ಭರತಪುರ, ರಾಜಸ್ಥಾನ್: ಮಲ್ಕಾಂಬ್ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷ ರಮೇಶ್ ಇಂಡೋಲಿಯಾ ವಿರುದ್ಧ 7 ಬಾಲಕಿಯರು ಮತ್ತು ಯುವಕರು ಲೈಂಗಿಕ ದೌರ್ಜನ್ಯ ದೂರು ನೀಡಿದ್ದಾರೆ. ಆಟಗಾರರ ದೂರಿನ ಬಳಿಕ ರಮೇಶ್ ಇಂಡೋಲಿಯಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಎಲ್ಲ ಏಳು ವಿದ್ಯಾರ್ಥಿ ಆಟಗಾರರು ರಾಜಸ್ಥಾನದ ವಿವಿಧ ನಗರಗಳ ನಿವಾಸಿಗಳಾಗಿದ್ದು, ಮೇ-ಜೂನ್‌ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಮಾಹಿತಿಯ ಪ್ರಕಾರ, ಫೆಡರೇಶನ್ ಅಧ್ಯಕ್ಷ ರಮೇಶ್ ಇಂಡೋಲಿಯಾ ವಿರುದ್ಧ 7 ಅಪ್ರಾಪ್ತ ವಿದ್ಯಾರ್ಥಿಗಳು ಸೇರಿದಂತೆ 8 ಅಥ್ಲೀಟ್‌ಗಳಿಂದ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ದೂರು ನೀಡಿದ್ದಾರೆ. ಬಳಿಕ ಒಕ್ಕೂಟದ ವಿಶೇಷ ಮಹಾಸಭೆ ಆಯೋಜಿಸಲಾಗಿತ್ತು. ಸಭೆಯ ನಿರ್ಧಾರದ ನಂತರ ರಮೇಶ್ ಇಂಡೋಲಿಯಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪ್ರಕರಣದ ತನಿಖೆಗೆ ಸಮಿತಿ ರಚನೆ: ಈ ಸಂಪೂರ್ಣ ವಿಷಯದ ಬಗ್ಗೆ ತನಿಖಾ ಸಮಿತಿಯನ್ನು ರಚಿಸಲಾಗಿದೆ. ಈ ಸಂಪೂರ್ಣ ಬೆಳವಣಿಗೆಗೆ ಸಂಬಂಧಿಸಿದಂತೆ ಭಾರತೀಯ ಕ್ರೀಡಾ ಪ್ರಾಧಿಕಾರವು ಕಟ್ಟುನಿಟ್ಟಿನ ನಿಲುವು ತೆಗೆದುಕೊಂಡಿದೆ. ಫೆಡರೇಶನ್‌ನ ಎಲ್ಲ ಹಣಕಾಸಿನ ಅನುದಾನವನ್ನು ನಿಲ್ಲಿಸಿದೆ. ಇದರೊಂದಿಗೆ ಸಂಪೂರ್ಣ ತನಿಖೆ ಆಗುವವರೆಗೆ ಮಲ್ಕಂಬ್ ಫೆಡರೇಶನ್ ಆಫ್ ಇಂಡಿಯಾದ ಮಾನ್ಯತೆಯನ್ನು ಸಹ ಹಿಂಪಡೆಯಲಾಗಿದೆ.
ಈ ಆರೋಪಗಳೆಲ್ಲ ಸುಳ್ಳು ಎಂದು ರಮೇಶ್ ಇಂಡೋಲಿಯಾ ನಿರಾಕರಿಸಿದ್ದಾರೆ. ಇದೆಲ್ಲವೂ ಷಡ್ಯಂತ್ರದ ಅಡಿ ನಡೆಯುತ್ತಿದೆ ಎಂದು ಹೇಳಿದ್ದಾರೆ. ಆದರೆ, ಈ ಸಂಪೂರ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿಯೊಂದು ತನಿಖೆ ನಡೆಸುತ್ತಿದೆ. ದೂರು ನೀಡಿರುವ ಎಲ್ಲ ಹುಡುಗಿಯರು ರಾಜಸ್ಥಾನದ ವಿವಿಧ ಜಿಲ್ಲೆಗಳಿಂದ ಬಂದವರು ಎಂದು ಹೇಳಲಾಗುತ್ತಿದೆ. ಆದರೆ, ಈ ಸಂಪೂರ್ಣ ಪ್ರಕರಣದ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿರುವ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ.
ಓದಿ: ಲೈಂಗಿಕ ಕಿರುಕುಳ ಆರೋಪ: ಕೊಟ್ಟೂರು ಠಾಣೆಯ ಹೆಡ್ ಕಾನ್ಸ್ಟೇಬಲ್ ಬಂಧನ