ನವದೆಹಲಿ: ಹೊಸ ವಿಶ್ವ ಅಥ್ಲೆಟಿಕ್ಸ್ ರ‍್ಯಾಕಿಂಗ್ ಪಟ್ಟಿ ಬಿಡುಗಡೆಯಾಗಿದೆ. ಟೋಕಿಯೊ ಒಲಿಂಪಿಕ್ಸ್ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ ಎರಡನೇ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಟೋಕಿಯೊ ಒಲಿಂಪಿಕ್ಸ್ನಲ್ಲಿ ಪುರುಷರ ಜಾವೆಲಿನ್ ಥ್ರೋನಲ್ಲಿ ಚಿನ್ನ ಗೆದ್ದ ನೀರಜ್, 1315 ಅಂಕಗಳನ್ನು ಪಡೆದು ವಿಶ್ವ ಅಥ್ಲೆಟಿಕ್ಸ್ ಶ್ರೇಯಾಂಕದಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಜರ್ಮನಿಯ ಜೊಹಾನ್ಸ್ ವೆಟರ್ 1396 ಅಂಕ ಪಡೆದು ಅಗ್ರಸ್ಥಾನದಲ್ಲಿದ್ದಾರೆ. ಪೋಲೆಂಡ್‌ನ ಮಾರ್ಸಿನ್ ಕ್ರುಕೋವ್ಸ್ಕಿ ಮೂರನೇ ಸ್ಥಾನದಲ್ಲಿದ್ದು, ಜೆಕ್ ಗಣರಾಜ್ಯದ ಜಾಕೂಬ್ ವಾಡ್ಲೆಜ್ಚ್ ನಾಲ್ಕನೇ ಸ್ಥಾನ ಮತ್ತು ಜರ್ಮನಿಯ ಜೂಲಿಯನ್ ವೆಬರ್ ಹೆಸರು ಅಥ್ಲೆಟಿಕ್ಸ್ ರ್ಯಾಕಿಂಗ್ನಲ್ಲಿ ಐದನೇ ಸ್ಥಾನದಲ್ಲಿದೆ.
23 ವರ್ಷದ ನೀರಜ್ ಮೊದಲ ಪ್ರಯತ್ನದಲ್ಲಿ 87.03 ಮೀಟರ್ ಹಾಗೂ ಎರಡನೇ ಪ್ರಯತ್ನದಲ್ಲಿ 87.58 ಮೀಟರ್ ಎಸೆದರು. ಆದರೆ ಮೂರನೇ ಪ್ರಯತ್ನ 76.79 ಮೀ.ಗಿಂತ ಕಡಿಮೆ ಎಸೆದಿದ್ದರು. ಇನ್ನು ಎರಡನೇ ಪ್ರಯತ್ನದಲ್ಲಿ ಎಲ್ಲರಿಗಿಂತಲೂ ಹೆಚ್ಚು ದೂರ ಬರ್ಚಿಯನ್ನು ಎಸೆದಿದ್ದರಿಂದ ಚಿನ್ನದ ಪದಕ ಗೆದ್ದು ಸಂಭ್ರಮಿಸಿದರು. 2018ರ ಏಷ್ಯನ್ ಗೇಮ್ಸ್ನಲ್ಲಿಯೂ ನೀರಜ್ ಚಿನ್ನದ ಸಾಧನೆ ಮಾಡಿದ್ದರು.