ನವದೆಹಲಿ: 2016ರ ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚು ಗೆದ್ದ ಮೊದಲ ಭಾರತೀಯ ಮಹಿಳಾ ಕುಸ್ತಿಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಸಾಕ್ಷಿ ಮಲಿಕ್ ಇಂದು ಕುಸ್ತಿಗೆ ನಿವೃತ್ತಿ ಘೋಷಿಸಿದರು. ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮಾಜಿ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಬೆಂಬಲಿತ ಸಂಜಯ್ ಕುಮಾರ್ ಸಿಂಗ್ ಅವರನ್ನು ಡಬ್ಲ್ಯುಎಫ್ಐಗೆ ನೂತನ ಅಧ್ಯಕ್ಷರಾಗಿ ಗುರುವಾರ ನೇಮಕ ಮಾಡಲಾಗಿದೆ. ಈ ಬೆಳವಣಿಗೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಾಕ್ಷಿ, ಕುಸ್ತಿಯನ್ನು ತ್ಯಜಿಸುವುದಾಗಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.
-
#WATCH | Delhi: Wrestler Sakshi Malik says "We slept for 40 days on the roads and a lot of people from several parts of the country came to support us. If Brij Bhushan Singh's business partner and a close aide is elected as the president of WFI, I quit wrestling..." pic.twitter.com/j1ENTRmyUN
— ANI (@ANI) December 21, 2023 " class="align-text-top noRightClick twitterSection" data="
">#WATCH | Delhi: Wrestler Sakshi Malik says "We slept for 40 days on the roads and a lot of people from several parts of the country came to support us. If Brij Bhushan Singh's business partner and a close aide is elected as the president of WFI, I quit wrestling..." pic.twitter.com/j1ENTRmyUN
— ANI (@ANI) December 21, 2023#WATCH | Delhi: Wrestler Sakshi Malik says "We slept for 40 days on the roads and a lot of people from several parts of the country came to support us. If Brij Bhushan Singh's business partner and a close aide is elected as the president of WFI, I quit wrestling..." pic.twitter.com/j1ENTRmyUN
— ANI (@ANI) December 21, 2023
"ನಾವು 40 ದಿನಗಳ ಕಾಲ ರಸ್ತೆಗಳಲ್ಲಿ ಮಲಗಿದ್ದೇವೆ. ದೇಶದ ಅನೇಕ ಭಾಗಗಳಿಂದ ಸಾಕಷ್ಟು ಜನ ನಮ್ಮನ್ನು ಬೆಂಬಲಿಸಲು ಬಂದಿದ್ದರು. ಬ್ರಿಜ್ ಭೂಷಣ್ ಸಿಂಗ್ ಅವರ ಉದ್ಯಮದ ಪಾಲುದಾರ ಮತ್ತು ಆಪ್ತ ಸಹಾಯಕ ಡಬ್ಲ್ಯುಎಫ್ಐಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ನಾನು ಕುಸ್ತಿಯನ್ನು ತ್ಯಜಿಸುತ್ತಿದ್ದೇನೆ" ಎಂದು ಹೇಳುತ್ತಾ ಕಣ್ಣೀರಿಟ್ಟರು.
ಕಳೆದ ಏಪ್ರಿಲ್ನಲ್ಲಿ ಹಿಂದಿನ ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಗಂಭೀರ ಸ್ವರೂಪದ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬಂದ ನಂತರ ದೊಡ್ಡ ಮಟ್ಟದಲ್ಲಿ ಪ್ರತಿಭಟನೆಗಳು ನಡೆದಿದ್ದವು. ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ವಿನೇಶ್ ಪೋಗಟ್ ಮತ್ತು ಸಾಕ್ಷಿ ಮಲಿಕ್ ಸೇರಿದಂತೆ ಆನೇಕರು ದೆಹಲಿಯ ಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಿದ್ದರು.
ಇದನ್ನೂ ಓದಿ: ಅಂತಿಮ ಏಕದಿನ ಪಂದ್ಯ: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ಬೌಲಿಂಗ್; ರಜತ್ ಪಾಟಿದಾರ್ ಪಾದಾರ್ಪಣೆ