ETV Bharat / sports

ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್​ನಲ್ಲಿ 76 ಕಾರ್​​ಗಳ ಸ್ಪರ್ಧೆ, ಕರ್ನಾಟಕದಿಂದಲೇ 50 ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗಿ! - ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್

ಎಫ್‌ಎಂಎಸ್‌ಸಿಐ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್​ನ 3ನೇ ಸುತ್ತಿನಲ್ಲಿ 76 ಕಾರುಗಳು ಸ್ಪರ್ಧಿಸುತ್ತಿದ್ದು, ಇದು ಚಾಂಪಿಯನ್‌ಶಿಪ್​ನ ದಾಖಲೆಯಾಗಿದೆ.

FMSCI Indian National Rally Championship new record with number of entries
ಎಫ್‌ಎಂಎಸ್‌ಸಿಐ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್‌
author img

By

Published : Jul 28, 2023, 9:09 PM IST

ಕೊಯಮತ್ತೂರು/ಬೆಂಗಳೂರು: ಎಫ್‌ಎಂಎಸ್‌ಸಿಐ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್‌ (ಐಎನ್‌ಆರ್‌ಸಿ)ನ 3ನೇ ಸುತ್ತು ರ್‍ಯಾಲಿ ಆಫ್‌ ಕೊಯಮತ್ತೂರು ಜುಲೈ 29 ಮತ್ತು 30ರಂದು (ಶನಿವಾರ ಹಾಗೂ ಭಾನುವಾರ) ನಡೆಯಲಿದ್ದು, ಬರೋಬ್ಬರಿ 76 ಕಾರ್‌ಗಳ ಸ್ಪರ್ಧಿಸಲಿವೆ. ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಇದೊಂದು ದಾಖಲೆ ಎನಿಸಿದ್ದು, ಮೋಟಾರ್‌ ಸ್ಪೋರ್ಟ್ಸ್‌ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸಿದೆ.

7 ಬಾರಿ ರಾಷ್ಟ್ರೀಯ ಚಾಂಪಿಯನ್‌ ದೆಹಲಿಯ ಗೌರವ್‌ ಗಿಲ್ ಜೊತೆ ಕರ್ನಾಟಕದ 50ಕ್ಕೂ ಹೆಚ್ಚು ಚಾಲಕರು ಹಾಗೂ ಸಹ - ಚಾಲಕರು (ನ್ಯಾವಿಗೇಟರ್‌) ಸ್ಪರ್ಧೆಯಲ್ಲಿದ್ದಾರೆ. ಹಿರಿಯ ಹಾಗೂ ಅನುಭವಿಗಳಾದ ಐಎನ್‌ಆರ್‌ಸಿ ಚಾಂಪಿಯನ್‌ ಕರ್ಣ ಕಡೂರ್‌, ಅಶ್ವಿನ್‌ ನಾಯ್ಕ್‌, ನಿಕಿಲ್‌ ಪೈ, ಪಿ.ವಿ. ಶ್ರೀನಿವಾಸ್‌ ಮೂರ್ತಿ, ಡೀನ್‌ ಮಸ್ಕಾರೇನಸ್‌, ಗಗನ್‌ ಕೆ. ಸೇರಿ ಇನ್ನೂ ಅನೇಕರು ಕಣದಲ್ಲಿದ್ದಾರೆ.

2023ರ ಐಎನ್‌ಆರ್‌ಸಿ ಚಾಂಪಿಯನ್‌ಶಿಪ್‌ನ ಮೊದಲ ಸುತ್ತು ಚೆನ್ನೈನಲ್ಲಿ, 2ನೇ ಸುತ್ತು ಅರುಣಾಚಲ ಪ್ರದೇಶದಲ್ಲಿ ನಡೆದಿತ್ತು. ವಿವಿಧ ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಇನ್ನೂ 4 ಸುತ್ತು ಬಾಕಿ ಇದೆ. 4ನೇ ಸುತ್ತು ಹೈದರಾಬಾದ್‌, 5ನೇ ಸುತ್ತು ಬೆಂಗಳೂರಲ್ಲಿ ನಡೆಯಲಿದ್ದು, 6ನೇ ಸುತ್ತಿಗೆ ಸ್ಥಳ ನಿಗದಿಯಾಗಬೇಕಿದೆ.

ವೇಮ್ಸಿ ಮೆರ್ಲಾ (ವಿಎಂ) ಸ್ಪೋರ್ಟ್ಸ್‌ ಫೌಂಡೇಶನ್‌ ರ್‍ಯಾಲಿಯಲ್ಲಿ ಸ್ಪರ್ಧಿಸುತ್ತಿರುವ ತಂಡಗಳು, ಚಾಲಕರನ್ನು ಬೆಂಬಲಿಸಲು ಮುಂದೆ ಬಂದಿದ್ದು ಭಾರತೀಯ ಮೋಟಾರ್‌ ಸ್ಪೋರ್ಟ್ಸ್‌ನ ದಿಕ್ಕನ್ನೇ ಬದಲಿಸುತ್ತಿದೆ. ವಿಎಂ ಫೌಂಡೇಶನ್‌ ಈ ಸುತ್ತಿನ ಗ್ರಿಡ್‌ನಲ್ಲಿರುವ ಶೇ.50ರಷ್ಟು ಅಂದರೆ 37 ತಂಡಗಳನ್ನು ಬೆಂಬಲಿಸುತ್ತಿದೆ. ಅಗ್ರ ತಂಡಗಳಾದ ಏಮಿಫೀಲ್ಡ್‌ ರ್‍ಯಾಲಿಯಿಂಗ್‌, ಆರ್ಕ್‌ ಮೋಟಾರ್‌ ಸ್ಪೋರ್ಟ್ಸ್‌, ಚೆಟ್ಟಿನಾಡ್‌ ಸ್ಪೋರ್ಟಿಂಗ್‌ ಹಾಗೂ ಅಗ್ರ ಚಾಲಕರಾದ ಮಾಜಿ ಐಎನ್‌ಆರ್‌ಸಿ ಚಾಂಪಿಯನ್‌ ಚೇತನ್‌ ಶಿವರಾಮ್‌, ಪ್ರಿನ್ಸ್‌ (ಮಣೀಂದರ್‌ ಸಿಂಗ್‌) ಹಾಗೂ ಐಮನ್‌ ಅಹ್ಮದ್‌ ರ್‍ಯಾಲಿಯಲ್ಲಿ ಸ್ಪರ್ಧಿಸಲಿದ್ದಾರೆ.

ಮೋಟಾರ್‌ ಸ್ಪೋರ್ಟ್ಸ್‌ ಅಂದರೆ ನನಗೆ ಬಹಳ ಅಚ್ಚುಮೆಚ್ಚು ಎಂದಿರುವ ವಿಎಂ ಸ್ಪೋರ್ಟ್ಸ್‌ ಫೌಂಡೇಶನ್‌ನ ಅಧ್ಯಕ್ಷರಾದ ವೇಮ್ಸಿ ಮೆರ್ಲಾ, 2019ರ ಭಾರತೀಯ ರಾಷ್ಟ್ರೀಯ ರ್‍ಯಾಲಿ ಚಾಂಪಿಯನ್‌ಶಿಪ್‌ ಸೇರಿ ಈ ಹಿಂದೆಯೂ ನಾನು ಹಲವು ಎಫ್‌ಎಂಎಸ್‌ಸಿಐ ಕಾರ್ಯಕ್ರಮಗಳಿಗೆ ಪ್ರಾಯೋಜಕನಾಗಿದ್ದೆ. ಭಾರತದ ಶ್ರೇಷ್ಠ ರ್‍ಯಾಲಿಯಿಸ್ಟ್‌ಗಳು ಹಣದ ಬಗ್ಗೆ ಚಿಂತಿಸದೇ ತಮ್ಮ ಕನಸನ್ನು ಈಡೇರಿಸಿಕೊಳ್ಳಬೇಕು ಎನ್ನುವ ಉದ್ದೇಶದಿಂದಲೇ ನಾನು ಈ ಫೌಂಡೇಶನ್‌ ಆರಂಭಿಸಿದ್ದೇನೆ ಎಂದು ಮೆರ್ಲಾ ಅವರು ತಮ್ಮ ಉದ್ದೇಶವನ್ನು ತಿಳಿಸಿದ್ದಾರೆ.

ವೇಮ್ಸಿ ಫೌಂಡೇಶನ್‌ನಿಂದ ಸಿಕ್ಕಿರುವ ಬೆಂಬಲದ ಬಗ್ಗೆ ಖುಷಿ ವ್ಯಕ್ತಪಡಿಸಿರುವ ಕೊಯಮತ್ತೂರು ಆಟೋ ಸ್ಪೋರ್ಟ್ಸ್‌ ಕ್ಲಬ್‌ನ ಕಾರ್ಯದರ್ಶಿ ಪೃಥ್ವಿರಾಜ್‌, ವಿಎಂ ಫೌಂಡೇಶನ್‌ನಿಂದಾಗಿ ಐಎನ್‌ಆರ್‌ಸಿಎಗೆ ದೊಡ್ಡ ನೆರವು ಸಿಕ್ಕಿದೆ. ಪ್ರತಿ ವರ್ಷ ಆರ್ಥಿಕ ಸಂಕಷ್ಟದಿಂದಾಗಿ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಾಗದೇ ಹಲವು ಚಾಲಕರು ಹಿಂದೆ ಸರಿಯುವುದನ್ನು ನೋಡಿದ್ದೇವೆ. ಆದರೆ, ಈ ಬಾರಿ ಅವರೆಲ್ಲರೂ ಕಣಕ್ಕಿಳಿಯಲಿದ್ದಾರೆ. ಈ ಸಲ ಸ್ಪರ್ಧಾ ಕಣ ಬಹಳಷ್ಟು ಪೈಪೋಟಿಯಿಂದ ಕೂಡಿರಲಿದ್ದು, ಅತಿ ರೋಚಕ ಪೈಪೋಟಿಗೆ ಸಾಕ್ಷಿಯಾಗಲಿದ್ದೇವೆ ಎನ್ನುವ ವಿಶ್ವಾಸವಿದೆ ಎಂದಿದ್ದಾರೆ.

ಇದನ್ನೂ ಓದಿ: Bhuvneshwar Kumar: ಭಾರತ ತಂಡಕ್ಕೆ ವಿದಾಯ ಹೇಳ್ತಾರಾ ಸ್ಟಾರ್​​ ವೇಗಿ.?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.