ದುಬೈ: ಭಾರತ ಹಾಗೂ ಒಮಾನ್ ನಡುವೆ ನಡೆದ ಫಿಫಾ ಸೌಹಾರ್ದ ಫುಟ್ಬಾಲ್ ಪಂದ್ಯದಲ್ಲಿ ಭಾರತ ತಂಡವು ದ್ವಿತೀಯಾರ್ಧದಲ್ಲಿ ಉತ್ತಮ ಪುನರಾಗಮನ ಮಾಡುವ ಮೂಲಕ 1-1 ಗೋಲುಗಳಿಂದ ಪಂದ್ಯವನ್ನ ಡ್ರಾ ಮಾಡಿಕೊಂಡಿದೆ.
ಕೋವಿಡ್-19 ನಂತರ ಮೊದಲ ಅಂತಾರಾಷ್ಟ್ರೀಯ ಪಂದ್ಯವಾಡಿದ ಭಾರತ ಫುಟ್ಬಾಲ್ ತಂಡ ಒಮನ್ ವಿರುದ್ಧ ಡ್ರಾ ಸಾಧಿಸುವ ಮೂಲಕ ಕಮ್ಬ್ಯಾಕ್ ಮಾಡಿದೆ. 55 ನೇ ನಿಮಿಷದಲ್ಲಿ ಮನ್ವೀರ್ ಸಿಂಗ್ ಗಳಿಸಿದ ಗೋಲಿನಿಂದ ಭಾರತ ತಂಡ ಸೋಲಿನ ಸುಳಿಯಿಂದ ಪಾರಾಗಿ ಪಂದ್ಯ ಡ್ರಾ ಮಾಡಿಕೊಂಡಿತು.
ಮೊದಲ 45 ನಿಮಿಷಗಳಲ್ಲಿ ಸಂಪೂರ್ಣ ಹಿಡಿತ ಸಾಧಿಸಿದ್ದ ಒಮನ್ ಮೊದಲಾರ್ಧದಲ್ಲಿ 1 ಗೋಲುಗಳಿಸಿ ಮುನ್ನಡೆ ಸಾಧಿಸಿತ್ತು. ದ್ವಿತೀಯಾರ್ಧದಲ್ಲಿ ಉತ್ತಮವಾಗಿ ಕಮ್ಬ್ಯಾಕ್ ಮಾಡಿದ ಭಾರತ ತಂಡ 55 ನೇ ನಿಮಿಷದಲ್ಲಿ ಗೋಲು ಗಳಿಸುವ ಮೂಲಕ ಸೋಲಿನ ಸುಳಿಯಿಂದ ಪಾರಾಗಿ ಪಂದ್ಯವನ್ನ ಡ್ರಾ ಮಾಡಿಕೊಂಡಿತು.
ಓದಿ : ಭಾರತ-ಇಂಗ್ಲೆಂಡ್ 2ನೇ ಏಕದಿನ: ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಕೊಹ್ಲಿ ಪಡೆ!