ಬೆಂಗಳೂರು: ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಗಾಯದ ಕಾರಣ ಸೆಪ್ಟೆಂಬರ್ 19ರಿಂದ ನಡೆಯಲಿರುವ 2ನೇ ಹಂತದ ಐಪಿಎಲ್ನಿಂದ ಹೊರಬಿದ್ದಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಇವರ ಬದಲಿಗೆ ಆಕಾಶ್ ದೀಪ್ ಅವರನ್ನು ಸೇರಿಸಿಕೊಂಡಿದ್ದಾರೆ.
14ನೇ ಆವತ್ತಿಗಾಗಿ ಎಲ್ಲಾ ತಂಡಗಳು ಯುಎಇಗೆ ತೆರಳಿವೆ. ಆರ್ಸಿಬಿ ಕೂಡ ಭಾನುವಾರ ದುಬೈಗೆ ತೆರಳಿದ್ದು, ಖಾಸಿಗಿ ಹೋಟೆಲ್ನಲ್ಲಿ 6 ದಿನಗಳ ಕ್ವಾರಂಟೈನ್ಗೆ ಒಳಗಾಗಲಿದೆ. ಆದರೆ, ಐಪಿಎಲ್ ಆರಂಭಕ್ಕೂ ಮುನ್ನವೇ ತಂಡದ ಸ್ಟಾರ್ ಆಲ್ರೌಂಡರ್ ವಾಷಿಂಗ್ಟನ್ ಸುಂದರ್ ಬೆರಳಿನ ಗಾಯದ ಸಮಸ್ಯೆಯಿಂದ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.
ವಿಶ್ವಟೆಸ್ಟ್ ಚಾಂಪಿಯನ್ಶಿಪ್ ನಂತರ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಅಭ್ಯಾಸ ಮಾಡುತ್ತಿದ್ದ ಸಂದರ್ಭದಲ್ಲಿ ಕೈಬೆರಳಿಗೆ ಗಾಯ ಮಾಡಿಕೊಂಡು ಸರಣಿಯಿಂದಲೇ ಹೊರಬಿದ್ದಿದ್ದರು.
ವಾಷಿಂಗ್ಟನ್ ಸುಂದರ್ ಅವರಿಂದ ತೆರವಾದ ಸ್ಥಾನಕ್ಕೆ ನೆಟ್ ಬೌಲರ್ ಆಗಿದ್ದ ಆಕಾಶ್ ದೀಪ್ ಸಿಂಗ್ ಅವರನ್ನು ಆರ್ಸಿಬಿ ಬದಲಿ ಆಟಗಾರನಾಗಿ ತಂಡಕ್ಕೆ ಆಯ್ಕೆ ಮಾಡಿಕೊಂಡಿದೆ.
ಮಾರ್ಚ್ನಲ್ಲಿ ಬಯೋಬಬಲ್ನಲ್ಲಿ ಆಟಗಾರರಿಗೆ ಕೊರೊನಾ ಕಾಣಿಸಿಕೊಂಡ ಹಿನ್ನೆಲೆ ಐಪಿಎಲ್ ಅನ್ನು ಮುಂದೂಡಲಾಗಿತ್ತು. ಇದೀಗ ಸೆಪ್ಟೆಂಬರ್ 19 ರಂದು ಪುನಾರಂಭಗೊಳ್ಳಲಿದೆ. ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಮೊದಲ ಪಂದ್ಯ ನಡೆದರೆ, ಸೆಪ್ಟೆಂಬರ್ 20 ರಂದು ಕೆಕೆಆರ್ ವಿರುದ್ಧ ಆರ್ಸಿಬಿ ತನ್ನ ಅಭಿಯಾನ ಆರಂಭಿಸಲಿದೆ.
ಇದನ್ನು ಓದಿ:ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಹಸರಂಗ, ಚಮೀರಾಗೆ NOC ನೀಡಿದ ಶ್ರೀಲಂಕಾ ಕ್ರಿಕೆಟ್