ETV Bharat / sports

ವಿವೋ ಪ್ರೊ ಕಬಡ್ಡಿ 9ನೇ ಋತುವಿನ ವೇಳಾಪಟ್ಟಿ ಪ್ರಕಟ.. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆರಂಭ - ಈಟಿವಿ ಭಾರತ ಕನ್ನಡ

ವಿವೋ ಪ್ರೊ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯು ಅಕ್ಟೋಬರ್‌ 28ರಿಂದ ಪುಣೆಯ ಶ್ರೀ ಶಿವಛತ್ರಪತಿ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ ನಂತರದ ಹಂತ ನಡೆಯಲಿದೆ. ಈ ಋತುವಿನ ಲೀಗ್‌ನಲ್ಲಿ ಕಬಡ್ಡಿ ಅಭಿಮಾನಿಗಳಿಗೆ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನೋಡುವ ಅವಕಾಶವಿದೆ ಎಂದಿದೆ.

vivo-pro-kabaddi-season-9-schedule-announced
ವಿವೋ ಪ್ರೊ ಕಬಡ್ಡಿ 9ನೇ ಋತುವಿನ ವೇಳಾಪಟ್ಟಿ ಪ್ರಕಟ: ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಆರಂಭ
author img

By

Published : Sep 21, 2022, 4:03 PM IST

ಬೆಂಗಳೂರು: ವಿವೋ ಪ್ರೊ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯ ಮೊದಲಾರ್ಧದ ವೇಳಾಪಟ್ಟಿ ಪ್ರಕಟಗೊಂಡಿದೆ. ಅಕ್ಟೋಬರ್‌ 7ರಂದು ಸಿಲಿಕಾನ್ ಸಿಟಿಯ ಕಂಠೀರವ ಕ್ರೀಡಾಂಗಣದಲ್ಲಿ ಲೀಗ್‌ ಆರಂಭಗೊಳ್ಳಲಿದೆ ಎಂದು ಆಯೋಜಕರಾದ ಮಾರ್ಷಲ್ ಸ್ಪೋರ್ಟ್ಸ್ ಹೇಳಿದೆ.

ಅಕ್ಟೋಬರ್‌ 28ರಿಂದ ಪುಣೆಯ ಶ್ರೀ ಶಿವಛತ್ರಪತಿ ಸ್ಪೋರ್ಟ್ಸ್‌ ಕಾಂಪ್ಲೆಕ್ಸ್‌ (ಬ್ಯಾಡ್ಮಿಂಟನ್‌ ಕೋರ್ಟ್‌) ನಂತರದ ಹಂತ ನಡೆಯಲಿದೆ. ಈ ಋತುವಿನ ಲೀಗ್‌ನಲ್ಲಿ ಕಬಡ್ಡಿ ಅಭಿಮಾನಿಗಳಿಗೆ ಕ್ರೀಡಾಂಗಣದಲ್ಲಿ ಪಂದ್ಯಗಳನ್ನು ನೋಡುವ ಅವಕಾಶವಿದೆ ಎಂದಿದೆ.

ಲೀಗ್‌ಗೆ ಈ ಬಾರಿ ಭವ್ಯವಾಗಿ ಉದ್ಘಾಟನೆಗೊಳ್ಳಲಿದೆ. 66 ಪಂದ್ಯಗಳ ವೇಳಾಪಟ್ಟಿಯಲ್ಲಿ ಪ್ರತಿಯೊಂದು ಪಂದ್ಯ ವಿಭಿನ್ನವಾಗಿರಲಿದೆ. ಮೊದಲ 2 ದಿನಗಳೊಳಗೆ ಕಬಡ್ಡಿ ಅಭಿಮಾನಿಗಳು ಎಲ್ಲ 12 ತಂಡಗಳ ಆಟವನ್ನು ವೀಕ್ಷಿಸಬಹುದಾಗಿದೆ. ಪಿಕೆಎಲ್‌ 9ನೇ ಋತುವಿನಲ್ಲಿ ಲೀಗ್‌ ಹಂತದಲ್ಲಿ ಪ್ರತಿ ಶುಕ್ರವಾರ ಮತ್ತು ಭಾನುವಾರ ಕಬಡ್ಡಿ ಅಭಿಮಾನಿಗಳು ಮೂರು ಪಂದ್ಯಗಳ ಸಂಭ್ರಮ ಸವಿಯಬಹುದು ಎಂದು ಮಾಹಿತಿ ನೀಡಿದೆ.

ದಬಾಂಗ್‌ ಡೆಲ್ಲಿ - ಯು ಮುಂಬಾ ಮುಖಾಮುಖಿ: ಅಕ್ಟೋಬರ್‌ 7ರಂದು ನಡೆಯುವ 9ನೇ ಋತುವಿನ ಮೊದಲ ಪಂದ್ಯದಲ್ಲಿ 8ನೇ ಋತುವಿನ ಚಾಂಪಿಯನ್‌ ದಬಾಂಗ್‌ ಡೆಲ್ಲಿ ತಂಡವು ಯು-ಮುಂಬಾ ವಿರುದ್ಧ ಸೆಣಸಲಿದೆ. ನಂತರ ನಡೆಯುವ ಪಂದ್ಯದಲ್ಲಿ ಬೆಂಗಳೂರು ಬುಲ್ಸ್‌ ಮತ್ತು ತೆಲುಗು ಟೈಟಾನ್ಸ್‌ ತಂಡಗಳು ಮುಖಾಮುಖಿಯಾಗಲಿವೆ. ಆರಂಭಿಕ ದಿನದ ಕೊನೆಯ ಪಂದ್ಯದಲ್ಲಿ ಜೈಪುರ ಪಿಂಕ್‌ ಪ್ಯಾಂಥರ್ಸ್‌ ತಂಡ ಯುಪಿ ಯೋಧಾಸ್‌ ವಿರುದ್ಧ ಹೋರಾಟ ನಡೆಸಲಿದೆ ಎಂದಿದೆ.

ಎರಡನೇ ಹಂತದ ಲೀಗ್ ವೇಳಾಪಟ್ಟಿ: ಎರಡನೇಯ ಹಂತದಲ್ಲಿ ತಂಡಗಳು ತಮ್ಮ ರಣತಂತ್ರ ರೂಪಿಸಲು, ತಮ್ಮ ಸಾಮರ್ಥ್ಯ ಉತ್ತಮಪಡಿಸಿಕೊಳ್ಳುಲು ಅವಕಾಶ ನೀಡುವ ದೃಷ್ಟಿಯಿಂದ ಲೀಗ್‌ನ ಎರಡನೇ ಹಂತದ ವೇಳಾಪಟ್ಟಿಯನ್ನು 2022ರ ಅಕ್ಟೋಬರ್‌ ತಿಂಗಳ ಕೊನೆಯ ವಾರದಲ್ಲಿ ಪ್ರಕಟಿಸಲಾಗುವುದು ಎಂದು ತಿಳಿಸಿದೆ.

ಸ್ಟಾರ್‌ ಸ್ಪೋರ್ಟ್ಸ್​​ನಲ್ಲಿ ನೇರ ಪ್ರಸಾರ: ಕಬಡ್ಡಿ ಅಭಿಮಾನಿಗಳು ಪಂದ್ಯ ವೀಕ್ಷಿಸಲು ತಮ್ಮ ಟಿಕೆಟ್‌ಗಳನ್ನು BookMyShow ಮೂಲಕ ಕಾಯ್ದಿರಿಸಿಕೊಳ್ಳಬಹುದು. 9ನೇ ಆವೃತ್ತಿಯ ವಿವೋ ಪ್ರೋ ಕಬಡ್ಡಿ ಲೀಗ್‌ ಪಂದ್ಯಗಳು ಸ್ಟಾರ್‌ ಸ್ಪೋರ್ಟ್ಸ್‌ ನೆಟ್‌ವರ್ಕ್‌ ಮತ್ತು ಡಿಸ್ನಿ+ ಹಾಟ್‌ಸ್ಟಾರ್‌ (Disney+ Hotstar)ನಲ್ಲಿ ನೇರ ಪ್ರಸಾರವಾಗಲಿದೆ ಎಂದು ತಿಳಿಸಿದೆ.

ಇದನ್ನೂ ಓದಿ: 2.26 ಕೋಟಿ ರೂ.ಗೆ ಪವನ್ ಶೆರಾವತ್ ಖರೀದಿಸಿದ ತಮಿಳ್ ತಲೈವಾಸ್: ಬೆಂಗಳೂರು ಬುಲ್ಸ್‌ ಕೋಚ್ ಕಣ್ಣೀರು!

ಆನ್​ಲೈನ್​ನಲ್ಲಿ ಸ್ಕೊರ್ ಲಭ್ಯ: ವಿವೋ ಪ್ರೋ ಕಬಡ್ಡಿ ಲೀಗ್‌ನ ಕ್ಷಣ ಕ್ಷಣದ ನೇರ ಮಾಹಿತಿಗಾಗಿ www.prokabaddi.com ಲಾಗ್‌ಆನ್‌ ಆಗಬಹುದು ಅಥವಾ ಅಧಿಕೃತ ಪ್ರೋ ಕಬಡ್ಡಿ ಆಪ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದು. ಅಥವಾ ಇನ್‌ಸ್ಟಾಗ್ರಾಮ್‌, ಯೂಟ್ಯೂಬ್‌, ಫೇಸ್‌ಬುಕ್‌ ಮತ್ತು ಟ್ವಿಟರ್‌ನಲ್ಲಿ ಫಾಲೋ ಮಾಡಬಹುದಾಗಿದೆ.

ಜಗತ್ತಿನ ಉತ್ಕೃಷ್ಟ ಕಬಡ್ಡಿ ಪಂದ್ಯಗಳು: ವಿವೋ ಪ್ರೊ ಕಬಡ್ಡಿ ಲೀಗ್‌ 9ನೇ ಆವೃತ್ತಿಯ ವೇಳಾಪಟ್ಟಿಯ ಬಗ್ಗೆ ವಿವೋ ಪ್ರೊಕಬಡ್ಡಿ ಲೀಗ್‌ನ ಲೀಗ್‌ ಕಮಿಷನರ್‌ ಮತ್ತು ಮಷಾಲ್‌ ಸ್ಪೋರ್ಟ್ಸ್‌ನ ಸ್ಪೋರ್ಟ್ಸ್‌ ಲೀಗ್‌ನ ಮುಖ್ಯಸ್ಥರಾದ ಅನುಪಮ್‌ ಗೋಸ್ವಾಮಿ ಮಾತನಾಡಿ, 'ಬೆಂಗಳೂರು, ಪುಣೆ ಮತ್ತು ಹೈದರಾಬಾದ್‌ನಲ್ಲಿ ನಡೆಯಲಿರುವ ವಿವೋ ಪಿಕೆಎಲ್‌ 9ನೇ ಆವೃತ್ತಿಯು ಭಾರತದಲ್ಲಿರುವ ಕ್ರೀಡಾಭಿಮಾನಿಗಳಿಗೆ ಜಗತ್ತಿನ ಉತ್ತಮ ಕಬಡ್ಡಿ ಪಂದ್ಯಗಳ ಸಂಭ್ರಮ ನೀಡಲಿದೆ. ಹಿಂದಿನ ಎಲ್ಲ ಪ್ರೋ ಕಬಡ್ಡಿ ಲೀಗ್‌ಗಳಿಗಿಂತ 9ನೇ ಆವೃತ್ತಿಯ ಪ್ರೋ ಕಬಡ್ಡಿ ಲೀಗ್‌ ಮತ್ತು ಅದರ ಪ್ರಸಾರಕರು ಜೊತೆಯಲ್ಲಿ 12 ತಂಡಗಳು ಭಾರತದಲ್ಲಿ ಕಬಡ್ಡಿ ಅಭಿವೃದ್ಧಿಗೆ ಕ್ರೀಡಾಂಗಣದ ಒಳಗಡೆ ಮತ್ತು ಸ್ಕ್ರೀನ್‌ನ ಮೇಲೂ ಬಲಿಷ್ಠ ಮಾನದಂಡ ನಿರ್ಮಿಸಲಿವೆ' ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರೊ ಕಬಡ್ಡಿ ಲೀಗ್​​​ 9ನೇ ಆವೃತ್ತಿಗೆ ಮುಹೂರ್ತ​​​​: ಬೆಂಗಳೂರು ಸೇರಿ ಈ 3 ಸ್ಥಳಗಳಲ್ಲಿ ಪಂದ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.