ನವದೆಹಲಿ: ಛತ್ರಸಾಲ್ ಸ್ಟೇಡಿಯಂನಲ್ಲಿ ಕುಸ್ತಿಪಟು ಸಾಗರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರ ವಿರುದ್ಧ ಡೆಲ್ಲಿ ಹೈಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
23 ವರ್ಷದ ಯುವ ಕುಸ್ತಿಪಟುವಿನ ಕೊಲೆ ಪ್ರಕರಣದಲ್ಲಿ ಸುಶೀಲ್ ಕುಮಾರ್ ಪಾತ್ರ ಇರಬಹುದು ಎಂದು ಅನುಮಾನಿಸಿರುವ ದೆಹಲಿ ಪೊಲೀಸರು ಅವರಿಗಾಗಿ ಕಳೆದು ಒಂದು ವಾರದಿಂದ ನೆರೆಹೊರೆಯ ರಾಜ್ಯಗಳಲ್ಲೂ ಹುಡುಕಾಟ ನಡೆಸಿದ್ದಾರೆ. ಈಗಾಗಲೆ ಸುಶೀಲ್ ಮತ್ತು ಇತರ 9 ಮಂದಿಯ ವಿರುದ್ಧ ಲುಕ್ಔಟ್ ನೋಟಿಸ್ ಕೂಡ ಜಾರಿಯಾಗಿದೆ.
ಕುಮಾರ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದೆವು. ನಮ್ಮ ಅರ್ಜಿಯನ್ನು ಕೋರ್ಟ್ ಅಂಗೀಕರಿಸಿದೆ ಎಂದು ಪೊಲೀಸರು ತಿಳಿಸಿದ್ದು, ಜಾಮೀನುರಹಿತ ವಾರಂಟ್ ಜೊತೆಗೆ ಸುಶೀಲ್ ಕುಮಾರ್ ಬಂಧನಕ್ಕೆ ಬಹುಮಾನ ಘೋಷಿಸಲು ದೆಹಲಿ ನಿರ್ಧರಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ತಮ್ಮ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಸುಶೀಲ್ ಕುಮಾರ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ. ಪೊಲೀಸರು ಅವರ ಮನೆ ಸೇರಿದಂತೆ ಸ್ನೇಹಿತರ ಮನೆಗಳ ಮೇಲೂ ದಾಳಿ ಮಾಡಿದ್ದಾರೆ. ಸಿಗದ ಕಾರಣ ಹುಡುಕಿಕೊಟ್ಟವರಿಗೆ ಅಥವಾ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಲು ತೀರ್ಮಾನಿಸಿದ್ದೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿ:ಕೊಲೆ ಆರೋಪ ಕೇಸ್ : ಕುಸ್ತಿಪಟು ಸುಶೀಲ್ಕುಮಾರ್ಗಾಗಿ ಮುಂದುವರಿದ ಶೋಧ