ನವದೆಹಲಿ : ಟೋಕಿಯೋ ಒಲಿಂಪಿಕ್ಸ್ನಲ್ಲಿ ಐತಿಹಾಸಿಕ ಚಿನ್ನದ ಪದಕ ಗೆದ್ದಿರುವ ಜಾವಲಿನ್ ಥ್ರೋವರ್ ನೀರಜ್ ಚೋಪ್ರಾ ಪರಮ್ ವಿಶಿಷ್ಟ್ ಸೇವಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಗಣರಾಜ್ಯೋತ್ಸವ ಮುನ್ನ ದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಂದ ನೀರಜ್ ಪ್ರತಿಷ್ಠಿತ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ಭವನದಲ್ಲಿ ಮಂಗಳವಾರ ಸಂಜೆ ರಾಷ್ಟ್ರಪತಿ ಕೋವಿಂದ್ ಅವರು 384 ರಕ್ಷಣಾ ಸಿಬ್ಬಂದಿಗೆ ವಿವಿಧ ಪ್ರಶಸ್ತಿಗಳನ್ನು ನೀಡಿ ಗೌರವಿಸಲಿದ್ದಾರೆ. ಈ ಸಂದರ್ಭದಲ್ಲಿ 12 ಮಂದಿಗೆ ಶೌರ್ಯ ಚಕ್ರ ಪ್ರಶಸ್ತಿ, 29 ಪರಮ್ ವಿಶಿಷ್ಠ್ ಸೇವಾ ಪದಕ, 4 ಉತ್ತಮ್ ಯುಧ್ ಸೇವಾ ಪದಕಗಳು, 53 ಅತಿ ವಿಶಿಷ್ಠ ಸೇವಾ ಪದಕಗಳು, 13 ಯುಧ್ ಸೇವಾ ಪದಕಗಳು ಮತ್ತು ಮೂರು ವಿಶಿಷ್ಠ್ ಸೇವಾ ಪದಕಗಳನ್ನು ನೀಡಲಿದ್ದಾರೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ನೀರಜ್ ಚೋಪ್ರಾ ಭಾರತೀಯ ಸೇನೆಯಲ್ಲಿ ಸುಬೇದಾರ್ ಆಗಿದ್ದಾರೆ. ಅವರು 2016ರಲ್ಲಿ ಸೇನೆ ಸೇರಿದ್ದರು. ಅವರನ್ನು ಪುಣೆಯ ಮಿಷನ್ ಒಲಿಂಪಿಕ್ಸ್ ವಿಂಗ್ ಮತ್ತು ಆರ್ಮಿ ಸ್ಪೋರ್ಟ್ಸ್ ಇನ್ಸ್ಟಿಟ್ಯೂಟ್ನಲ್ಲಿ ತರಬೇತಿಗೆ ಆಯ್ಕೆ ಮಾಡಲಾಗಿತ್ತು.
ನೀರಜ್ ಟೋಕಿಯೋ ಒಲಿಂಪಿಕ್ಸ್ನ ಜಾವಲಿನ್ ಥ್ರೋ ವಿಭಾಗದಲ್ಲಿ 87.58 ಮೀಟರ್ ದೂರ ಎಸೆದು ಚಿನ್ನದ ಪದಕ ಪಡೆದಿದ್ದಾರೆ. ಈ ಮೂಲಕ ಒಲಿಂಪಿಕ್ಸ್ ಇತಿಹಾಸದಲ್ಲಿ ಅಥ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಮೊದಲ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು.
2017ರ ಏಷ್ಯನ್ ಚಾಂಪಿಯನ್ಶಿಪ್ನಲ್ಲಿ, 2018ರ ಏಷ್ಯನ್ ಗೇಮ್ಸ್ ಮತ್ತು 2018ರ ಕಾಮನ್ವೆಲ್ತ್ ಗೇಮ್ಸ್ನಲ್ಲೂ ಚಿನ್ನದ ಪದಕ ಪಡೆದಿದ್ದರು. ಇತ್ತೀಚೆಗೆ ರಾಷ್ಟ್ರಪತಿಗಳಾದ ರಾಮನಾಥ್ ಕೋವಿಂದ್ ಅವರು ನೀರಜ್ ಚೋಪ್ರಾಗೆ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು
ಇದನ್ನೂ ಓದಿ: ಐಸಿಸಿ ಟಿ20 ರ‍್ಯಾಂಕಿಂಗ್ : ಅಗ್ರಸ್ಥಾನಕ್ಕೆ ಮರಳಿದ ಭಾರತದ ಶೆಫಾಲಿ ವರ್ಮಾ