ತಿರುವನಂತರಪುರಂ: ಭಾರತೀಯ ಒಲಿಂಪಿಕ್ ಕಂಚು ವಿಜೇತೆ ಬಾಕ್ಸರ್ ಲವ್ಲೀನಾ ಬೊರ್ಗೊಹೈನ್ ಇಂದು ಪದ್ಮನಾಭಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು.
ಕೇರಳ ಸಾಂಪ್ರದಾಯಿಕ ಉಡುಪು ಧರಿಸಿ ಕೋಚ್ ಸಂಧ್ಯಾ ಗುರುಂಗ್ ಜೊತೆ ದೇವಸ್ಥಾನಕ್ಕೆ ಭೇಟಿ ನಿಡಿದರು. ಲವ್ಲೀನಾ ಕೇರಳ ವಿಶ್ವವಿದ್ಯಾನಿಲಯದ ಕ್ರೀಡಾ ವಿದ್ಯಾರ್ಥಿವೇತನವನ್ನು ನೀಡಲು ತಿರುವನಂತಪುರಕ್ಕೆ ಆಗಮಿಸಿದ್ದಾರೆ.
ಲವ್ಲೀನಾ 69 ಕೆಜಿ ವಿಭಾಗದಲ್ಲಿ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಸೆಮಿಫೈನಲ್‌ನಲ್ಲಿ ತುರ್ಕಿಯ ಬುಬಾನಾ ಸುರ್ಮೆನೆಲೆ ಎದುರು ಸೋಲು ಅನುಭವಿಸುವ ಮೂಲಕ ಫೈನಲ್ಗೇರುವ ಅವಕಾಶದಿಂದ ವಂಚಿತರಾಗಿದ್ದರು.