ನವದೆಹಲಿ: ಮುಂಬರುವ ಇಂಗ್ಲೆಂಡ್ ಪ್ರವಾಸಕ್ಕೆ ಮುನ್ನ, ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ವಿಹಾರಕ್ಕೆ ತೆರಳಿದ್ದಾರೆ. ತಮ್ಮ ಟ್ವಿಟರ್‌ನಲ್ಲಿ ವಿರಾಟ್ ಕೊಹ್ಲಿ, ಬೀಚ್‌ನಲ್ಲಿ ಕುಳಿತು ವಿಶ್ರಾಂತಿ ಪಡೆಯುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಐಪಿಎಲ್ 2022ರ ಪಾಲ್ಗೊಂಡ ಬಳಿಕ ಅವರು ವಿಶ್ರಾಂತಿಯಲ್ಲಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಟಿ-20 ಸರಣಿಯಲ್ಲಿ ವಿರಾಟ್ ಕೊಹ್ಲಿ ಆಡುತ್ತಿಲ್ಲ.
ಕೋವಿಡ್ ಕಾರಣದಿಂದ 2021 ರಲ್ಲಿ ಮುಂದೂಡಲ್ಪಟ್ಟ ಐದನೇ ಟೆಸ್ಟ್ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸ ಕೈಗೊಳ್ಳಲಿದೆ . ಐದನೇ ಟೆಸ್ಟ್ ಜುಲೈ 1 ರಂದು ನಡೆಯಲಿದ್ದು, ಆ ಬಳಿಕ ಟೀಂ ಇಂಡಿಯಾ ಮೂರು ಪಂದ್ಯಗಳ T-20 ಮತ್ತು ODI ಸರಣಿಯಲ್ಲಿ ಪಾಲ್ಗೊಳ್ಳಲಿದೆ. ಭಾರತವು ಪ್ರಸ್ತುತ ಟೆಸ್ಟ್ ಸರಣಿಯಲ್ಲಿ 2-1 ರಿಂದ ಮುನ್ನಡೆಯಲ್ಲಿದೆ. ಐದನೇ ಪಂದ್ಯದಲ್ಲಿ ಗೆಲುವು ಅಥವಾ ಡ್ರಾ ಸಾಧಿಸುವಲ್ಲಿ ಯಶಸ್ವಿಯಾದರೆ, 15 ವರ್ಷಗಳ ನಂತರ ಇಂಗ್ಲೆಂಡ್ ನೆಲದಲ್ಲಿ ಮೊದಲ ಟೆಸ್ಟ್ ಸರಣಿ ಗೆಲ್ಲಲಿದೆ. ಈ ಹಿಂದೆ 2007ರಲ್ಲಿ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿ ಗೆದ್ದಿರುವ ಟೀಂ ಇಂಡಿಯಾಗೆ ಇದು ಐತಿಹಾಸಿಕ ಪಂದ್ಯವಾಗಲಿದೆ.
2007 ರಲ್ಲಿ ರಾಹುಲ್ ದ್ರಾವಿಡ್ ಅವರ ನಾಯಕತ್ವದಲ್ಲಿ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯಲ್ಲಿ ಆಡಿತ್ತು. ವಿಶೇಷ ಎಂದರೆ ಈ ಬಾರಿ ರಾಹುಲ್ ದ್ರಾವಿಡ್ ಭಾರತ ತಂಡದ ಮುಖ್ಯ ಕೋಚ್ ಆಗಿದ್ದಾರೆ. 2021 ರಲ್ಲಿ ಭಾರತ ಇಂಗ್ಲೆಂಡ್ ಪ್ರವಾಸ ಕೈಗೊಂಡಾಗ ವಿರಾಟ್ ಕೊಹ್ಲಿ ತಂಡದ ನಾಯಕರಾಗಿದ್ದರು. ಆದರೆ ಈಗ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ.
ಇದನ್ನು ಓದಿ:SA- India 2nd T20: ಭಾರತ ವಿರುದ್ಧ ಹರಿಣಗಳಿಗೆ ನಿರಾಯಾಸ ಗೆಲುವು