ನವದೆಹಲಿ: ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ವೃದ್ಧಿಮಾನ್ ಸಹಾ ಕೋವಿಡ್‌ನಿಂದ ಚೇತರಿಸಿಕೊಂಡಿದ್ದು, ಮುಂದಿನ ತಿಂಗಳು ಭಾರತ ತಂಡ ಪ್ರಯಾಣ ಬೆಳೆಸಲಿರುವ ಇಂಗ್ಲೆಂಡ್ ಪ್ರವಾಸಕ್ಕೆ ಲಭ್ಯವಾಗಲಿದ್ದಾರೆ.
ದೆಹಲಿಯಲ್ಲಿ ಎರಡೂವರೆ ವಾರಗಳ ಹೋಟೆಲ್ ಕ್ಯಾರಂಟೈನ್ ನಂತರ ವೃದ್ಧಿಮಾನ್ ನಿನ್ನೆ ಕೋಲ್ಕತ್ತಾದ ತಮ್ಮ ಮನೆಗೆ ಮರಳಿದ್ದಾರೆ ಎಂದು ಮೂಲಗಳು ಪಿಟಿಐಗೆ ತಿಳಿಸಿವೆ. ಈ ಸಲದ ಐಪಿಎಲ್ ಟೂರ್ನಿಯಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಪರ ಆಡುತ್ತಿದ್ದ ಸಹಾ ಸೋಂಕಿಗೀಡಾಗಿದ್ದರು.
ಇಂಗ್ಲೆಂಡ್ನಲ್ಲಿ ಟೀಂ ಇಂಡಿಯಾ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಮತ್ತು ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿ ಆಡಲಿದೆ. ಜೂನ್‌ನಲ್ಲಿ ಆಟಗಾರರು ಮುಂಬೈಗೆ ತೆರಳಲಿದ್ದು, ಅದಕ್ಕೂ ಮೊದಲು ಮುಂಬೈನಲ್ಲಿ ಕ್ವಾರಂಟೈನ್ ಅವಧಿ ಮುಗಿಸಬೇಕಿದೆ. ಸುಮಾರು ಮೂರು ತಿಂಗಳ ಕಾಲ ಇಂಗ್ಲೆಂಡ್ ಪ್ರವಾಸ ಇರುವ ಕಾರಣ ಆಟಗಾರರು ಮತ್ತು ಸಹಾಯಕ ಸಿಬ್ಬಂದಿಗೆ ತಮ್ಮ ಕುಟುಂಬದವರ ಜೊತೆ ತೆರಳಲು ಅನುಮತಿ ನೀಡಲಾಗಿದೆ.