ಬಾಗಲಕೋಟೆ: ಪದವಿ ಕಾಲೇಜುಗಳು ಆರಂಭಗೊಂಡ ಬೆನ್ನಲ್ಲೇ ಜಿಲ್ಲೆಯಲ್ಲಿನ ಒಟ್ಟು 10 ವಿದ್ಯಾರ್ಥಿಗಳು ಕೊರೊನಾ ಸೋಂಕಿಗೆ ಒಳಗಾಗಿದ್ದು, ಇನ್ನಿತರ ವಿದ್ಯಾರ್ಥಿಗಳು ಹಾಗೂ ಪಾಲಕರಿಗೂ ಆತಂಕವನ್ನುಂಟುಮಾಡಿದೆ.
ಎಂಟು ತಿಂಗಳ ಬಳಿಕ ಪದವಿ ಕಾಲೇಜು ಪ್ರಾರಂಭಗೊಂಡಿದ್ದು, ಮೂರು ದಿನದಲ್ಲಿ ಕಾಲೇಜು ಸಿಬ್ಬಂದಿ, ವಿದ್ಯಾರ್ಥಿಗಳು ಸೇರಿ 1,500 ಜನರ ಆರ್ಟಿಪಿಸಿಆರ್ ಟೆಸ್ಟ್ ಮಾಡಲಾಗಿದೆ. ಆರ್ ಟಿಪಿಸಿಆರ್ ಟೆಸ್ಟ್ ವರದಿ ಇದ್ದರೆ ಮಾತ್ರ ಕಾಲೇಜಿಗೆ ಪ್ರವೇಶ ನೀಡಲಾಗುವುದು ಎಂಬ ಕಾರಣಕ್ಕೆ ಎಲ್ಲ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಒಳಗಾಗಿದ್ದು, ಈ ಪೈಕಿ 10 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದು ದೃಢಪಟ್ಟಿದೆ.
ಈ ಎಲ್ಲ ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಇರುವುದಾಗಿ ವರಿದಿ ಬಂದಿದೆ. ಆದರೆ, ಯಾವುದೇ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಲಕ್ಷಣಗಳಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಹೋಮ್ ಐಸೊಲೇಷನ್ನಲ್ಲಿ ಇರುವಂತೆ ಆರೋಗ್ಯ ಇಲಾಖೆ ಸೂಚಿಸಿದೆ.