ನವದೆಹಲಿ: ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಿದೆ. 2024ರ ಜನವರಿ 9ರಂದು (ಮಂಗಳವಾರ) 11 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗುವ ವಿಶೇಷ ಸಮಾರಂಭದಲ್ಲಿ ಭಾರತದ ರಾಷ್ಟ್ರಪತಿಗಳಿಂದ ಪ್ರಶಸ್ತಿಗಳನ್ನು ಕ್ರೀಡಾಪಟುಗಳು ಸ್ವೀಕರಿಸಲಿದ್ದಾರೆ.
ಪ್ರಶಸ್ತಿಗಳು ಈ ಕೆಳಗಿನಂತಿವೆ:
ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ: ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ (ಬ್ಯಾಡ್ಮಿಂಟನ್)
ಅರ್ಜುನ ಪ್ರಶಸ್ತಿ: ಮೊಹಮ್ಮದ್ ಶಮಿ (ಕ್ರಿಕೆಟ್), ಅಜಯ್ ರೆಡ್ಡಿ (ಅಂಧ ಕ್ರಿಕೆಟ್), ಓಜಸ್ ಪ್ರವೀಣ್ ಡಿಯೋಟಾಲೆ, ಅದಿತಿ ಗೋಪಿಚಂದ್ ಸ್ವಾಮಿ (ಆರ್ಚರಿ), ಶೀತಲ್ ದೇವಿ (ಪ್ಯಾರಾ ಆರ್ಚರಿ), ಪಾರುಲ್ ಚೌಧರಿ ಮತ್ತು ಮುರಳಿ ಶ್ರೀಶಂಕರ್ (ಅಥ್ಲೆಟಿಕ್ಸ್), ಮೊಹಮ್ಮದ್ ಹುಸಾಮುದ್ದೀನ್ (ಬಾಕ್ಸಿಂಗ್), ಆರ್ ವೈಶಾಲಿ (ಚೆಸ್), ದಿವ್ಯಾಕೃತಿ ಸಿಂಗ್ ಮತ್ತು ಅನುಷ್ ಅಗರ್ವಾಲಾ (ಈಕ್ವೆಸ್ಟ್ರಿಯನ್), ದೀಕ್ಷಾ ದಾಗರ್ (ಗಾಲ್ಫ್), ಕ್ರಿಶನ್ ಬಹದ್ದೂರ್ ಪಾಠಕ್ ಮತ್ತು ಸುಶೀಲಾ ಚಾನು (ಹಾಕಿ), ಪಿಂಕಿ (ಲಾನ್ ಬಾಲ್), ಐಶ್ವರಿ ಪ್ರತಾಪ್ ಸಿಂಗ್ ತೋಮರ್, ಇಶಾ ಸಿಂಗ್ (ಶೂಟಿಂಗ್), ಆಂಟಿಮ್ ಪಂಗಲ್, ಸುನಿಲ್ ಕುಮಾರ್ (ಕುಸ್ತಿ), ಐಹಿಕಾ ಮುಖರ್ಜಿ (ಟೇಬಲ್ ಟೆನಿಸ್), ಹರಿಂದರ್ ಪಾಲ್ ಸಿಂಗ್ ಸಂಧು (ಸ್ಕ್ವಾಷ್), ನವೋರೆಮ್ ರೋಶಿಬಿನಾ ದೇವಿ (ವುಶು), ಪ್ರಾಚಿ ಯಾದವ್ (ಪ್ಯಾರಾ ಕ್ಯಾನೋಯಿಂಗ್), ಪವನ್ ಕುಮಾರ್, ರಿತು ನೇಗಿ (ಕಬಡ್ಡಿ), ನಸ್ರೀನ್ (ಖೋ ಖೋ).
ದ್ರೋಣಾಚಾರ್ಯ ಪ್ರಶಸ್ತಿ 2023: ಗಣೇಶ್ ಪ್ರಭಾಕರನ್ (ಮಲ್ಲಕಂಬ), ಮಹಾವೀರ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್), ಲಲಿತ್ ಕುಮಾರ್ (ಕುಸ್ತಿ), ಆರ್‌ಬಿ ರಮೇಶ್ (ಚೆಸ್), ಶಿವೇಂದ್ರ ಸಿಂಗ್ (ಹಾಕಿ).
ಧ್ಯಾನ್ ಚಂದ್ ಜೀವಮಾನ ಪ್ರಶಸ್ತಿ: ಕವಿತಾ (ಕಬಡ್ಡಿ), ಮಂಜುಷಾ ಕನ್ವರ್ (ಬ್ಯಾಡ್ಮಿಂಟನ್) ವಿನೀತ್ ಕುಮಾರ್ ಶರ್ಮಾ (ಹಾಕಿ).
ಮೌಲಾನಾ ಅಬುಲ್ ಕಲಾಂ ಆಜಾದ್ ಟ್ರೋಫಿ 2023: ಗುರುನಾನಕ್ ದೇವ್ ವಿಶ್ವವಿದ್ಯಾಲಯ, ಅಮೃತಸರ (ವಿಜೇತ), ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ, ಪಂಜಾಬ್ (1ನೇ ರನ್ನರ್ ಅಪ್), ಕುರುಕ್ಷೇತ್ರ ವಿಶ್ವವಿದ್ಯಾಲಯ, ಕುರುಕ್ಷೇತ್ರ (2ನೇ ರನ್ನರ್ ಅಪ್).
ಕ್ರೀಡೆಯಲ್ಲಿನ ಶ್ರೇಷ್ಠತೆಯನ್ನು ಗುರುತಿಸಲು ಮತ್ತು ಪುರಸ್ಕರಿಸಲು ಪ್ರತಿ ವರ್ಷ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ನೀಡಲಾಗುತ್ತಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಅದ್ಭುತ ಮತ್ತು ಅತ್ಯುತ್ತಮ ಪ್ರದರ್ಶನಕ್ಕಾಗಿ 'ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ' ನೀಡಲಾಗುತ್ತಿದೆ. ಉತ್ತಮ ಪ್ರದರ್ಶನ ಮತ್ತು ನಾಯಕತ್ವ, ಕ್ರೀಡಾ ಮನೋಭಾವ, ಶಿಸ್ತಿನ ಪ್ರಜ್ಞೆಯ ಗುಣಕ್ಕಾಗಿ ಅರ್ಜುನ ಪ್ರಶಸ್ತಿ ನೀಡಲಾಗುತ್ತಿದೆ. ಅತ್ಯುತ್ತಮ ತರಬೇತುದಾರರಿಗೆ ದ್ರೋಣಾಚಾರ್ಯ ಪ್ರಶಸ್ತಿ ಹಾಗೆಯೇ ಕ್ರೀಡೆಗಾಗಿ ಸಲ್ಲಿಸಿದ ಸೇವೆ, ಕ್ರಿಡೆಯ ಬೆಳವಣಿಗೆಗೆ ಕೊಟ್ಟ ಕೊಡುಗೆ ಪರಿಗಣಿಸಿ ಕ್ಷೇತ್ರದ ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿ ನೀಡಲಾಗುತ್ತದೆ.
ಇದನ್ನೂ ಓದಿ: ಏಷ್ಯನ್ ಗೇಮ್ಸ್ 2023ರ ಭಾರತದ ಐತಿಹಾಸಿಕ ಸಾಧನೆಯ ಹಿನ್ನೋಟ