ಢಾಕಾ(ಬಾಂಗ್ಲಾದೇಶ): ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿಯಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ ಸೆಣಸಾಟ ನಡೆಸಲಿದೆ. ಸೆಮಿಫೈನಲ್ ಹಾದಿ ಸುಗಮಗೊಳಿಸಿಕೊಳ್ಳುವ ಉದ್ದೇಶದಿಂದ ಭಾರತಕ್ಕೆ ಈ ಪಂದ್ಯ ಮಹತ್ವದಾಗಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಏಳುಬೀಳು ಕಂಡಿದ್ದು, ತಾನು ಆಡಿರುವ ಮೊದಲ ಪಂದ್ಯದಲ್ಲಿ ಕೊರಿಯಾ ವಿರುದ್ಧ 2-2 ಅಂತರದಿಂದ ಡ್ರಾ ಸಾಧಿಸಿದ್ದು, ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ 9-0 ಅಂತರದಿಂದ ಜಯ ಸಾಧಿಸಿದೆ. ಏಷ್ಯನ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಉಭಯ ತಂಡಗಳು ತಲಾ ಮೂರು ಸಲ ವಿಜೇತವಾಗಿವೆ. ಆದರೆ, ಕಳೆದ ಕೆಲ ವರ್ಷಗಳಿಂದ ಪಾಕ್ ತಂಡ ಹೇಳಿಕೊಳ್ಳುವಂತಹ ಪ್ರದರ್ಶನ ನೀಡುತ್ತಿಲ್ಲವಾದರಿಂದ ಇಂದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುವ ನೆಚ್ಚಿನ ತಂಡ ಎನ್ನಲಾಗಿದೆ.
ಇದನ್ನೂ ಓದಿರಿ: ಸಾವು ಗೆದ್ದ ದಿವ್ಯಾಂಶಿ... ಕೊಳವೆ ಬಾವಿಗೆ ಬಿದ್ದಿದ್ದ 1 ವರ್ಷದ ಬಾಲಕಿಯ ರಕ್ಷಣೆ
ಭಾರತ-ಪಾಕಿಸ್ತಾನ ಇಲ್ಲಿಯವರೆಗೆ 175 ಸಲ ಮುಖಾಮುಖಿಯಾಗಿದ್ದು, ಪಾಕ್ 82 ಹಾಗೂ ಭಾರತ 62 ಸಲ ಗೆಲುವು ಸಾಧಿಸಿದೆ. ಇಂದು ಸಂಜೆ 7:30ಕ್ಕೆ ಪಂದ್ಯ ಆರಂಭಗೊಳ್ಳಲಿದೆ. ಪಾಕಿಸ್ತಾನ ಈಗಾಗಲೇ ತಾನು ಆಡಿರುವ ಮೊದಲ ಪಂದ್ಯದಲ್ಲಿ ಡ್ರಾ ಸಾಧಿಸುವಲ್ಲಿ ಯಶಸ್ವಿಯಾಗಿದೆ.