ETV Bharat / sports

ಪಾಕಿಸ್ತಾನ ಭಯೋತ್ಪಾದನೆ ನಿಲ್ಲಿಸುವವರೆಗೆ ನಾವು ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಆಡುವುದಿಲ್ಲ: ಸಚಿವ ಠಾಕೂರ್​ - ಕ್ರೀಡಾ ಸಚಿವ ಅನುರಾಗ್ ಠಾಕೂರ್

ಭಾರತದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧ ಮರುಸ್ಥಾಪಿಸಲು ಬಯಸುತ್ತಿರುವ ಪಾಕಿಸ್ತಾನಕ್ಕೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಖಡಕ್ ಉತ್ತರ ನೀಡಿದ್ದಾರೆ.

Not Play With Pakistan Until They End Terrorism  Union Minister Anurag Takur  Union Sports Minister Anurag Thakur  India and Pakistan match  ಪಾಕಿಸ್ತಾನ ವಿರುದ್ಧ ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯ  ಯಾವುದೇ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯವನ್ನು ಆಡುವುದಿಲ್ಲ  ಪಾಕ್​ಗೆ ತಕ್ಕ ಉತ್ತರ ನೀಡಿದ ಸಚಿವ ಠಾಕೂರು  ಭಾರತದೊಂದಿಗೆ ದ್ವಿಪಕ್ಷೀಯ ಕ್ರಿಕೆಟ್  ಕ್ರೀಡಾ ಸಚಿವ ಅನುರಾಗ್ ಠಾಕೂರ್  ಪಾಕ್​ಗೆ ಖಡಕ್​ ಆಗಿಯೇ ಉತ್ತರ ನೀಡಿದ ಸಚಿವ ಠಾಕೂರ್​
ಪಾಕ್​ಗೆ ಖಡಕ್​ ಆಗಿಯೇ ಉತ್ತರ ನೀಡಿದ ಸಚಿವ ಠಾಕೂರ್​
author img

By ETV Bharat Karnataka Team

Published : Sep 17, 2023, 1:25 PM IST

ನವದೆಹಲಿ: ಶ್ರೀಲಂಕಾ- ಪಾಕಿಸ್ತಾನದ ಆತಿಥ್ಯದಲ್ಲಿ ಸದ್ಯ ಏಷ್ಯಾಕಪ್ ಕ್ರಿಕೆಟ್ ನಡೆಯುತ್ತಿದೆ. ಮುಂದಿನ ತಿಂಗಳು ಏಕದಿನ ಕ್ರಿಕೆಟ್ ವಿಶ್ವಕಪ್‌ ಭಾರತದಲ್ಲಿ ನಡೆಯಲಿದೆ. ಈ ನಡುವೆ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಸರಣಿಗೆ ಸಂಬಂಧಿಸಿದಂತೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರತಿಕ್ರಿಯಿಸಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಠಾಕೂರ್, ಪಾಕಿಸ್ತಾನವು ಭಯೋತ್ಪಾದನೆ ಮತ್ತು ಗಡಿಯಾಚೆಗಿನ ಅಕ್ರಮ ನುಸುಳುವಿಕೆಯನ್ನು ನಿಲ್ಲಿಸುವವರೆಗೂ ಭಾರತ ಮತ್ತು ಪಾಕಿಸ್ತಾನ ನಡುವಿನ ದ್ವಿಪಕ್ಷೀಯ ಕ್ರಿಕೆಟ್ ಸರಣಿ ನಡೆಯುವುದಿಲ್ಲ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈ ಹಿಂದೆಯೇ ನಿರ್ಧರಿಸಿತ್ತು. ಇದು ದೇಶದ ಭಾವನೆ ಮತ್ತು ದೇಶದ ಜನರ ಹಿತಾಸಕ್ತಿ ಎಂದು ನಾನು ಭಾವಿಸುತ್ತೇನೆ. ಹಾಗಾಗಿ, ಗಡಿಯಾಚೆಗಿನ ಭಯೋತ್ಪಾದನೆಯನ್ನು ನಿಲ್ಲಿಸುವವರೆಗೆ ಪಾಕಿಸ್ತಾನದೊಂದಿಗೆ ಯಾವುದೇ ರೀತಿಯ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯವನ್ನು ನಾವು ಆಡುವುದಿಲ್ಲ ಎಂದರು.

ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ರಾಷ್ಟ್ರೀಯ ರೈಫಲ್ಸ್‌ನ ಕ್ಯೂಆರ್‌ಟಿಗೆ ಕಮಾಂಡರ್ ಹಾಗು ಕರ್ನಲ್ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಕೋಕರ್ನಾಗ್ ಪ್ರದೇಶದಲ್ಲಿ ಶತ್ರುಗಳ ಗುಂಡಿನ ದಾಳಿಯಲ್ಲಿ ಮೇಜರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪ ಅಧೀಕ್ಷಕ ಕೂಡ ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧರನ್ನು ಹಿರಿಯ ಸೇನಾಧಿಕಾರಿಗಳು ಮತ್ತು ಡಿಎಸ್ಪಿ ಕರ್ನಲ್ ಮನ್ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನಕ್ ಮತ್ತು ಹುಮಾಯೂನ್ ಭಟ್ ಎಂದು ಗುರುತಿಸಲಾಗಿದೆ.

ಪಾಕಿಸ್ತಾನವು ಕ್ರಿಕೆಟ್ ಸಂಬಂಧವನ್ನು ಮರುಸ್ಥಾಪಿಸಲು ಹಲವಾರು ಪ್ರಯತ್ನಗಳನ್ನು ಮಾಡುತ್ತಿದೆ. ಆದರೆ ಭಾರತ ಕಟ್ಟುನಿಟ್ಟಾದ ನಿಲುವು ತೆಗೆದುಕೊಂಡಿದೆ. ಭಯೋತ್ಪಾದನೆಯನ್ನು ನಿಯಂತ್ರಿಸುವವರೆಗೂ ಕ್ರಿಕೆಟ್ ಸಂಬಂಧಗಳನ್ನು ಪುನರಾರಂಭಿಸುವುದಿಲ್ಲ ಎಂದು ಠಾಕೂರು ಖಡಕ್ ಸಂದೇಶ ರವಾನಿಸಿದ್ದಾರೆ.

ಭಾರತ-ಪಾಕಿಸ್ತಾನವು 2012ರಿಂದ ಯಾವುದೇ ದ್ವಿಪಕ್ಷೀಯ ಕ್ರಿಕೆಟ್‌ ಸರಣಿಗಳನ್ನು ಆಡಿಲ್ಲ. ಆ ಸರಣಿಯ ನಂತರ ನೆರೆಹೊರೆ ದೇಶಗಳ ನಡುವೆ ಹೆಚ್ಚಿದ ರಾಜತಾಂತ್ರಿಕ ಉದ್ವಿಗ್ನತೆಯಿಂದಾಗಿ ದ್ವಿಪಕ್ಷೀಯ ಕ್ರಿಕೆಟ್ ಸಂಬಂಧಗಳನ್ನು ಸ್ಥಗಿತಗೊಳಿಸಲಾಗಿದೆ. ಈ ತಿಂಗಳಾರಂಭದಲ್ಲಿ ಬಿಸಿಸಿಐ ಅಧ್ಯಕ್ಷ ರೋಜರ್ ಬಿನ್ನಿ ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ), ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ಎಸಿಸಿ) ಮತ್ತು ಇತರ ಕ್ರಿಕೆಟ್ ಮಂಡಳಿಗಳ ಸದಸ್ಯರನ್ನು ಲಾಹೋರ್‌ನಲ್ಲಿ ಏಷ್ಯಾ ಕಪ್ ಪಂದ್ಯಗಳಿಗೆ ಹಾಜರಾಗಲು ಆಹ್ವಾನಿಸಿದ ನಂತರ, ಉಪಾಧ್ಯಕ್ಷ ರಾಜೀವ್ ಶುಕ್ಲಾ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿ ನಡೆದ ಭೋಜನಕೂಟದಲ್ಲಿ ಅವರು ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ ಮತ್ತು ಶ್ರೀಲಂಕಾ ತಂಡಗಳ ಆಟಗಾರರನ್ನು ಭೇಟಿಯಾಗಿದ್ದರು.

ಪ್ರವಾಸ ಉತ್ತಮವಾಗಿತ್ತು. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಆತಿಥ್ಯ ಉತ್ತಮವಾಗಿದೆ ಎಂದು ಶುಕ್ಲಾ ಹೇಳಿದ್ದರು. ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಬಾಂಧವ್ಯವನ್ನು ಪುನರಾರಂಭಿಸಲು ಮಂಡಳಿ ಕೋರಿತ್ತು. ಆದರೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಎರಡು ದಿನಗಳ ಪ್ರವಾಸ ಉತ್ತಮವಾಗಿತ್ತು. ರಾಜ್ಯಪಾಲರು ನಮ್ಮ ಗೌರವಾರ್ಥ ಔತಣಕೂಟ ಏರ್ಪಡಿಸಿದ್ದರು. ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಜನರ ಆತಿಥ್ಯವೂ ಚೆನ್ನಾಗಿತ್ತು. ಉಭಯ ದೇಶಗಳ ನಡುವೆ ಕ್ರಿಕೆಟ್ ಪುನರಾರಂಭವಾಗಬೇಕು ಎಂಬುದು ಅವರ ಬೇಡಿಕೆಯಾಗಿತ್ತು. ಈ ಬಗ್ಗೆ ನಮ್ಮ ಸರ್ಕಾರ ನಿರ್ಧರಿಸುತ್ತದೆ ಮತ್ತು ನಮ್ಮ ಸರ್ಕಾರ ಏನು ಹೇಳುತ್ತದೋ ಅದನ್ನೇ ಮಾಡುತ್ತೇವೆ ಎಂದು ಹೇಳಿರುವುದಾಗಿ ಎಂದು ಶುಕ್ಲಾ ಪ್ರತಿಕ್ರಿಯಿಸಿದ್ದರು.

ಅಕ್ಟೋಬರ್ 14 ರಂದು ಅಹಮದಾಬಾದ್‌ನಲ್ಲಿ ಭಾರತ ವಿರುದ್ಧದ ಲೀಗ್ ಪಂದ್ಯ ಒಳಗೊಂಡಿರುವ 50 ಓವರ್‌ಗಳ ವಿಶ್ವಕಪ್ ಟೂರ್ನಿಗೆ ಪಾಕಿಸ್ತಾನ ಕ್ರಿಕೆಟ್ ತಂಡ ಮುಂದಿನ ತಿಂಗಳು ಭಾರತ ಪ್ರವಾಸ ಮಾಡಲಿದೆ.

ಶ್ರೀಲಂಕಾದಲ್ಲಿ ಭಾರತೀಯ ಕ್ರಿಕೆಟ್ ತಂಡ: 2023ರ ಏಷ್ಯಾಕಪ್‌ನಲ್ಲಿ ಭಾಗವಹಿಸಲು ಟೀಂ ಇಂಡಿಯಾ ಕೊಲಂಬೊದಲ್ಲಿದೆ. ಭಾರತ ದಾಖಲೆಯ 10 ನೇ ಬಾರಿಗೆ ಏಷ್ಯಾಕಪ್‌ನ ಫೈನಲ್‌ ತಲುಪಿದೆ. ಪ್ರಶಸ್ತಿ ಸುತ್ತಿನ ಪಂದ್ಯ ಭಾರತ ಮತ್ತು ಶ್ರೀಲಂಕಾ ನಡುವೆ ಇಂದು ನಡೆಯಲಿದೆ. ಟೂರ್ನಿಯಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು ಭಾರತ-ಪಾಕಿಸ್ತಾನ ನಡುವಿನ ಪಂದ್ಯ. ಎರಡೂ ತಂಡಗಳು ಎರಡು ಬಾರಿ ಮುಖಾಮುಖಿಯಾಗಿದ್ದವು. ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಎರಡನೇ ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ 228 ರನ್​ಗಳ ಭರ್ಜರಿ ಜಯ ಸಾಧಿಸಿತ್ತು.

ಪಾಕ್​ನೊಂದಿಗೆ ಕೊನೆಯ ದ್ವಿಪಕ್ಷೀಯ ಸರಣಿ: ಭಾರತ-ಪಾಕಿಸ್ತಾನ ನಡುವಿನ ಕ್ರಿಕೆಟ್ ಪಂದ್ಯಗಳಿಗಾಗಿ ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಎರಡೂ ತಂಡಗಳು ರಾಜಕೀಯ ಭಿನ್ನಾಭಿಪ್ರಾಯಗಳಿಂದಾಗಿ ದ್ವಿಪಕ್ಷೀಯ ಸರಣಿಗಳನ್ನು ಆಡುತ್ತಿಲ್ಲ. ಐಸಿಸಿ ಮತ್ತು ಕಾಂಟಿನೆಂಟಲ್ ಪಂದ್ಯಾವಳಿಗಳಲ್ಲಿ ಮಾತ್ರ ಪರಸ್ಪರರ ವಿರುದ್ಧ ಪಂದ್ಯಗಳನ್ನು ಆಡುತ್ತಿವೆ. ಕೊನೆಯ ದ್ವಿಪಕ್ಷೀಯ ಸರಣಿ 2012-13ರಲ್ಲಿ ನಡೆದಿತ್ತು.

ಇದನ್ನೂ ಓದಿ: Asia Cup Final: 5 ವರ್ಷದ ನಂತರ ಟ್ರೋಫಿ ಗೆಲ್ಲುವ ಭರವಸೆಯಲ್ಲಿ ಭಾರತ.. ಸಿಂಹಳೀಯರ ಮೇಲೆ ಪ್ರಭುತ್ವ ಸಾಧಿಸುವುದೇ ರೋಹಿತ್​ ಪಡೆ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.