ETV Bharat / sports

ಎನ್​ಸಿಎ ಮುಖ್ಯಸ್ಥ ಹುದ್ದೆ ಅಲಂಕರಿಸಲಿದ್ದಾರೆ ವಿವಿಎಸ್​ ಲಕ್ಷ್ಮಣ್ - ವಿವಿಎಸ್ ಲಕ್ಷ್ಮಣ್

ಭಾರತ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ (VVS Laxman) ಅವರು ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥರಾಗಿ (National Cricket Academy) ಕಾರ್ಯ ನಿರ್ವಹಿಸಲಿದ್ದಾರೆ ಎಂದು ಎಂದು ಬಿಸಿಸಿಐ (BCCI) ಅಧ್ಯಕ್ಷ ಸೌರವ್ ಗಂಗೂಲಿ ತಿಳಿಸಿದ್ದಾರೆ.

laxman-to-take-charge-as-nca-head-bcci-chief-ganguly
ಎನ್​ಸಿಎ ಹುದ್ದೆ ಅಲಂಕರಿಸಲಿದ್ದಾರೆ ವಿವಿಎಸ್​ ಲಕ್ಷ್ಮಣ್
author img

By

Published : Nov 14, 2021, 1:09 PM IST

ನವದೆಹಲಿ: ಭಾರತ ತಂಡದ ಮಾಜಿ ನಾಯಕ ಹಾಗೂ ಕನ್ನಡಿಗ ರಾಹುಲ್ ದ್ರಾವಿಡ್ (Rahul Dravid)​ ಅವರು ಟೀಂ ಇಂಡಿಯಾ ಮುಖ್ಯ ಕೋಚ್ ಆದ ಬೆನ್ನಲ್ಲೇ, ತೆರವಾಗಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ ಮುಖ್ಯಸ್ಥ ಹುದ್ದೆಯನ್ನು (National Cricket Academy) ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ (VVS Laxman) ಅಲಂಕರಿಸಲಿದ್ದಾರೆ ಎಂದು ಬಿಸಿಸಿಐ (BCCI) ಅಧ್ಯಕ್ಷ ಸೌರವ್ ಗಂಗೂಲಿ ಭಾನುವಾರ ಖಚಿತಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ದಾದಾ, ಲಕ್ಷ್ಮಣ್ ಎನ್‌ಸಿಎ (NCA Head) ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುತ್ತಾರೆ ಎಂದಿದ್ದಾರೆ. ಇತ್ತೀಚೆಗೆ ರಾಹುಲ್​ ದ್ರಾವಿಡ್​ ಅವರು ಭಾರತ ಕ್ರಿಕೆಟ್​ ತಂಡದ ಕೋಚ್​ ಆಗುವಲ್ಲಿಯೂ ಕೂಡ ಸೌರವ್​ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ, ಲಕ್ಷ್ಮಣ್​ ಅವರೊಂದಿಗೆ ನಿಕಟ ಸಂಬಂಧ ಹೊಂದಿರುವ ಬಿಸಿಸಿಐ (Board of Control for Cricket in India) ಕಾರ್ಯದರ್ಶಿ ಜಯ್ ಶಾ ಹಾಗೂ ಹಿರಿಯ ಅಧಿಕಾರಿಗಳು ಕೂಡ ಎನ್​ಸಿಎ ಹುದ್ದೆಗೇರಲು ಬೆಂಬಲ ವ್ಯಕ್ತಪಡಿಸಿದ್ದರು.

ಮಾಜಿ ಕ್ರಿಕೆಟಿಗ ವಿವಿಎಸ್​​, ಯುವ ಪಡೆಯನ್ನು ಕಟ್ಟುವಲ್ಲಿ ನಿಸ್ಸಂದೇಹವಾಗಿ ಮುಂಚೂಣಿಯಲ್ಲಿರಲಿದ್ದಾರೆ. ಅಲ್ಲದೆ ಸದ್ಯ ಕೋಚ್ ಆಗಿರುವ ದ್ರಾವಿಡ್ (Indian Cricket Team Head coach)​ ಜೊತೆ ವೃತ್ತಿಜೀವನದ ಆರಂಭದಿಂದಲೂ ವಿಶೇಷ ಬಾಂಧವ್ಯ ಹಂಚಿಕೊಂಡಿದ್ದಾರೆ. ಭಾರತೀಯ ಕ್ರಿಕೆಟ್ ಇನ್ನಷ್ಟು ಉತ್ತುಂಗಕ್ಕೆ ಕೊಂಡೊಯ್ಯಲು ಆ ಇಬ್ಬರು ದಿಗ್ಗಜರು ಒಟ್ಟಿಗೆ ಕಾರ್ಯ ನಿರ್ವಹಿಸುವುದು ಪರಿಪೂರ್ಣ ಸಂಯೋಜನೆಯಾಗಿದೆ. ಈ ಇಬ್ಬರು ಮಾಜಿ ಕ್ರಿಕೆಟಿಗರು ಮುಂದಿನ ಪೀಳಿಗೆಯ ಕ್ರಿಕೆಟಿಗರನ್ನು ಸಜ್ಜುಗೊಳಿಸಲಿದ್ದಾರೆ ಎಂದು ಬಿಸಿಸಿಐ (BCCI) ಮೂಲಗಳು ತಿಳಿಸಿವೆ.

ಈಗಾಗಲೇ ಮುಖ್ಯ ಕೋಚ್ ಆಗಿ ನೇಮಕಗೊಂಡ ಬಗ್ಗೆ ಪ್ರತಿಕ್ರಿಯಿಸಿದ್ದ ದ್ರಾವಿಡ್, ಭಾರತೀಯ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ನೇಮಕಗೊಂಡಿರುವುದು ದೊಡ್ಡ ಗೌರವವಾಗಿದೆ ಮತ್ತು ನಾನು ಈ ಪಾತ್ರವನ್ನು ನಿಜವಾಗಿಯೂ ಎದುರು ನೋಡುತ್ತಿದ್ದೇನೆ. ಪ್ರಸ್ತುತ ಕೋಚ್ ಆಗಿದ್ದ ರವಿಶಾಸ್ತ್ರಿ ಹಾಕಿಕೊಟ್ಟಿರುವ ತಳಪಾಯವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಖಾತರರಾಗಿರುವುದಾಗಿ ಹೇಳಿದ್ದರು.

ಎನ್​ಸಿಎ (NCA), ಅಂಡರ್​-19 (U19), ಮತ್ತು ಇಂಡಿಯಾ Aನಲ್ಲಿ ಹೆಚ್ಚಿನ ಹುಡುಗರೊಂದಿಗೆ ನಿಕಟವಾಗಿ ಕೆಲಸ ಮಾಡಿದ್ದೇನೆ. ಅವರೆಲ್ಲ ಪ್ರತಿ ಹಂತದಲ್ಲೂ ಸುಧಾರಣೆ ಹೊಂದುವ ಉತ್ಸಾಹ ಮತ್ತು ಬಯಕೆ ಹೊಂದಿದ್ದಾರೆ. ಮುಂದಿನ ಎರಡು ವರ್ಷಗಳಲ್ಲಿ ಕೆಲ ಪ್ರಮುಖ ಟೂರ್ನಿಗಳಿದ್ದು, ನಾನು ನಮ್ಮ ಸಾಮರ್ಥ್ಯ ಸಾಧಿಸಲು ಆಟಗಾರರು ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಕೆಲಸ ನಿರ್ವಹಿಸಲು ಎದುರು ನೋಡುತ್ತಿದ್ದೇನೆ ಎಂದಿದ್ದರು.

ಇದನ್ನೂ ಓದಿ: IND vs NZ: ಭಾರತ ವಿರುದ್ಧದ ಟೆಸ್ಟ್‌ಗೆ ಗಾಯಾಳು ಕಾನ್ವೆ ಬದಲಿಗೆ ಈ ಆಟಗಾರನಿಗೆ ಕಿವೀಸ್ ಮಣೆ​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.