ETV Bharat / sports

WTC ಫೈನಲ್ ಪಂದ್ಯಕ್ಕೆ ಮಳೆ ಕಾಟ: ಮೊದಲ ಸೆಷನ್ ರದ್ದು - ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ 2021

ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಕ್ಕೆ ಮಳೆಯ ಕಾಟ ಶುರುವಾಗಿದ್ದು, ಮೊದಲ ಸೆಷನ್​ ರದ್ದುಗೊಂಡಿದೆ.

WTC Final
WTC Final
author img

By

Published : Jun 18, 2021, 2:59 PM IST

ಸೌತಾಂಪ್ಟನ್: ಇಂದಿನಿಂದ ಆರಂಭಗೊಳ್ಳಬೇಕಾಗಿರುವ ಭಾರತ-ನ್ಯೂಜಿಲ್ಯಾಂಡ್​ ನಡುವಿನ ಐಸಿಸಿ ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಪಂದ್ಯಕ್ಕೆ ಮಳೆರಾಯನ ಕಾಟ ಶುರುವಾಗಿದೆ. ಇಂದು ಬೆಳಗ್ಗೆಯಿಂದಲೇ ನಿರಂತರವಾಗಿ ಮಳೆ ಸುರಿಯುತ್ತಿರುವ ಕಾರಣ ಟೆಸ್ಟ್​ನ ಮೊದಲ ಸೆಷನ್​ ರದ್ಧುಗೊಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಭಾರತೀಯ ಕ್ರಿಕೆಟ್ ಮಂಡಳಿ ತನ್ನ ಟ್ವಿಟರ್​ನಲ್ಲಿ ಅಧಿಕೃತ ಮಾಹಿತಿ ಹಂಚಿಕೊಂಡಿದೆ. ಹೀಗಾಗಿ ಕ್ರಿಕೆಟ್​ ಅಭಿಮಾನಿಗಳಲ್ಲಿ ಮೊದಲ ದಿನವೇ ನಿರಾಸೆ ಮೂಡಿದೆ.

  • Update: Unfortunately there will be no play in the first session on Day 1 of the ICC World Test Championship final. #WTC21

    — BCCI (@BCCI) June 18, 2021 " class="align-text-top noRightClick twitterSection" data=" ">

ಇಂಗ್ಲೆಂಡ್​ನ ಸೌತಾಂಪ್ಟನ್​ನಲ್ಲಿ ಈ ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನದ ಪ್ರಕಾರ 3:30ಕ್ಕೆ ಟಾಸ್​ ಮಾಡಬೇಕಾಗಿತ್ತು. ಆದರೆ ಮಳೆ ಶುರುವಾಗಿರುವ ಕಾರಣ ಇದರಲ್ಲಿ ವಿಳಂಬವಾಗಲಿದೆ. ಫೈನಲ್​ನಲ್ಲಿ ಗೆಲುವು ಸಾಧಿಸುವ ಉದ್ದೇಶದೊಂದಿಗೆ ಉಭಯ ತಂಡಗಳು ಮೈದಾನಕ್ಕಿಳಿಯಲು ಸಜ್ಜುಗೊಂಡಿವೆ. ಆದರೆ ಇದರ ಮಧ್ಯೆ ಮಳೆಯಾಟ ಶುರುವಾಗಿದೆ. ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡ ಇಲ್ಲಿಯವರೆಗೆ 59 ಟೆಸ್ಟ್​ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಭಾರತ 21 ಹಾಗೂ ನ್ಯೂಜಿಲ್ಯಾಂಡ್​​ 12 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಉಳಿದಂತೆ 26 ಪಂದ್ಯಗಳು ಡ್ರಾನಲ್ಲಿ ಮುಕ್ತಾಯಗೊಂಡಿವೆ. ಪ್ರಮುಖವಾಗಿ ವಿಶ್ವ ಟೆಸ್ಟ್​ ಚಾಂಪಿಯನ್​ಶಿಪ್​ನಲ್ಲಿ ಭಾರತ 17 ಪಂದ್ಯಗಳನ್ನಾಡಿದ್ದು, 12ರಲ್ಲಿ ಗೆಲುವು ಹಾಗೂ 4 ರಲ್ಲಿ ಸೋಲು ಕಂಡಿದ್ದು, ಒಂದು ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ.

ಉಭಯ ತಂಡಗಳು ಇಂತಿವೆ:

ಭಾರತ: ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ (ಉಪನಾಯಕ), ರಿಷಭ್ ಪಂತ್ (ವಿಕೀ), ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹನುಮಾ ವಿಹಾರಿ, ವೃದ್ಧಿಮಾನ್ ಸಹಾ (ವಿಕೀ).

ನ್ಯೂಜಿಲ್ಯಾಂಡ್: ಕೇನ್ ವಿಲಿಯಮ್ಸನ್ (ನಾಯಕ), ಟಾಮ್ ಬ್ಲಂಡೆಲ್, ಟ್ರೆಂಟ್ ಬೌಲ್ಟ್, ಡೆವೊನ್ ಕಾನ್ವೇ, ಕಾಲಿನ್ ಡಿ ಗ್ರ್ಯಾಂಡ್‌ಹೋಮ್, ಮ್ಯಾಟ್ ಹೆನ್ರಿ, ಕೈಲ್ ಜೆಮೀಸನ್, ಟಾಮ್ ಲಾಥಮ್, ಹೆನ್ರಿ ನಿಕೋಲ್ಸ್, ಅಜಾಜ್ ಪಟೇಲ್, ಟಿಮ್ ಸೌಥಿ, ರಾಸ್ ಟೇಲರ್, ನೀಲ್ ವ್ಯಾಗ್ನರ್, ಬಿಜೆ ವಾಟ್ಲಿಂಗ್ ಮತ್ತು ವಿಲ್ ಯಂಗ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.