ETV Bharat / sports

ಫ್ರೆಂಚ್ ಓಪನ್ ಬ್ಯಾಡ್ಮಿಂಟನ್: ಸಾತ್ವಿಕ್-ಚಿರಾಗ್‌ ಜೋಡಿ ಚಾಂಪಿಯನ್ - ಈಟಿವಿ ಭಾರತ ಕನ್ನಡ

ಫ್ರೆಂಚ್ ಓಪನ್ ಬ್ಯಾಡ್ಮಿಂಟನ್​ನಲ್ಲಿ ಸಾತ್ವಿಕ್ ಮತ್ತು ಚಿರಾಗ್ ಪುರುಷರ ಡಬಲ್ಸ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

Etv Bharat
ಪುರುಷರ ಡಬಲ್ಸ್​ನಲ್ಲಿ ಸಾತ್ವಿಕ್ ಮತ್ತು ಚಿರಾರ್​ಗೆ ಪ್ರಶಸ್ತಿಯ ಗರಿ
author img

By

Published : Nov 1, 2022, 8:00 AM IST

ಸಾರ್‌ಬ್ರೂಕನ್‌(ಜರ್ಮನಿ): ಭಾರತದ ಬ್ಯಾಡ್ಮಿಂಟನ್ ಜೋಡಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಫ್ರೆಂಚ್ ಓಪನ್ 2022 ರ ಪುರುಷರ ಡಬಲ್ಸ್ ಪ್ರಶಸ್ತಿ ಗೆದ್ದಿದ್ದಾರೆ. ಚೈನೀಸ್ ತೈಪೆಯ ಲು ಚಿಂಗ್ ಯಾವೊ ಮತ್ತು ಯಾಂಗ್ ಪೊ ಹಾನ್ ಅವರನ್ನು ಸೋಲಿಸಿ ಈ ಸಾಧನೆ ಮಾಡಿದರು.

ಭಾನುವಾರ ಫೈನಲ್‌ ಪಂದ್ಯ ನಡೆಯಿತು. 2019ರ ಆವೃತ್ತಿಯಲ್ಲಿ ರನ್ನರ್ ಅಪ್ ಸ್ಥಾನ ಪಡೆದಿದ್ದ ವಿಶ್ವದ 8ನೇ ಶ್ರೇಯಾಂಕದ ಈ ಜೋಡಿ 48 ನಿಮಿಷಗಳ ಕಾಲ ನಡೆದ ಪಂದ್ಯದಲ್ಲಿ ಎದುರಾಳಿಯನ್ನು 21-13 ಮತ್ತು 21-19 ರಿಂದ ಸೋಲಿಸಿದೆ.

ಇಂಡಿಯನ್ ಓಪನ್ ಸೂಪರ್ 500 ಪ್ರಶಸ್ತಿ, ಕಾಮನ್‌ವೆಲ್ತ್ ಗೇಮ್ಸ್ ಚಿನ್ನ, ಥಾಮಸ್ ಕಪ್ ಮತ್ತು ಆಗಸ್ಟ್‌ನಲ್ಲಿ ನಡೆದ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕವನ್ನು ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಗೆದ್ದುಕೊಂಡಿದ್ದರು.

ಇದನ್ನೂ ಓದಿ : FIFA U 17 Women's World Cup: ಮತ್ತೆ ಪ್ರಶಸ್ತಿ ಮುಡಿಗೇರಿಸಿ ಕೊಂಡ ಸ್ಪೇನ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.