ಚೆನ್ನೈ (ತಮಿಳುನಾಡು): ಕೋವಿಡ್ -19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ತಮಿಳುನಾಡು ಮುಖ್ಯಮಂತ್ರಿಯ ಸಾರ್ವಜನಿಕ ಪರಿಹಾರ ನಿಧಿಗೆ ಒಂದು ಲಕ್ಷ ರೂ. ದೇಣಿಗೆ ನೀಡುವುದಾಗಿ ಭಾರತೀಯ ಟೇಬಲ್ ಟೆನಿಸ್ ಆಟಗಾರ ಜಿ ಸತ್ಯನ್ ಹೇಳಿದ್ದಾರೆ.
"ನಮ್ಮ ದೇಶದಲ್ಲಿ ಜನರು ಬಹಳಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ ಮತ್ತು ತಮ್ಮ ಪ್ರೀತಿ ಪಾತ್ರರನ್ನು ನಿತ್ಯ ಕಳೆದುಕೊಳ್ಳುತ್ತಿದ್ದಾರೆ ಎಂದು ನೋಡುವುದು ನಿಜಕ್ಕೂ ಹೃದಯ ಕದಡುವ ಸಂಗತಿಯಾಗಿದೆ. ಪರಸ್ಪರ ಬೆಂಬಲಿಸಲು ಮತ್ತು ಈ ಸಾಂಕ್ರಾಮಿಕ ರೋಗದ ವಿರುದ್ಧ ಒಟ್ಟಿಗೆ ಹೋರಾಡುವ ಸಮಯ ಇದು. ನಾನು ತಮಿಳುನಾಡು ಸಿಎಂ ಸಾರ್ವಜನಿಕ ಪರಿಹಾರ ನಿಧಿಗೆ 1 ಲಕ್ಷ ರೂ. ನೀಡುತ್ತಿದ್ದೇನೆ" ಎಂದು ಅವರು ಟ್ವೀಟ್ ಮಾಡಿದ್ದಾರೆ.
ಪ್ರತಿಯೊಬ್ಬರೂ ಸಾಧ್ಯವಾದಷ್ಟು ಯಾವುದಾದರೊಂದು ರೀತಿಯಲ್ಲಿ ಪರಸ್ಪರ ಸಹಾಯ ಮಾಡಬೇಕೆಂದು ಅವರು ಕೋರಿದರು.
"ಮಾರಣಾಂತಿಕ ಕೋವಿಡ್ ಎರಡನೇ ಅಲೆಯ ವಿರುದ್ಧ ನಾವು ಈ ಯುದ್ಧವನ್ನು ಗೆಲ್ಲಬಹುದು ಎಂದು ನನಗೆ ಖಾತ್ರಿಯಿದೆ" ಎಂದು ಚೆನ್ನೈ ಮೂಲದ ಟೆನಿಸ್ ಆಟಗಾರ ಜಿ ಸತ್ಯನ್ ಹೇಳಿದರು.
ಮುಂಬರುವ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ದೇಶವನ್ನು ಪ್ರತಿನಿಧಿಸಲು ಅರ್ಹತೆ ಪಡೆದಿರುವ ಸತ್ಯನ್, ಕೊರೊನಾ ವಿರುದ್ಧದ ಹೋರಾಟಕ್ಕಾಗಿ 2020ರಲ್ಲಿ ಕೇಂದ್ರ ಮತ್ತು ತಮಿಳುನಾಡು ಸರ್ಕಾರಕ್ಕೆ 1.25 ಲಕ್ಷ ರೂ. ನೀಡಿದ್ದರು.