ದುಬೈ: ಐಸಿಸಿ ಟಿ-20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಪಾಕಿಸ್ತಾನ ತಂಡ ಆರಂಭಿಕ ಆಟಗಾರ ಮೊಹಮ್ಮದ್ ರಿಜ್ವಾನ್(67) ಹಾಗೂ ಫಖರ್ ಜಮಾನ್ ಅಜೇಯ(55*) ರನ್ಗಳ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ನಷ್ಟಕ್ಕೆ 176ರನ್ಗಳಿಕೆ ಮಾಡಿದೆ. ಈ ಮೂಲಕ ಎದುರಾಳಿ ತಂಡಕ್ಕೆ ಸ್ಪರ್ಧಾತ್ಮಕ ಗುರಿ ನೀಡಿದೆ.
ದುಬೈ ಅಂತಾರಾಷ್ಟ್ರೀಯ ಮೈದಾನದಲ್ಲಿ ಆರಂಭಗೊಂಡಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಲು ಕಣಕ್ಕಿಳಿದ ಪಾಕ್ ತಂಡ ಉತ್ತಮ ಆರಂಭ ಪಡೆದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ವಿಕೆಟ್ ಕೀಪರ್ ರಿಜ್ವಾನ್ ಹಾಗೂ ಬಾಬರ್ ಆಜಂ ತಂಡಕ್ಕೆ ಆರಂಭದಲ್ಲೇ ಭದ್ರ ಬುನಾದಿ ಹಾಕಿಕೊಟ್ಟರು. ಈ ಜೋಡಿ ಮೊದಲ ವಿಕೆಟ್ನಷ್ಟಕ್ಕೆ 71ರನ್ಗಳಿಕೆ ಮಾಡಿತು.
39ರನ್ಗಳಿಕೆ ಮಾಡಿದ್ದ ವೇಳೆ ಜಂಪಾ ಓವರ್ನಲ್ಲಿ ಕ್ಯಾಚ್ ನೀಡಿ ಆಜಂ ನಿರ್ಗಮಿಸಿದರು. ಇದರ ಬೆನ್ನಲ್ಲೇ ರಿಜ್ವಾನ್ ಜೊತೆ ಸೇರಿಕೊಂಡ ಫಖರ್ ಜಮಾನ್ ಎದುರಾಳಿ ಬೌಲರ್ಗಳನ್ನ ಸರಿಯಾಗಿ ದಂಡಿಸಿದರು. ಈ ಜೋಡಿ 72ರನ್ಗಳ ಜೊತೆಯಾಟವಾಡಿತು. 67ರನ್ಗಳಿಕೆ ಮಾಡಿದ್ದ ರಿಜ್ವಾನ್ ಮಿಚೆನ್ ಸ್ಟಾರ್ಕ್ ಓವರ್ನಲ್ಲಿ ವಿಕೆಟ್ ಒಪ್ಪಿಸಿದರು. ಇದರ ಬೆನ್ನಲ್ಲೇ ಆಸೀಫ್ ಅಲಿ(0), ಶೋಯೆಬ್ ಮಲಿಕ್(1) ಹಾಗೀ ಹಫೀಜ್(1)ರನ್ಗಳಿಕೆ ಮಾಡಿದರು.
ಕೊನೆಯಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದ ಫಖರ್ ಜಮಾನ್ ಕೇವಲ 32 ಎಸೆತಗಳಲ್ಲಿ ಅಜೇಯ 55ರನ್ಗಳಿಕೆ ಮಾಡಿ ತಂಡದ ಮೊತ್ತ 170ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.
ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ 2 ವಿಕೆಟ್, ಕಮಿನ್ಸ್ ಹಾಗೂ ಜಂಪಾ ತಲಾ 1 ವಿಕೆಟ್ ಪಡೆದುಕೊಂಡರು.