ಟೋಕಿಯೋ: ಭಾರತ ವನಿತೆಯರ ಹಾಕಿ ತಂಡ ಅರ್ಜೆಂಟೀನಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 1-2ರಲ್ಲಿ ಸೋಲು ಕಂಡು ನಿರಾಸೆ ಅನುಭವಿಸಿದೆ. ಈ ಮೂಲಕ ಚೊಚ್ಚಲ ಬಾರಿಗೆ ಫೈನಲ್ ಪ್ರವೇಶಿಸುವ ಕನಸು ಕೂಡ ನುಚ್ಚುನೂರಾಗಿದೆ. ಆದರೆ, ಕಂಚಿನ ಪದಕ ಗೆಲ್ಲುವ ಅವಕಾಶವಿದ್ದು, ಶುಕ್ರವಾರ ನಡೆಯುವ ಪಂದ್ಯದಲ್ಲಿ ಗ್ರೇಟ್ ಬ್ರಿಟನ್ ತಂಡವನ್ನು ಎದುರಿಸಲಿದೆ.

ಬುಧವಾರ ಪಂದ್ಯ ಆರಂಭವಾದ ಕೇವಲ 2ನೇ ನಿಮಿಷದಲ್ಲಿ ಗುರ್ಜೀತ್ ಕೌರ್ ಸಿಕ್ಕ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿ ಭಾರತಕ್ಕೆ ಮುನ್ನಡೆ ದೊರೆಕಿಸಿಕೊಟ್ಟರು. ಆದರೆ, ಅರ್ಜೆಂಟೀನಾದ ನೋಯೆಲ್ ಬ್ಯಾರಿಯೊನೊವೊ ಎರಡು ಪೆನಾಲ್ಟಿ ಕಾರ್ನರ್ಗಳನ್ನು ಗೋಲಾಗಿ ಪರಿವರ್ತಿಸಿ ತಂಡ 3ನೇ ಬಾರಿಗೆ ಫೈನಲ್ ಪ್ರವೇಶಿಸುವಂತೆ ಮಾಡಿದರು.
ಅವರು 18ನೇ ನಿಮಿಷದಲ್ಲಿ ಮತ್ತು 36ನೇ ನಿಮಿಷದಲ್ಲಿ ನೋಯೆಲ್ ಸಿಕ್ಕಂತಹ ಪೆನಾಲ್ಟಿ ಕಾರ್ನರ್ ಅನ್ನು ಗೋಲಾಗಿ ಪರಿವರ್ತಿಸಿ ಭಾರತದ ಫೈನಲ್ ಕನಸನ್ನು ನುಚ್ಚುನೂರು ಮಾಡಿದರು.
ಇನ್ನು ಭಾರತ ತಂಡ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಸೋತ ತಂಡದೆದುರು ಭಾರತದ ಮಹಿಳಾ ತಂಡ ಕಂಚಿನ ಪದಕಕ್ಕಾಗಿ ಹೋರಾಡಲಿದೆ.
ಮತ್ತೊಂದು ಸೆಮಿಫೈನಲ್ನಲ್ಲಿ ನೆದೆರ್ಲೆಂಡ್ಸ್ ತಂಡ ಗ್ರೇಟ್ ಬ್ರಿಟನ್ ವಿರುದ್ಧ 5-1 ಗೋಲುಗಳ ಅಂತರದಿಂದ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿದೆ. ಇದೀಗ ಅರ್ಜೆಂಟೀನಾ 2000 ಮತ್ತು 2012ರ ಲಂಡನ್ ಒಲಿಂಪಿಕ್ಸ್ನಲ್ಲೂ ಫೈನಲ್ ತಲುಪಿತ್ತು. ಆದರೆ ಎರಡರಲ್ಲೂ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡಿತ್ತು.
ಇದನ್ನು ಓದಿ: Tokyo Olympics: ಪುರುಷರ ಹಾಕಿಯಲ್ಲಿ ಭಾರತದ ಚಿನ್ನದ ಕನಸು ಭಗ್ನ