ಹೈದರಾಬಾದ್: ಟಿ-20 ವಿಶ್ವಕಪ್ ಬಳಿಕ ಟಿ20ಯಿಂದ ದೂರ ಉಳಿದಿರುವ ರೋಹಿತ್ ಶರ್ಮಾ, ದಕ್ಷಿಣ ಆಫ್ರಿಕಾ ಪ್ರವಾಸದ ವೇಳೆಯೂ ಸೀಮಿತ ಓವರ್‌ಗಳ ಕ್ರಿಕೆಟ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ. ಆದರೆ, ಬಿಸಿಸಿಐ ಮೂಲಗಳ ಪ್ರಕಾರ ಮುಂದಿನ ವರ್ಷ ನಡೆಯಲಿರುವ ಟಿ-20 ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಲು ಒಪ್ಪಿಗೆ ಸೂಚಿಸಿದ್ದಾರೆ. ರೋಹಿತ್‌ಗೆ ಬಿಸಿಸಿಐ ಟಿ20 ನಾಯಕತ್ವ ನೀಡಿದೆ. ಆದರೆ, ಅವರು ಪ್ರಸ್ತುತ ಬ್ರಿಟನ್‌ನಲ್ಲಿ ರಜೆ ದಿನಗಳನ್ನು ಕಳೆಯುತ್ತಿದ್ದಾರೆ ಮತ್ತು ವಿಶ್ರಾಂತಿ ಪಡೆಯಲು ಬಯಸಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ-20 ಸರಣಿಯ ನಂತರ ಭಾರತ ಕ್ರಿಕೆಟ್ ತಂಡ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳಬೇಕಿದೆ. ಟೀಂ ಇಂಡಿಯಾ ದಕ್ಷಿಣ ಆಫ್ರಿಕಾದಲ್ಲಿ ಮೂರು ಪಂದ್ಯಗಳ ಟಿ-20 ಸರಣಿ, ಮೂರು ಪಂದ್ಯಗಳ ಏಕದಿನ ಸರಣಿ ಮತ್ತು ಎರಡು ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ. ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿರುವುದು ಗೊತ್ತಿರುವ ಸಂಗತಿ. ಈ ಟಿ - 20 ಸರಣಿಯಲ್ಲಿ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾ ನಾಯಕರಾಗಲಿದ್ದಾರೆ.
ವಿಶೇಷ ಎಂದರೆ ರೋಹಿತ್ ಶರ್ಮಾ ಟಿ20 ತಂಡಕ್ಕೆ ಮರಳಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ-20 ಸರಣಿಯಲ್ಲಿ ರೋಹಿತ್ ಶರ್ಮಾಗೆ ನಾಯಕತ್ವ ನೀಡಲಾಗುವುದು ಎಂದು ನಂಬಲಾಗಿತ್ತು. ಆದರೆ, ಅದು ಆಗಲಿಲ್ಲ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಹಿರಿಯ ಆಲ್‌ರೌಂಡರ್ ರವೀಂದ್ರ ಜಡೇಜಾ ಉಪನಾಯಕರಾಗಲಿದ್ದಾರೆ. ಆದರೆ, ಹಾರ್ದಿಕ್ ಪಾಂಡ್ಯ ಸಂಪೂರ್ಣವಾಗಿ ಫಿಟ್ ಆಗಿಲ್ಲದ ಕಾರಣ ಈ ಸರಣಿಯಲ್ಲಿ ಟೀಂ ಇಂಡಿಯಾದ ಭಾಗವಾಗಿಲ್ಲ. ಇಶಾನ್ ಕಿಶನ್ ಮತ್ತು ಜಿತೇಶ್ ಶರ್ಮಾ ಇಬ್ಬರೂ ತಂಡದಲ್ಲಿ ಆಯ್ಕೆಯಾಗಿದ್ದಾರೆ.
ಒಂದು ವೇಳೆ, ರೋಹಿತ್ ಟಿ-20 ಆಡಲು ನಿರ್ಧರಿಸಿದರೆ ವಿಶ್ವಕಪ್‌ನಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೋಹಿತ್‌ನಂತೆ ಟಿ-20 ವಿಶ್ವಕಪ್‌ನಿಂದ ಆ ಮಾದರಿಯಲ್ಲಿ ಆಡದ ಕೊಹ್ಲಿ ದಕ್ಷಿಣ ಆಫ್ರಿಕಾದಲ್ಲಿ ಮಾತ್ರ ಟೆಸ್ಟ್ ಆಡಲಿದ್ದಾರೆ. ನಿರೀಕ್ಷೆಯಂತೆ ವಿಕೆಟ್ ಕೀಪರ್ ಆಗಿ ಭರತ್ ಈ ಟೆಸ್ಟ್ ಸರಣಿಗೆ ತಂಡದಲ್ಲಿ ಸ್ಥಾನ ಪಡೆಯಲಿಲ್ಲ. ಕಾರಣ ಕೆಎಲ್ ರಾಹುಲ್ ವಿಕೆಟ್ ಕೀಪರ್ ಮಾಡಲಿದ್ದಾರೆ. ರುತುರಾಜ್ ಈ ತಂಡದಲ್ಲಿ ಸ್ಥಾನ ಪಡೆದರು. ಶಮಿ ಸಣ್ಣಪುಟ್ಟ ಗಾಯದಿಂದ ಪರದಾಡುತ್ತಿದ್ದರೂ ಸರಣಿ ಆರಂಭವಾಗುವ ವೇಳೆಗೆ ಸಂಪೂರ್ಣ ಫಿಟ್ ಆಗುತ್ತಾರೆ ಎಂಬ ನಂಬಿಕೆಯಿಂದ ಅವರನ್ನು ಆಯ್ಕೆ ಮಾಡಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಹಾರ್ ಮತ್ತು ಅರ್ಷದೀಪ್ ಸಿಂಗ್ ರೂಪದಲ್ಲಿ ನಾಲ್ವರು ವೇಗದ ಬೌಲರ್‌ಗಳು ಸ್ಥಾನ ಪಡೆದಿದ್ದಾರೆ. ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಸ್ಪಿನ್ನರ್‌ಗಳಾಗಿದ್ದಾರೆ.
ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರುತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ನಾಯಕ ಸೂರ್ಯಕುಮಾರ್ ಯಾದವ್, ರಿಂಕು ಸಿಂಗ್ ಮತ್ತು ಶ್ರೇಯಸ್ ಅಯ್ಯರ್ ಅವರನ್ನು ಬಿಸಿಸಿಐ ಆಯ್ಕೆ ಮಾಡಿದೆ. ಇಶಾನ್ ಕಿಶನ್ ಮತ್ತು ಜಿತೇಶ್ ಶರ್ಮಾ ಎಂದು ಇಬ್ಬರು ವಿಕೆಟ್ ಕೀಪರ್‌ಗಳಾಗಿ ಆಯ್ಕೆ ಮಾಡಲಾಗಿದೆ.
ಓದಿ: ಹೊಸ ಸ್ವರೂಪದಲ್ಲಿ ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: 20 ತಂಡಗಳು ಅಂತಿಮ