ಮೆಲ್ಬೋರ್ನ್: ಕಳೆದ ಮೂರು ದಿನಗಳ ಹಿಂದಷ್ಟೇ ಐಸಿಸಿ ಟಿ20 ವಿಶ್ವಕಪ್ 2021 ಮುಕ್ತಾಯಗೊಂಡಿದೆ. ಇದೀಗ 2022ರ ಐಸಿಸಿ ಟಿ20 ವಿಶ್ವಕಪ್‌ಗೆ (T20 World Cup 2022) ವೇದಿಕೆ ಸಜ್ಜುಗೊಂಡಿದೆ.
ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ICC) ನೀಡಿರುವ ಮಾಹಿತಿ ಪ್ರಕಾರ, ಮುಂದಿನ ವರ್ಷ ನವೆಂಬರ್ 13ರಂದು ಫೈನಲ್ ಪಂದ್ಯ ನಡೆಯಲಿದೆ.
ಆಸ್ಟ್ರೇಲಿಯಾದ 7 ನಗರಗಳಲ್ಲಿ ಪಂದ್ಯಗಳು ಆಯೋಜನೆಗೊಳ್ಳಲಿದೆ. ಅಕ್ಟೋಬರ್ 16ರಿಂದ ಟೂರ್ನಿ ಆರಂಭಗೊಂಡು, ನವೆಂಬರ್ 13ರಂದು ಮೆಲ್ಬೋರ್ನ್ ಮೈದಾನದಲ್ಲಿ (Melbourne Cricket Ground) ಫೈನಲ್ ಪಂದ್ಯ ನಿಗದಿಯಾಗಿದೆ.
ಒಟ್ಟು 45 ಪಂದ್ಯಗಳು ನಡೆಯಲಿವೆ. ಅಡಿಲೇಡ್, ಬ್ರಿಸ್ಬೇನ್, ಗಿಲಾಂಗ್, ಹೊಬರ್ಟ್, ಮೆಲ್ಬೋರ್ನ್, ಪರ್ತ್ ಹಾಗೂ ಸಿಡ್ನಿಯಲ್ಲಿ ಈ ಪಂದ್ಯಗಳು ನಡೆಯಲಿವೆ. ಮೊದಲ ಸೆಮಿಫೈನಲ್ ಪಂದ್ಯ ನವೆಂಬರ್ 9ರಂದು ಸಿಡ್ನಿ ಕ್ರಿಕೆಟ್ (Sydney Cricket Ground) ಮೈದಾನದಲ್ಲಿ ಹಾಗೂ ಎರಡನೇ ಸೆಮಿಫೈನಲ್ ನವೆಂಬರ್ 13ರಂದು ಮೆಲ್ಬೋರ್ನ್ ಮೈದಾನದಲ್ಲಿ ನಡೆಯಲಿದೆ.
ಇದನ್ನೂ ಓದಿ: IND vs NZ: ಟಿ20 ಸರಣಿಯಿಂದ ವಿಲಿಯಮ್ಸನ್ಗೆ ವಿಶ್ರಾಂತಿ, ತಂಡ ಮುನ್ನಡೆಸಲಿರುವ ಸೌಥಿ
ಟೂರ್ನಿಯಲ್ಲಿ ಭಾಗಿಯಾಗಲು ಈಗಾಗಲೇ ಆಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಭಾರತ, ಅಫ್ಘಾನಿಸ್ತಾನ, ಬಾಂಗ್ಲಾದೇಶ, ಪಾಕಿಸ್ತಾನ, ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ನೇರ ಅವಕಾಶ ಪಡೆದುಕೊಂಡಿದೆ. ಉಳಿದಂತೆ ನಮೀಬಿಯಾ, ಸ್ಕಾಟ್ಲಂಡ್, ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ಅರ್ಹತಾ ಪಂದ್ಯಗಳಲ್ಲಿ ಭಾಗಿಯಾಗಿ ನಂತರ ಮುಂದಿನ ಹಂತಕ್ಕೆ ಪ್ರವೇಶ ಪಡೆಯಬೇಕಿದೆ. ಈ ವಿಶ್ವಕಪ್ ಕಳೆದ ವರ್ಷ ನಡೆಯಬೇಕಾಗಿತ್ತು. ಆದರೆ ಕೋವಿಡ್ ಕಾರಣಕ್ಕೆ 2022ಕ್ಕೆ ಮುಂದೂಡಿಕೆಯಾಗಿದೆ.