ದುಬೈ: ಪ್ರತಿಷ್ಠಿತ ಏಷ್ಯಾ ಕಪ್ ಟಿ20 ಟೂರ್ನಮೆಂಟ್ ಆರಂಭಗೊಳ್ಳಲು ಕೇವಲ ಎರಡು ದಿನ ಮಾತ್ರ ಬಾಕಿ. ಈಗಾಗಲೇ ಎಲ್ಲ ತಂಡಗಳು ಅರಬ್ ನಾಡಲ್ಲಿ ಬೀಡುಬಿಟ್ಟಿವೆ. ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ ಈಗಾಗಲೇ ನೆಟ್ ಪ್ರಾಕ್ಟಿಸ್ ಶುರು ಮಾಡಿದೆ. ಈ ನಡುವೆ ವಿರಾಟ್ ಕೊಹ್ಲಿ ಪಾಕ್ ತಂಡದ ಕ್ಯಾಪ್ಟನ್ ಬಾಬರ್ ಆಜಂ ಅವರನ್ನು ಭೇಟಿ ಮಾಡಿದ್ದು, ಕುಶಲೋಪರಿ ವಿಚಾರಿಸಿದರು.
-
Hello DUBAI 🇦🇪
— BCCI (@BCCI) August 24, 2022 " class="align-text-top noRightClick twitterSection" data="
Hugs, smiles and warm-ups as we begin prep for #AsiaCup2022 #AsiaCup | #TeamIndia 🇮🇳 pic.twitter.com/bVo2TWa1sz
">Hello DUBAI 🇦🇪
— BCCI (@BCCI) August 24, 2022
Hugs, smiles and warm-ups as we begin prep for #AsiaCup2022 #AsiaCup | #TeamIndia 🇮🇳 pic.twitter.com/bVo2TWa1szHello DUBAI 🇦🇪
— BCCI (@BCCI) August 24, 2022
Hugs, smiles and warm-ups as we begin prep for #AsiaCup2022 #AsiaCup | #TeamIndia 🇮🇳 pic.twitter.com/bVo2TWa1sz
ಆಗಸ್ಟ್ 27 ರಿಂದ ಏಷ್ಯಾ ಕಪ್ ಟಿ20 ಟೂರ್ನಿ ನಡೆಯಲಿದೆ. ಆಗಸ್ಟ್ 28ರಂದು ಸಾಂಪ್ರದಾಯಿಕ ಎದುರಾಳಿ ತಂಡಗಳಾದ ಭಾರತ-ಪಾಕಿಸ್ತಾನ ಪೈಪೋಟಿ ನಡೆಸಲಿವೆ. ಈ ಸಂದರ್ಭದಲ್ಲಿ ಉಭಯ ತಂಡದ ಆಟಗಾರರು ಕೆಲಕಾಲ ಮಾತುಕತೆ ನಡೆಸಿದ್ದು ಗಮನ ಸೆಳೆಯಿತು. ಅಫ್ಘಾನಿಸ್ತಾನದ ಆಟಗಾರರು ಕೂಡಾ ಉಪಸ್ಥಿತರಿದ್ದರು. ಇದರ ವಿಡಿಯೋ ತುಣುಕನ್ನು ಬಿಸಿಸಿಐ ತನ್ನ ಟ್ವಿಟರ್ ಅಕೌಂಟ್ನಲ್ಲಿ ಶೇರ್ ಮಾಡಿದೆ.
ಇದನ್ನೂ ಓದಿ: ರಾಹುಲ್ ದ್ರಾವಿಡ್ಗೆ ಕೋವಿಡ್... ಏಷ್ಯಾ ಕಪ್ಗೆ ಟೀಂ ಇಂಡಿಯಾ ಕೋಚ್ ಆಗಿ ಲಕ್ಷ್ಮಣ್ ನೇಮಕ
ಈ ವಿಡಿಯೋದಲ್ಲಿ ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಹಲ್, ಅಫ್ಘಾನಿಸ್ತಾನದ ರಶೀದ್ ಖಾನ್, ಮೊಹಮ್ಮದ್ ನಬಿ ಸಹ ಇದ್ದು, ಪಾಕಿಸ್ತಾನದ ನಾಯಕ ಬಾಬರ್ ಆಜಂ ಅವರನ್ನು ವಿರಾಟ್ ಕೊಹ್ಲಿ ಭೇಟಿ ಮಾಡಿರುವುದನ್ನು ನೋಡಬಹುದು. ವಿಶ್ವದ ಅಗ್ರ ಬ್ಯಾಟರ್ಗಳಲ್ಲಿ ಬಾಬರ್ ಆಜಂ ಒಬ್ಬರಾಗಿದ್ದು ಈ ಹಿಂದಿನಿಂದಲೂ ಇಬ್ಬರು ಆಟಗಾರರ ನಡುವೆ ಹೋಲಿಕೆ ಮಾಡಲಾಗ್ತಿದೆ. ಏಷ್ಯಾ ಕಪ್ನಲ್ಲಿ ಭಾರತ ಯಶಸ್ವಿ ತಂಡ. ಪಾಕಿಸ್ತಾನ ಕೂಡ ಎರಡು ಸಲ ಚಾಂಪಿಯನ್ ಆಗಿದೆ. ಉಳಿದಂತೆ ಬಾಂಗ್ಲಾದೇಶ, ಶ್ರೀಲಂಕಾ, ಅಫ್ಘಾನಿಸ್ತಾನ ಸಹ ಟೂರ್ನಿಯಲ್ಲಿ ಭಾಗಿಯಾಗಲಿವೆ.
ನಿನ್ನೆ ಅಫ್ಘಾನಿಸ್ತಾನ ಹಾಗೂ ಪಾಕ್ ತಂಡದ ಆಟಗಾರರು ಮುಖಾಮುಖಿಯಾಗಿ ಮಾತುಕತೆ ನಡೆಸಿದ್ದರು. ಅದರ ವಿಡಿಯೋ ತುಣುಕನ್ನು ಪಿಸಿಬಿ ಟ್ವೀಟ್ ಮಾಡಿತ್ತು.