ದುಬೈ : ವಿಶ್ವಕಪ್ ಟೂರ್ನಿಯ ಗ್ರೂಪ್ ಬಿ ಸೂಪರ್ 12 ಹಂತದ ಪಂದ್ಯದಲ್ಲಿ ಆಫ್ಘಾನಿಸ್ತಾನ ಮತ್ತು ಪಾಕಿಸ್ತಾನ ನಡುವೆ ಹಣಾಹಣಿ ನಡೆಯಲಿದೆ. ಈಗಾಗಲೇ ಟಾಸ್ ಗೆದ್ದಿರುವ ಆಫ್ಘಾನಿಸ್ತಾನ ಬ್ಯಾಟಿಂಗ್ ಆಯ್ದುಕೊಂಡಿದೆ.
ಈಗಾಗಲೇ ಆಡಿರುವ ಎರಡೂ ಪಂದ್ಯ ಗೆದ್ದಿರುವ ಪಾಕಿಸ್ತಾನ ತಂಡ, ಈ ಪಂದ್ಯವನ್ನು ಗೆದ್ದು ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದೆ. ಇನ್ನೊಂದೆಡೆ ಆಫ್ಘಾನಿಸ್ತಾನ ತಂಡ ಪಾಕ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕುವ ತವಕದಲ್ಲಿದೆ.
11ರ ಬಳಗ
ಪಾಕಿಸ್ತಾನ : ಮೊಹಮ್ಮದ್ ರಿಜ್ವಾನ್(ವಿ.ಕೀ), ಬಾಬರ್ ಅಜಮ್(ನಾ), ಫಖರ್ ಜಮಾನ್, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಇಮಾದ್ ವಾಸಿಂ, ಶಾದಾಬ್ ಖಾನ್, ಹಸನ್ ಅಲಿ, ಹ್ಯಾರಿಸ್ ರೌಫ್, ಶಾಹೀನ್ ಅಫ್ರಿದಿ
ಅಫ್ಘಾನಿಸ್ತಾನ: ಹಜರತುಲ್ಲಾ ಝಜೈ, ಮೊಹಮ್ಮದ್ ಶಹಜಾದ್ (ವಿ.ಕೀ), ರಹಮಾನುಲ್ಲಾ ಗುರ್ಬಾಜ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ (ನಾ), ಅಸ್ಗರ್ ಅಫ್ಘಾನ್, ಗುಲ್ಬದಿನ್ ನೈಬ್, ರಶೀದ್ ಖಾನ್, ಕರೀಮ್ ಜನತ್, ನವೀನ್-ಉಲ್-ಹಕ್, ಮುಜೀಬ್ ಉರ್ರಹ್ಮಾನ್
ಸ್ಥಳ: ದುಬೈ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನ, ದುಬೈ