಕೆಲ ತಿಂಗಳಿಂದ ವಿರಾಟ್​ ಕೊಹ್ಲಿ ಬಯೋ ಬಬಲ್​​ನಲ್ಲಿ ಉಳಿದುಕೊಂಡು ಸಾಕಷ್ಟು ಕ್ರಿಕೆಟ್​ ಆಡಿದ್ದಾರೆ. ಅವರಿಗೆ ವಿಶ್ರಾಂತಿ ಅವಶ್ಯಕತೆ ಇದೆ ಎಂದು ಬಿಸಿಸಿಐನ ಹಿರಿಯ ಅಧಿಕಾರಿಯೋರ್ವರು ಪಿಟಿಐಗೆ ತಿಳಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ದೆಹಲಿ, ಕಟಕ್, ವಿಶಾಖಪಟ್ಟಣಂ, ರಾಜ್​ಕೋಟ್ ಮತ್ತು ಬೆಂಗಳೂರಿನಲ್ಲಿ ಟಿ20 ಪಂದ್ಯಗಳನ್ನಾಡಲಿದ್ದು, ಇದರ ಬೆನ್ನಲ್ಲೇ ಜೂನ್​-ಜುಲೈನಲ್ಲಿ ಇಂಗ್ಲೆಂಡ್​ ಪ್ರವಾಸ ಕೈಗೊಳ್ಳಲಿದೆ.

ಅಕ್ಟೋಬರ್​​-ನವೆಂಬರ್​ ತಿಂಗಳಲ್ಲಿ ಅಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ಗಾಗಿ ಟೀಂ ಇಂಡಿಯಾ ಸಜ್ಜುಗೊಳಿಸಬೇಕಾಗಿದ್ದು, ಅದಕ್ಕಾಗಿ ಈಗಾಗಲೇ ಹೆಚ್ಚಿನ ಕ್ರಿಕೆಟ್​ ಆಡಿರುವ ರೋಹಿತ್ ಶರ್ಮಾ, ಕೆ ಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ, ರಿಷಭ್​ ಪಂತ್​​ಗೂ ಕೆಲ ವಾರಗಳ ಕಾಲ ವಿಶ್ರಾಂತಿ ನೀಡುವ ಸಾಧ್ಯತೆ ಇದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.