ರೋಹ್ಟಕ್(ಹರಿಯಾಣ) : ಟೋಕಿಯೊ ಒಲಿಂಪಿಕ್ಸ್ನಲ್ಲಿ ಭಾರತದ ಪದಕದ ಭರವಸೆ ಮೂಡಿಸಿರುವ ಅಥ್ಲೀಟ್ಗಳಲ್ಲಿ ಒಬ್ಬರಾಗಿರುವ ಅಮಿತ್ ಪಂಗಲ್ ಮಹಾಕ್ರೀಡಾಕೂಟಕ್ಕೆ ಅರ್ಹತೆಗಿಟ್ಟಿಸಿಕೊಂಡಿರುವುದು ತಮ್ಮ ಮೇಲಿನ ಜವಾಬ್ದಾರಿ ಹೆಚ್ಚಿಸಿದೆ ಎಂದು ತಿಳಿಸಿದ್ದಾರೆ.
2020ರಲ್ಲೇ ಟೋಕಿಯೋ ಒಲಿಂಪಿಕ್ಸ್ಗೆ ಅಮಿತ್ ಪಂಗಲ್ ಅರ್ಹತೆಗಿಟ್ಟಿಸಿಕೊಂಡಿದ್ದರು. ಆದರೆ, ವಿಶ್ವದಾದ್ಯಂತ ಕೊರೊನಾ ಸಾಂಕ್ರಾಮಿಕದ ಭೀತಿಯಿಂದ ಒಲಿಂಪಿಕ್ಸ್ 2021ಕ್ಕೆ ಮುಂದೂಡಲ್ಪಟ್ಟಿದೆ. 25 ವರ್ಷದ ಬಾಕ್ಸರ್ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ.
ನಂಬರ್ ಒನ್ ಸ್ಥಾನದಲ್ಲಿರುವ ಪಂಗಲ್ ಒಲಿಂಪಿಕ್ಸ್ನಲ್ಲಿ ತಮ್ಮ ಶ್ರೇಯಾಂಕಕ್ಕೆ ನ್ಯಾಯ ಒದಗಿಸಿಕೊಡುತ್ತಾರೆಯೇ ಎನ್ನುವುದನ್ನು ಕಾದು ನೋಡಬೇಕಿದೆ. 52 ಕೆಜಿ ವಿಭಾಗದ ಬಾಕ್ಸರ್ ತಮ್ಮ ಒಲಿಂಪಿಕ್ಸ್ ಸಿದ್ಧತೆ ಕುರಿತು ಈಟಿವಿ ಭಾರತ್ ನಡೆಸಿದ ಸಂದರ್ಶನದಲ್ಲಿ ಮುಕ್ತವಾಗಿ ಹಂಚಿಕೊಂಡಿದ್ದಾರೆ.
"ಮೊದಲ ಒಲಿಂಪಿಕ್ಸ್ ಕ್ರೀಡಾಕೂಟವನ್ನಾಡುತ್ತಿರುವುದಕ್ಕೆ ಯಾವುದೇ ಒತ್ತಡವಿಲ್ಲ. ಆದರೆ, ಇದು ನನ್ನ ಮೇಲಿನ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ದೇಶದ ಜನರ ನಿರೀಕ್ಷೆಗೆ ತಕ್ಕಂತೆ ಬದುಕುವುದು ಕಷ್ಟ. ಆದರೆ, ಅವರ ನಿರೀಕ್ಷೆಗಳನ್ನು ಈಡೇರಿಸುವ ಜವಾಬ್ದಾರಿ ನನ್ನ ಮೇಲಿದೆ" ಎಂದು ಪಂಗಲ್ ಹೇಳಿದ್ದಾರೆ.
ಇದನ್ನು ಓದಿ:ಏಷ್ಯನ್ ರೆಸ್ಲಿಂಗ್ ಚಾಂಪಿಯನ್ಶಿಪ್ಗೆ ಭಾರತೀಯ ಮಹಿಳಾ ಕುಸ್ತಿ ತಂಡ ಆಯ್ಕೆ
ವೃತ್ತಿ ಜೀವನದಲ್ಲಿ ಎದುರಿಸಿದ ಕಠಿಣ ಬಾಕ್ಸರ್ ಯಾರು ಎಂದು ಕೇಳಿದ್ದಕ್ಕೆ, ಪಂಗಲ್, ಉಜ್ಬೇಕಿಸ್ತಾನ್ ಬಾಕ್ಸರ್ಗಳು ಅತ್ಯಂತ ಪ್ರಬಲ ಎದುರಾಳಿಗಳು. ಅವರು ರಿಂಗ್ನಲ್ಲಿ ತುಂಬಾ ಆಕ್ರಮಣಕಾರಿಯಾಗಿರುತ್ತಾರೆ ಎಂದು ಪಂಗಲ್ ತಿಳಿಸಿದ್ದಾರೆ.
ಆದಾಗ್ಯೂ, ಏಷ್ಯನ್ ಗೇಮ್ಸ್ ಮತ್ತು ಏಷ್ಯನ್ ಚಾಂಪಿಯನ್‌ಶಿಪ್ ಗೋಲ್ಡ್ ಮೆಡಲಿಸ್ಟ್ ಒಲಿಂಪಿಕ್ಸ್ನಲ್ಲಿ ಯಾವುದೇ ಸವಾಲನ್ನು ಸ್ವೀಕರಿಸಲು ಸಿದ್ಧನಿದ್ದೇನೆ. ನಾನು ಮತ್ತು ನಮ್ಮ ಇಡೀ ತಂಡ ಸಂಪೂರ್ಣ ಸಿದ್ಧರಾಗಿದ್ದೇವೆ. ಎಲ್ಲಾ ಬಾಕ್ಸರ್ಗಳು ಅತ್ಯಂತ ಶಕ್ತಿಯುತವಾಗಿದ್ದಾರೆ. ಮಹಾ ಕ್ರೀಡಾಕೂಟದಲ್ಲಿ ಭಾರತಕ್ಕೆ ಗೌರವ ತಂದು ಕೊಡಲು ಉತ್ಸುಕರಾಗಿದ್ದಾರೆ" ಎಂದು ತಿಳಿಸಿದ್ದಾರೆ.