ಬಲೂಚಿಸ್ತಾನ್ (ಪಾಕಿಸ್ತಾನ): ಫುಟ್ಬಾಲ್ ಪಂದ್ಯ ನಡೆಯುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಭೀಕರ ಸ್ಫೋಟ ಸಂಭವಿಸಿದ್ದು, ಪಂದ್ಯ ವೀಕ್ಷಿಸುತ್ತಿದ್ದ 14 ಜನರು ಗಾಯಗೊಂಡಿದ್ದಾರೆ.
ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಫುಟ್ಬಾಲ್ ಆಟಗಾರರು ಗಾಯಗೊಂಡಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುಷ್ಕರ್ಮಿಗಳು ಫುಟ್ಬಾಲ್ ಮೈದಾನದ ಗೋಡೆಯ ಪಕ್ಕದಲ್ಲಿ ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಇಟ್ಟಿದ್ದರು ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
ಕಳೆದ ವರ್ಷದಿಂದ ಬಲೂಚಿಸ್ತಾನದಲ್ಲಿ ಹಿಂಸಾಚಾರ ಹೆಚ್ಚಾಗಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ.
ಇದನ್ನೂ ಓದಿ: ಕೌಟುಂಬಿಕ ದುರಂತ, ಬಡತನವನ್ನು ಮೀರಿ ಐಪಿಎಲ್ನಲ್ಲಿ ಅವಕಾಶ ಪಡೆದ ಸಕಾರಿಯಾಗೆ ನೆರವಾಗಿದ್ದು ಆರ್ಸಿಬಿ!