ನವದೆಹಲಿ: ಗುಜರಾತ್ನಲ್ಲಿ ಸೆಪ್ಟೆಂಬರ್ನಲ್ಲಿ ನಡೆಯುವ ರಾಷ್ಟ್ರೀಯ ಕ್ರೀಡಾಕೂಟದಲ್ಲಿ ದೇಶಿಯ ಕ್ರೀಡೆಗಳನ್ನು ಉತ್ತೇಜಿಸುವ ಸಲುವಾಗಿ ಮಲ್ಲಗಂಬ ಮತ್ತು ಯೋಗಾಸನಕ್ಕೆ ಅವಕಾಶ ನೀಡಲಾಗಿದೆ. ಕೇರಳಲ್ಲಿ ಇತ್ತೀಚೆಗೆ ಮುಕ್ತಾಯವಾದ ಖೇಲೋ ಇಂಡಿಯಾದಲ್ಲಿ ಈ ಕ್ರೀಡೆಗಳನ್ನು ಸೇರಿಸಿಕೊಳ್ಳಲಾಗಿತ್ತು.
ಏಕತೆಗಾಗಿ ಕ್ರೀಡೆಯನ್ನು ಆಯೋಜಿಸಲಾಗಿದ್ದು, ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಒಟ್ಟು 36 ಕ್ರೀಡೆಗಳು ಮತ್ತು ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕ್ರೀಡಾ ತಂಡಗಳು ಭಾಗವಹಿಸಲಿವೆ ಎಂದು ಭಾರತೀಯ ಒಲಿಂಪಿಕ್ ಸಂಸ್ಥೆ (ಐಒಎ) ಬುಧವಾರ ಪ್ರಕಟಿಸಿದೆ.
ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಇತ್ತೀಚೆಗೆ ಘೋಷಿಸಿದಂತೆ ಗಾಂಧಿನಗರ, ಅಹಮದಾಬಾದ್, ಸೂರತ್, ವಡೋದರಾ, ರಾಜ್‌ಕೋಟ್ ಮತ್ತು ಭಾವನಗರದಲ್ಲಿ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 10 ರ ವರೆಗೆ ರಾಷ್ಟ್ರೀಯ ಕ್ರೀಡಾಕೂಟ ನಡೆಯಲಿದೆ.
ಕೇರಳದಲ್ಲಿ ನಡೆದ 35ನೇ ಖೇಲೋ ಇಂಡಿಯಾ ಯೂಥ್ ಗೇಮ್ಸ್ನಲ್ಲಿ 33 ಕ್ರೀಡೆಗಳಿದ್ದವು. ಇದರಲ್ಲಿ ದೇಶಿಯ ಕ್ರೀಡೆಯಾದ ಮಲ್ಲಗಂಬವನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಇದೀಗ ಯೋಗಕ್ಕೂ ಕ್ರೀಡಾ ಸ್ಥಾನ ನೀಡಲಾಗಿದೆ.
ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆ: ಸೋನಿಯಾ ಪರ ಘೋಷಣೆ ಕೂಗಿದ ಕೈ ಕಾರ್ಯಕರ್ತರು