ನವದೆಹಲಿ: ಟೋಕಿಯೋ ಒಲಿಂಪಿಕ್ಸ್ನಲ್ಲಿ ದೇಶಕ್ಕೆ ಪದಕ ಗೆದ್ದು ಕೊಟ್ಟ ಕ್ರೀಡಾಪಟುಗಳನ್ನು ಭೇಟಿ ಮಾಡಿದಂತೆಯೇ 2020ರ ಟೋಕಿಯೋ ಪ್ಯಾರಾಲಿಂಪಿಕ್ಸ್ನ ಪದಕ ವಿಜೇತರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ ದೆಹಲಿಯ ನಿವಾಸದಲ್ಲಿ ಆತಿಥ್ಯ ನೀಡಿದ್ದಾರೆ.
ಈ ಬಾರಿ ಪ್ಯಾರಾ-ಅಥ್ಲೀಟ್ಗಳು ಐದು ಚಿನ್ನ, ಎಂಟು ಬೆಳ್ಳಿ ಮತ್ತು ಆರು ಕಂಚು ಸೇರಿದಂತೆ 19 ಪದಕಗಳನ್ನು ಭಾರತಕ್ಕೆ ತಂದು ಕೊಟ್ಟು ಇತಿಹಾಸ ಸೃಷ್ಟಿಸಿದ್ದಾರೆ. ಈ ಮೂಲಕ ಭಾರತವು ಪ್ಯಾರಾಲಿಂಪಿಕ್ಸ್ ಪದಕಗಳ ಪಟ್ಟಿಯಲ್ಲಿ 24ನೇ ಸ್ಥಾನ ಪಡೆಯಿತು.
ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್ ಪ್ರತಿಯೊಬ್ಬ ಭಾರತೀಯನ ನೆನಪಿನಲ್ಲಿ ಉಳಿಯುತ್ತದೆ: ಮೋದಿ
ಟೋಕಿಯೊದಿಂದ ಮರಳಿದ ಅವರನ್ನು ತಮ್ಮ ನಿವಾಸಕ್ಕೆ ಕರೆಯಿಸಿಕೊಂಡ ಪಿಎಂ ಮೋದಿ, ಅಲ್ಲಿ ಕ್ರೀಡಾಪಟುಗಳಿಗೆ ಬೆಳಗಿನ ಉಪಹಾರದ ವ್ಯವಸ್ಥೆ ಮಾಡಿದ್ದರು. ಅವರೊಂದಿಗೆ ಹರಟೆ ಹೊಡೆದು, ಕೆಲ ವಿಷಯಗಳ ಕುರಿತು ಸಂವಾದ ನಡೆಸಿದ್ದಾರೆ. ಇದೇ ವೇಳೆ ಪದಕ ವಿಜೇತ ಕ್ರೀಡಾಪಟುಗಳು ತಮ್ಮ ಆಟೋಗ್ರಾಫ್ ಇರುವ ಬಿಳಿ ಬಣ್ಣದ ಶಾಲನ್ನು ಪ್ರಧಾನಿ ಮೋದಿಗೆ ಉಡುಗೊರೆಯಾಗಿ ನೀಡಿದ್ದಾರೆ.