ETV Bharat / sports

Wrestlers Protest: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಬಗ್ಗೆ ವಿಚಾರಣೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

author img

By

Published : Jun 16, 2023, 12:52 PM IST

Wrestlers Protest: ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸದಿಂದ ದೆಹಲಿ ಪೊಲೀಸರು ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.

Wrestlers protest  residence of Brij Bhushan Singh  Female wrestlers allege sexual harassment  ಬಿಜೆಪಿ ಸಂಸದ ಬ್ರಿಜ್ ಭೂಷಣ್  ಬ್ರಿಜ್ ಭೂಷಣ್ ಬಗ್ಗೆ ವಿಚಾರಣೆ ನಡೆಸುತ್ತಿದ್ದ ವ್ಯಕ್ತಿ  ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ  ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ  ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್  ಸಿಬ್ಬಂದಿಗೆ ಅನುಮಾನ ಬಂದು ಪಿಸಿಆರ್ ಕರೆ
ಬಿಜೆಪಿ ಸಂಸದ ಬ್ರಿಜ್ ಭೂಷಣ್ ಬಗ್ಗೆ ವಿಚಾರಣೆ ನಡೆಸುತ್ತಿದ್ದ ವ್ಯಕ್ತಿಯ ಬಂಧನ

ನವದೆಹಲಿ: ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ನಿವಾಸದಲ್ಲಿ ಅನುಮಾನಾಸ್ಪದ ವ್ಯಕ್ತಿಯನ್ನು ದೆಹಲಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ, ಈ ವ್ಯಕ್ತಿ ಬ್ರಿಜ್ ಭೂಷಣ್ ಅವರ ನಿವಾಸದಲ್ಲಿದ್ದ ಸಿಬ್ಬಂದಿಯಿಂದ ಆತನ ಬಗ್ಗೆ ವಿಚಾರಿಸುತ್ತಿದ್ದ. ಅನುಮಾನ ಬಂದಾಗ ಸಿಬ್ಬಂದಿ ಪಿಸಿಆರ್​ಗೆ ಕರೆ ಮಾಡಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ದೆಹಲಿ ಪೊಲೀಸ್ ಮೂಲಗಳ ಪ್ರಕಾರ, ಈ ವ್ಯಕ್ತಿ ಶುಕ್ರವಾರ ಬೆಳಗ್ಗೆ ಬ್ರಿಜ್ ಭೂಷಣ್ ಅವರ ನಿವಾಸವನ್ನು ತಲುಪಿದ್ದಾನೆ ಮತ್ತು ಸಿಬ್ಬಂದಿಯಿಂದ ಅವರ ಬಗ್ಗೆ ವಿಚಾರಿಸುತ್ತಿದ್ದರು. ಸಿಬ್ಬಂದಿಗೆ ಅನುಮಾನ ಬಂದು ಪಿಸಿಆರ್ ಕರೆ ಮಾಡಿದ್ದಾರೆ. ಮಾಹಿತಿ ಬಂದಾಕ್ಷಣ ಸ್ಥಳಕ್ಕೆ ದೌಡಾಯಿಸಿ ಆತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಯುವಕನನ್ನು ವಿಚಾರಣೆ ನಡೆಸುತ್ತಿದ್ದು, ಆತ ಬಿಜೆಪಿ ಸಂಸದರ ನಿವಾಸಕ್ಕೆ ಏಕೆ ಬಂದಿದ್ದ ಮತ್ತು ಸಿಬ್ಬಂದಿಯನ್ನು ಏನು ಕೇಳುತ್ತಿದ್ದ ಎಂದು ತಿಳಿಯಲು ಪ್ರಯತ್ನಿಸುತ್ತಿದ್ದಾರೆ. ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಡೆಯುತ್ತಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಯುವಕ ಮಾಹಿತಿ ಪಡೆಯುತ್ತಿದ್ದಾನೋ ಅಥವಾ ಪ್ರಕರಣದ ಮೇಲೆ ಯಾವುದೇ ರೀತಿಯಲ್ಲಿ ಪ್ರಭಾವ ಬೀರಲು ಪ್ರಯತ್ನಿಸುತ್ತಿದ್ದಾನೋ, ಇಲ್ಲ ಯಾರದಾದ್ರೂ ಸಲಹೆ ಮೇರೆಗೆ ಸಂಸದರ ನಿವಾಸಕ್ಕೆ ಬಂದಿದ್ದಾನೋ ಎಂಬುದು ಸೇರಿದಂತೆ ಇತರ ವಿಷಯಗಳ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಗಮನಾರ್ಹವೆಂದರೆ, ಮಹಿಳಾ ಕುಸ್ತಿಪಟುಗಳು ಸಂಸದರ ಮೇಲೆ ಲೈಂಗಿಕ ಶೋಷಣೆಯ ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ದೆಹಲಿ ಪೊಲೀಸರು ಗುರುವಾರ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಸಿಂಗ್ ವಿರುದ್ಧ ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ ಮಹಿಳಾ ಕುಸ್ತಿಪಟುಗಳ ಕಿರುಕುಳಕ್ಕೆ ಸಂಬಂಧಿಸಿದ 25 ಜನರ ಹೇಳಿಕೆಗಳಿಗೆ ಪ್ರಾಮುಖ್ಯತೆ ನೀಡಲಾಗಿದೆ. ಈ ವ್ಯಕ್ತಿಯನ್ನೂ ವಿಚಾರಣೆಗೊಳಪಡಿಸಲಾಗಿದೆಯೇ ಅಥವಾ ಬೇರೆ ವ್ಯಕ್ತಿ ಎಂಬುದನ್ನೂ ಪರಿಶೀಲಿಸಲಾಗುತ್ತಿದೆ.

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ (Wrestlers Protest) ನಡೆಸುತ್ತಿದ್ದ ಕುಸ್ತಿಪಟುಗಳು ಮತ್ತು ಅವರ ಬೆಂಬಲಿಗರ ವಿರುದ್ಧ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯಲು ದೆಹಲಿ ಪೊಲೀಸರು ನಿರ್ಧರಿಸಿದ್ದಾರೆ. ಇದನ್ನು ಖಚಿತಪಡಿಸಿರುವ ದೆಹಲಿಯ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಶೀಘ್ರದಲ್ಲೇ ಪೊಲೀಸರು ನ್ಯಾಯಾಲಯಕ್ಕೆ ರದ್ದು ವರದಿಯನ್ನು ಸಲ್ಲಿಸಲಿದ್ದಾರೆ ಎಂದು ಹೇಳಿದ್ದಾರೆ. ಇದಕ್ಕಾಗಿ ದಾಖಲೆಗಳನ್ನು ಸಿದ್ಧಪಡಿಸಲಾಗುತ್ತಿದೆ.

ಓದಿ: Wrestlers protest: ಬ್ರಿಜ್ ಭೂಷಣ್​ ಸಿಂಗ್ ವಿರುದ್ಧ ಇಂದು ಚಾರ್ಜ್​ಶೀಟ್ ಸಲ್ಲಿಕೆ

ಜಾರ್ಜ್​ಶೀಟ್​ ಸಲ್ಲಿಕೆ: ತಾರಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಸಂಸದ, ಭಾರತ ಕುಸ್ತಿ ಫೆಡರೇಷನ್​ ಮಾಜಿ ಮುಖ್ಯಸ್ಥ(ಡಬ್ಲ್ಯುಎಫ್‌ಐ) ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಇಲ್ಲಿನ ರೌಸ್​ ಅವೆನ್ಯೂ ನ್ಯಾಯಾಲಯದಲ್ಲಿ ಗುರುವಾರದಂದು ಸಾಕ್ಷ್ಯಾಧಾರಗಳ ಹೇಳಿಕೆ, ಡಿಜಿಟಲ್ ದಾಖಲೆಗಳುಳ್ಳ ಆರೋಪಪಟ್ಟಿ ಸಲ್ಲಿಸಿದ್ದಾರೆ.

ರದ್ದತಿ ವರದಿಯೂ ಸಲ್ಲಿಕೆ: ಇದೇ ವೇಳೆ, ಸಂತ್ರಸ್ತೆ ಮತ್ತು ಆಕೆಯ ತಂದೆಯ ಹೇಳಿಕೆಯ ಆಧಾರದ ಮೇಲೆ ದೆಹಲಿ ಪೊಲೀಸರು ಬ್ರಿಜ್​ ಭೂಷಣ್ ಸಿಂಗ್​ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಇಲ್ಲಿನ ಪಟಿಯಾಲ ನ್ಯಾಯಾಲಯಕ್ಕೆ ರದ್ದತಿ ವರದಿಯನ್ನು ಸಹ ಸಲ್ಲಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.