ETV Bharat / sports

ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ದಿನ: ಭಾರತದ ಘನತೆ ಹೆಚ್ಚಿಸಿದ​ ಅಥ್ಲೀಟ್‌ಗಳಿವರು..

author img

By

Published : Jun 24, 2022, 6:09 PM IST

Updated : Jun 24, 2022, 6:26 PM IST

ಒಲಿಂಪಿಕ್ಸ್‌ನಲ್ಲಿ ಭಾರತೀಯ ಅಥ್ಲೀಟ್‌ಗಳು ಅಚ್ಚಳಿಯದ ಸಾಧನೆ ಮಾಡಿದ್ದಾರೆ. ಇದು ಪ್ರತಿ ಭಾರತೀಯನೂ ಹೆಮ್ಮೆ ಪಡಬೇಕಾದ ಸಂಗತಿ. 2022ರ ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ದಿನಾಚರಣೆಯ ಈ ಸಂದರ್ಭದಲ್ಲಿ ಟಾಪ್ ಭಾರತೀಯ ಕ್ರೀಡಾಪಟುಗಳ ಸಾಧನೆ ತಿಳಿಯೋಣ.

International Olympics Day: India's top performers in Olympics

ಪ್ರತಿ ವರ್ಷ ಜೂನ್ 23 ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ದಿನಾಚರಣೆ ನಡೆಯುತ್ತದೆ. ಒಲಿಂಪಿಕ್ಸ್‌ ಎಂಬುದು ಜಗತ್ತಿನ ಪ್ರಮುಖ ಕ್ರೀಡಾಕೂಟಗಳಲ್ಲಿ ಒಂದಾಗಿದ್ದು, ಸಾವಿರಾರು ವರ್ಷಗಳ ಇತಿಹಾಸ ಹೊಂದಿದೆ. ಪ್ರತಿ ನಾಲ್ಕು ವರ್ಷಗಳಿಗೊಮ್ಮೆ ಜಾಗತಿಕ ಕ್ರೀಡಾಕೂಟ ನಡೆದುಕೊಂಡು ಬರುತ್ತಿದೆ.

  • ಟೋಕಿಯೊ ಒಲಿಂಪಿಕ್ಸ್‌ನಲ್ಲಿ ನೀರಜ್ ಚೋಪ್ರಾ ಅವರು ಜಾವೆಲಿನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದುಕೊಂಡರು. ಇವರು ಶೂಟರ್​ ಅಭಿನವ್ ಬಿಂದ್ರಾ ನಂತರ ಚಿನ್ನ ಗೆದ್ದ ಎರಡನೇ ಭಾರತೀಯ ಕ್ರೀಡಾಪಟು. ಜಾವೆಲಿನ್ ಎಸೆತದಲ್ಲಿ ಭಾರತಕ್ಕೆ ದಕ್ಕಿದ ಮೊದಲ ಚಿನ್ನದ ಪದಕ ಇದಾಗಿದೆ. ಇತ್ತೀಚೆಗಷ್ಟೇ ಇವರು 89.30 ಮೀಟರ್‌ ದೂರ ಜಾವೆಲಿನ್‌ ಎಸೆಯುವ ಮೂಲಕ ತಮ್ಮದೇ ದಾಖಲೆ ಮುರಿದರು.

    ನೀರಜ್ ಚೋಪ್ರಾ
  • ಶೂಟಿಂಗ್‌ ದಂತಕತೆ ಅಭಿನವ್‌ ಬಿಂದ್ರಾ 2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10 ಮೀ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದರು. ಈ ಸಾಧನೆಗೈದ ಮೊದಲ ಭಾರತೀಯ ಕ್ರೀಡಾಪಟು ಇವರು.

    ಅಭಿನವ್‌ ಬಿಂದ್ರಾ (ಮಧ್ಯದಲ್ಲಿರುವವರು)
  • ಮೀರಾಬಾಯಿ ಚಾನು ಮಹಿಳೆಯರ 49 ಕೆಜಿ ವೇಟ್‌ಲಿಫ್ಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಮಣಿಪುರದ ಅಥ್ಲೀಟ್ ಒಟ್ಟು 202 ಕೆಜಿ ಭಾರ ಎತ್ತು ಮೂಲಕ ದೇಶವೇ ಹೆಮ್ಮೆ ಪಡುವಂಥ ಸಾಧನೆ ತೋರಿದ್ದಾರೆ.

    ಮೀರಾಬಾಯಿ ಚಾನು
  • ಪಿ.ವಿ.ಸಿಂಧು 2016ರ ರಿಯೊ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಮತ್ತು ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್‌ನಲ್ಲಿ ಕಂಚಿನ ಪದಕ ಸಾಧನೆ ಮಾಡಿದರು. ಕುಸ್ತಿಪಟು ಸುಶೀಲ್ ಕುಮಾರ್ ನಂತರ ಎರಡು ಒಲಿಂಪಿಕ್ ಪದಕಗಳನ್ನು ಗೆದ್ದ ಮೊದಲ ಭಾರತೀಯಳು ಎಂಬ ಹೆಮ್ಮೆ ಕೂಡ ಇವರದ್ದು.

    ಪಿ.ವಿ.ಸಿಂಧು
  • ಭಾರತದ ಬಾಕ್ಸಿಂಗ್ ದಂತಕಥೆ ಮೇರಿ ಕೋಮ್ 2012ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ 51 ಕೆಜಿ ತೂಕ ವಿಭಾಗದಲ್ಲಿ ಕಂಚಿನ ಪದಕ ತನ್ನದಾಗಿಸಿಕೊಂಡರು. ಒಲಿಂಪಿಕ್ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಬಾಕ್ಸರ್ ಮತ್ತು ವಿಜೇಂದರ್ ನಂತರ ಪದಕ ಗೆದ್ದ 2ನೇ ಭಾರತೀಯ ಬಾಕ್ಸರ್ ಇವರಾಗಿದ್ದಾರೆ.

    ಮೇರಿ ಕೋಮ್
  • ಭಾರತದ ಟೆನಿಸ್ ದಿಗ್ಗಜ ಲಿಯಾಂಡರ್ ಪೇಸ್ 1996ರ ಅಟ್ಲಾಂಟಾ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್ ಟೆನಿಸ್‌ನಲ್ಲಿ ಕಂಚಿನ ಪದಕ ಗೆದ್ದರು. ಖಾಷಭ ದಾದಾಸಾಹೇಬ್ ಜಾಧವ್ ನಂತರ ಒಲಿಂಪಿಕ್ ಪದಕ ಗೆದ್ದ ಎರಡನೇ ಭಾರತೀಯ ಅಥ್ಲೀಟ್‌ ಎಂಬ ಹಿರಿಮೆ ಇವರದ್ದು.

    ಲಿಯಾಂಡರ್ ಪೇಸ್ (ಬಲ ತುದಿಯಲ್ಲಿರುವವರು)
  • ಜರ್ಮನಿಯ ಸರ್ವಾಧಿಕಾರಿ ಹಿಟ್ಲರ್​​ ಬೆರಗುಗೊಳಿಸಿದ ಕ್ರೀಡಾ ಮಾಂತ್ರಿಕ ಮೇಜರ್ ಧ್ಯಾನ್ ಚಂದ್. ಭಾರತೀಯ ಹಾಕಿ ತಂಡದ ನಾಯಕರಾಗಿ ಸೇವೆ ಸಲ್ಲಿಸುವ ಅವಕಾಶ ಪಡೆದ ಧ್ಯಾನ್ ಚಂದ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸತತ ಮೂರು ಚಿನ್ನದ ಪದಕಗಳನ್ನು ಗೆದ್ದು ತಂದವರು.

    ಮೇಜರ್ ಧ್ಯಾನ್ ಚಂದ್
  • ಇತ್ತೀಚೆಗೆ ನಡೆದ 2020ರ ಟೊಕಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಒಂದು ಚಿನ್ನದ ಪದಕ, ಎರಡು ಬೆಳ್ಳಿ ಪದಕ, ಹಾಗೂ ನಾಲ್ಕು ಕಂಚಿನ ಪದಕ ಗಳಿಸಿದೆ. ಒಲಿಂಪಿಕ್‌ ಕ್ರೀಡಾಕೂಟದಲ್ಲಿ ಭಾರತವು ಒಟ್ಟು 35 ಪದಕ ಸಾಧನೆ ತೋರಿದೆ. ಇದರಲ್ಲಿ 10 ಬಂಗಾರ, 9 ಬೆಳ್ಳಿ ಹಾಗು 16 ಕಂಚಿನ ಪದಕಗಳಿವೆ.

    ಅಂತಾರಾಷ್ಟ್ರೀಯ ಒಲಿಂಪಿಕ್ ದಿನ

Last Updated : Jun 24, 2022, 6:26 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.