ಬೆಂಗಳೂರು: ಭಾರತ ಹಾಕಿ ತಂಡದ ಸ್ಟ್ರೈಕರ್ ಮಂದೀಪ್ ಸಿಂಗ್ಗೆ ಕೋವಿಡ್ 19 ವರದಿಯಲ್ಲಿ ಪಾಸಿಟಿವ್ ದೃಢಪಟ್ಟಿದೆ. ಆದರೆ ಅವರಿಗೆ ಯಾವುದೇ ರೀತಿಯ ಸೋಂಕಿನ ಲಕ್ಷಣ ಕಂಡುಬಂದಿಲ್ಲ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಎಸ್ಎಐನ ನ್ಯಾಷನಲ್ ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಶಿಬಿರದಲ್ಲಿದ್ದ ಎಲ್ಲ 20 ಆಟಗಾರರಿಗೂ ಕೋವಿಡ್ 19 ಟೆಸ್ಟ್ ಮಾಡಿಸಲಾಗಿತ್ತು. ಇದರಲ್ಲಿ ಸ್ಟ್ರೈಕರ್ ಮಂದೀಪ್ ಸಿಂಗ್ಗೆ ಪಾಸಿಟಿವ್ ಇರುವುದು ದೃಢಪಟ್ಟಿದೆ. ಆದರೆ, ಅವರಲ್ಲಿ ಯಾವುದೇ ರೀತಿಯ ಸೋಂಕಿನ ಲಕ್ಷಣಗಳಿಲ್ಲ ಎಂದು ಸ್ಪೋರ್ಟ್ಸ್ ಅಥಾರಿಟಿ ಆಫ್ ಇಂಡಿಯಾ (ಎಸ್‌ಎಐ) ಸೋಮವಾರ ಹೇಳಿಕೆ ನೀಡಿದೆ.
ಈ ಮೊದಲೇ ಪಾಸಿಟಿವ್ ದೃಢಪಟ್ಟಿರುವ 5 ಆಟಗಾರರ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಮಂದೀಪ್ ಸಿಂಗ್ ಅವರಿಗೂ ಚಿಕಿತ್ಸೆ ನೀಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಇದಕ್ಕೂ ಮೊದಲು ಹಾಕಿ ತಂಡದ ನಾಯಕ ಮನ್ಪ್ರೀತ್ ಸಿಂಗ್, ಸುರೇಂದ್ರ ಕುಮಾರ್, ಜಸ್ಕರಣ್ ಸಿಂಗ್, ವರುಣ್ ಕುಮಾರ್ ಮತ್ತು ಕೃಷ್ಣನ್ ಅವರಿಗೂ ಕೂಡ ಕೋವಿಡ್ 19 ಪಾಸಿಟಿವ್ ದೃಢಪಟ್ಟಿತ್ತು.