ಕೊಲಂಬಿಯಾ: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022 ರಲ್ಲಿ ಭಾರತೀಯ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಇದುವರೆಗೆ ಭಾರತೀಯ ಸ್ಪರ್ಧಿಗಳು ಚಿನ್ನ, ಬೆಳ್ಳಿ, ಕಂಚು ಸೇರಿ 19 ಪದಕಗಳನ್ನು ಗೆದ್ದು 7 ನೇ ಸ್ಥಾನ ಅಲಂಕರಿಸಿದ್ದಾರೆ. ಒಂದೆಡೆ ಭಾರತೀಯರು ಕಾಮನ್‌ವೆಲ್ತ್ ಗೇಮ್ಸ್ನಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದರೆ, ಮತ್ತೊಂದೆಡೆ ಭಾರತದ ಯುವ ತಾರೆಗಳು ವಿಶ್ವ ಅಥ್ಲೆಟಿಕ್ಸ್ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.
ಕೊಲಂಬಿಯಾದಲ್ಲಿ ನಡೆಯುತ್ತಿರುವ ವಿಶ್ವ ಅಂಡರ್ 20 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 400 ಮೀ ಓಟದಲ್ಲಿ ರೂಪಲ್ ಚೌಧರಿ ಕಂಚಿನ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ. 51.85 ಸೆಕೆಂಡ್ನಲ್ಲಿ ಗುರಿ ತಲುಪುವ ಮೂಲಕ ದೇಶಕ್ಕೆ 2ನೇ ಪದಕಗಳನ್ನು ಗೆದ್ದು ಕೊಟ್ಟಿದ್ದಾರೆ. ಈ ಹಿಂದೆ 4*400 ಮೀ ಮಿಶ್ರ ರಿಲೇ ಓಟದಲ್ಲಿ ಭಾರತ ತಂಡವು ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿತ್ತು.
ಇದನ್ನೂ ಓದಿ: ವಿಶ್ವ ಅಂಡರ್-20 ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್: ರಿಲೇಯಲ್ಲಿ ಭಾರತಕ್ಕೆ ಬೆಳ್ಳಿ ಪದಕ