ನವದೆಹಲಿ: ಭಾರತ ತಂಡದ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ಗೆ ಕೋವಿಡ್ 19 ಸೋಂಕು ದೃಢಪಟ್ಟಿದ್ದು, ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ.
ಎಎನ್ಐ ಸುದ್ದಿ ಸಂಸ್ಥೆಯ ವರದಿಯ ಪ್ರಕಾರ, ಸುಂದರ್ ಕೋವಿಡ್ ಸೋಂಕಿಗೆ ಒಳಗಾಗಿದ್ದು ಚೇತರಿಕೆ ಕಾಣುತ್ತಿದ್ದಾರೆ. ಆದರೆ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳುವುದು ಇನ್ನೂ ಖಚಿತವಾಗಿಲ್ಲ ಎನ್ನಲಾಗ್ತಿದೆ.
ಕಳೆದ ಒಂದು ವರ್ಷದಿಂದ ಸುಂದರ್ ಭಾರತ ತಂಡದಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಅವರು ಮಾರ್ಚ್ 2021ರಲ್ಲಿ ಕೊನೆಯ ಬಾರಿ ಟೀಂ ಇಂಡಿಯಾದಲ್ಲಿ ಆಡಿದ್ದರು.
ವಾಷಿಂಗ್ಟನ್ ಇತ್ತೀಚೆಗೆ ಮುಗಿದ ವಿಜಯ ಹಜಾರೆ ಟ್ರೋಫಿಯಲ್ಲಿ ಉತ್ತಮ ಪ್ರದರ್ಶನ ತೋರಿದ್ದರು. ಈ ಪ್ರದರ್ಶನ ಅವರನ್ನು ಮತ್ತೆ ಭಾರತ ತಂಡಕ್ಕೆ ಆಯ್ಕೆ ಮಾಡುವಂತೆ ಮಾಡಿತ್ತು.
ಸರಿಯಾದ ಸಮಯದಲ್ಲಿ ಸುಂದರ್ ಸಂಪೂರ್ಣ ಚೇತರಿಸಿಕೊಳ್ಳದಿದ್ದರೆ, ಅವರ ಬದಲಿಗೆ ಬೇರೆ ಆಟಗಾರನನ್ನು ಆಯ್ಕೆ ಮಾಡಲಿದೆಯೇ ಎನ್ನುವುದು ಕುತೂಹಲ ಮೂಡಿಸಿದೆ. ಜನವರಿ 19ರಿಂದ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಏಕದಿನ ಸರಣಿ ಆರಂಭವಾಗಲಿದೆ.
ಇದನ್ನೂ ಓದಿ: Pankaj Advani Tests Covid: ಸ್ನೂಕರ್ ಚಾಂಪಿಯನ್ ಪಂಕಜ್ ಅಡ್ವಾಣಿಗೆ ಕೋವಿಡ್ ಸೋಂಕು